More

    ಎನ್​ಡಿಪಿಎಸ್ ಕಾಯ್ದೆಗೆ ಮತ್ತಷ್ಟು ಬಲ, ನಿಯಮಾವಳಿ ರೂಪಿಸಲು ಕ್ರಮ: ಗೃಹ ಸಚಿವ ಬಸವರಾಜ ಬೊಮ್ಮಾಯಿ

    ಬೆಂಗಳೂರು : ಮಾದಕ ವಸ್ತುಗಳ ಸರಬರಾಜು ನಿಯಂತ್ರಣಕ್ಕೆ ರೂಪಿಸಲಾಗಿರುವ ಎನ್​ಡಿಪಿಎಸ್​(ನಾರ್ಕೋಟಿಕ್ ಡ್ರಗ್ಸ್ ಅಂಡ್​​ ಸೈಕ್ಯಾಟ್ರಿಕ್ ಸಬಸ್ಟನ್ಸ್) ಕಾಯ್ದೆಗೆ ರಾಜ್ಯದಲ್ಲಿ ನಿಯಮಾವಳಿ ರೂಪಿಸುವ ಮೂಲಕ ಆ ಕಾಯಿದೆಯನ್ನು ಮತ್ತಷ್ಟು ಬಲಪಡಿಸಲಾಗುವುದು. ಇದರೊಂದಿಗೆ ಮಾದಕ ವಸ್ತುಗಳ ವಿರುದ್ಧದ ನಮ್ಮ ಹೋರಾಟ ಮತ್ತಷ್ಟು ಪ್ರಬಲವಾಗಲಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಶನಿವಾರ ಅಂತರಾಷ್ಟ್ರೀಯ ಮಾದಕ ವಸ್ತುರಹಿತ ದಿನಾಚರಣೆ ಅಂಗವಾಗಿ ಬೆಂಗಳೂರು ನಗರ ಪೊಲೀಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಎನ್​ಡಿಪಿಎಸ್ ಕಾನೂನನ್ನು ರೂಪಿಸಿದೆ. ಈ ಕಾನೂನನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಹಾಗೂ ಮತ್ತಷ್ಟು ಗಟ್ಟಿಯಾಗಿ ಜಾರಿಗೊಳಿಸಬೇಕೆಂಬುದು ನಮ್ಮ ದೃಢ ನಿರ್ಧಾರ. ಇದಕ್ಕಾಗಿ ನಿಯಮಗಳನ್ನು ರೂಪಿಸುವ ಪ್ರಕ್ರಿಯೆ ಆರಂಭವಾಗಿದೆ. ಈ ಸಂಬಂಧ ನ್ಯಾಷನಲ್ ಲಾ ಸ್ಕೂಲ್ ಜತೆ ಸಭೆ ನಡೆದಿದ್ದು, ಅಧ್ಯಯನ ನಡೆಯುತ್ತಿದೆ ಎಂದರು.

    ಇದನ್ನೂ ಓದಿ: ರಾಷ್ಟ್ರಪತಿಗಳ ಭೇಟಿಯಿಂದಾದ ಟ್ರಾಫಿಕ್​ನಲ್ಲಿ ಸಿಲುಕಿದ್ದ ಮಹಿಳೆ ಸಾವು! ಕ್ಷಮೆ ಯಾಚಿಸಿದ ಪೊಲೀಸರು

    ಡಾರ್ಕ್ ವೆಬ್ ಮೂಲಕ ಸರಬರಾಜಾಗುತ್ತಿದ್ದ ಮಾದಕ ವಸ್ತುಗಳನ್ನು ನಮ್ಮ ಪೊಲೀಸರು ನಿಯಂತ್ರಿಸಿದ್ದಾರೆ. ಡಾರ್ಕ್ ವೆಬ್ ಅಪರಾಧ ಪತ್ತೆಯಿಂದ ಹಲವಾರು ಹೊಸ ವಿಚಾರಗಳು ಬೆಳಕಿಗೆ ಬಂದಿವೆ. ಅದರ ಆಧಾರದ ಮೇಲೆ ಹಲವಾರು ದಾಳಿಗಳು ನಡೆದಿವೆ. ಅಂತರಾಷ್ಟ್ರೀಯ ಮಟ್ಟದ ಪ್ಲೇಯರ್​​ಗಳನ್ನು ಪತ್ತೆ ಮಾಡಿ ಬಂಧಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

    ಕರ್ನಾಟಕ ಪೊಲೀಸರ ಬಗ್ಗೆ ಮೆಚ್ಚುಗೆ : ಡ್ರಗ್ಸ್ ವಿರುದ್ಧದ ಹೋರಾಟದಲ್ಲಿ ಕರ್ನಾಟಕ ಪೊಲೀಸರು ಒಳ್ಳೆಯ ಕೆಲಸ ಮಾಡಿದ್ದಾರೆ‌. ಕರ್ನಾಟಕ ಪೊಲೀಸರ ಡ್ರಗ್ ವಿರೋಧಿ ಕಾರ್ಯಾಚರಣೆಯಿಂದ ಬೇರೆ ಎಲ್ಲ ತನಿಖಾ ಏಜೆನ್ಸಿಗಳು ಜಾಗೃತವಾದವು ಅನ್ನುವುದು ಬಹಳ ಮುಖ್ಯ. ಸಾಮಾನ್ಯವಾಗಿ ಇದುವರೆಗೆ ಬೇರೆ ಏಜೆನ್ಸಿಗಳು ಅಪರಾಧ ತಡೆ ಕುರಿತು ಜಾಗೃತಿ ಮೂಡಿಸುತ್ತಿದ್ದವು. ಆದರೆ ಈಗ ಕರ್ನಾಟಕ ಪೊಲೀಸರು ಬೇರೆ ಸಂಸ್ಥೆಗಳನ್ನು ಜಾಗೃತಗೊಳಿಸುತ್ತಿದ್ದಾರೆ ಎಂದು ಹೇಳಲು ಹೆಮ್ಮೆಯಾಗುತ್ತಿದೆ ಎಂದು ಬೊಮ್ಮಾಯಿ ಹೇಳಿದರು.

    3000 ಕೆಜಿ ಡ್ರಗ್ಸ್​ ನಾಶ : 2020-21 ನೇ ಸಾಲಿನಲ್ಲಿ ರಾಜ್ಯದಲ್ಲಿ ವಶಪಡಿಸಿಕೊಳ್ಳಲಾಗಿರುವ 3000 ಕೆಜಿಗಿಂತಲೂ ಹೆಚ್ಚು ತೂಕದ 50 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ನ್ಯಾಯಾಲಯದ ಆದೇಶದ ಪ್ರಕಾರ ನಾಶಪಡಿಸಲಾಗಿದೆ. ಇಷ್ಟು ದೊಡ್ಡ ಪ್ರಮಾಣದ ಮಾದಕ ವಸ್ತುಗಳು ಅಪಾರ ಪ್ರಮಾಣದ ಜನರ ಆರೋಗ್ಯವನ್ನು ಹಾಳು ಮಾಡುತ್ತಿದ್ದವು. ಆ ಅಪಾಯವನ್ನು ನಮ್ಮ ಪೊಲೀಸರು ತಪ್ಪಿಸಿದ್ದಾರೆ ಎಂಬುದು ಹೆಮ್ಮೆಯ ಸಂಗತಿ ಎಂದು ಅವರು ಹೇಳಿದರು.

    ಇದನ್ನೂ ಓದಿ: ಗಂಡಂದಿರ ಕಿರುಕುಳ: ತಂಗಿ ಸತ್ತ 17 ದಿನಕ್ಕೆ ಅಕ್ಕನೂ ಸಾವು! ಇವರಿಬ್ಬರ ದುರಂತ ಕಥೆ ಕೇಳಿದ್ರೆ ಕಣ್ಣೀರು ಬರುತ್ತೆ

    ಅಂತರಾಷ್ಟ್ರೀಯ ಮಾದಕ ವಸ್ತು ರಹಿತ ದಿನಾಚರಣೆ ಅಂಗವಾಗಿ ಬೊಮ್ಮಾಯಿ ಅವರು, ಪೊಲೀಸರಿಗೆ ಮಾದಕ ವಸ್ತು ತಡೆ ಮತ್ತು ನಾಶಪಡಿಸುವ ಕುರಿತು ಪ್ರಮಾಣ ವಚನ ಬೋಧಿಸಿದರು. ಇದುವರೆಗಿನ ಡ್ರಗ್ಸ್ ವಿರುದ್ಧದ ಹೋರಾಟದ ಇತಿಹಾಸದಲ್ಲಿ ಅತಿ ಹೆಚ್ಚು ಪ್ರಮಾಣದ ವಿವಿಧ ರೀತಿಯ ಮಾದಕ ವಸ್ತುಗಳನ್ನು ಒಂದೇ ವರ್ಷದಲ್ಲಿ ವಶಪಡಿಸಿಕೊಂಡಿರುವುದು ಐತಿಹಾಸಿಕ ಎಂದರು.

    ಇದು ಕರ್ನಾಟಕ ಪೊಲೀಸರ ಸಣ್ಣ ಸಾಧನೆಯೇನಲ್ಲ. ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದ ದಾಳಿಗಳು ನಡೆದವು. ಇದರ ಜಾಡು ಹಿಡಿದು ರಾಜ್ಯದ ಇತರ ಜಿಲ್ಲೆಗಳಲ್ಲಿ ಸಕ್ರಿಯವಾಗಿದ್ದ ಮಾದಕ ವಸ್ತುಗಳ ಜಾಲವನ್ನು ನಮ್ಮ ಪೊಲೀಸರು ಭೇದಿಸಿದರು. ಅದೆಷ್ಟೋ ಯುವಕರು, ಕುಟುಂಬಗಳು ಮಾದಕ ವಸ್ತುಗಳಿಂದ ಹಾಳಾಗುವುದನ್ನು ತಪ್ಪಿಸಿದರು. ಡ್ರಗ್ಸ್ ವಿರುದ್ಧದ ನಮ್ಮ ಹೋರಾಟ ನಿಲ್ಲುವುದಿಲ್ಲ. ಡ್ರಗ್ಸ್ ಮಾರಾಟ ಜಾಲವನ್ನು ಮೆಟ್ಟಿ ನಿಲ್ಲುವುದೇ ನಮ್ಮ ಸಂಕಲ್ಪ. ಡಾರ್ಕ್ ವೆಬ್ ಮೂಲಕ ಡ್ರಗ್ಸ್ ಜಾಲ ಬೇಧಿಸಿದ ಮೊದಲ ರಾಜ್ಯ ಕರ್ನಾಟಕ ಎಂದು ಬಸವರಾಜ್ ಬೊಮ್ಮಾಯಿ ಹೇಳಿದರು.

    ಡ್ರಗ್ಸ್ ವಿರುದ್ಧ ಜಾಗೃತಿ ಮೂಡಿಸಲಿದ್ದಾರೆ ನಟ ಪಂಕಜ್​ ತ್ರಿಪಾಠಿ

    ಆರೋಪಿ ಸುಶೀಲ್​ಕುಮಾರ್​ ಜೊತೆ ಪೊಲೀಸರ ಸೆಲ್ಫಿ ಸೆಷನ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts