25.1 C
Bangalore
Friday, December 6, 2019

ಅಡಕೆ ಹಾನಿ ಅಪಪ್ರಚಾರ

Latest News

ಯೋಗ ತರಬೇತಿಗೆ ಆಸ್ಟ್ರೇಲಿಯಾದಿಂದ ಆಹ್ವಾನ, ಬಳ್ಳಾರಿ ಸಾಧನಾ ಯೋಗ ಕೇಂದ್ರದ ರೂಪಾ ಮುರಳೀಧರ್ ಹೇಳಿಕೆ

ಬಳ್ಳಾರಿ: ಆಸ್ಟ್ರೇಲಿಯಾದ ಜನರಿಗೆ ಯೋಗ ಪದ್ಧತಿ ಬಗ್ಗೆ ತುಂಬಾ ಆಸಕ್ತಿ ಇದೆ. ಸೇವಾ ಆಸ್ಟ್ರೇಲಿಯಾ ಸಂಸ್ಥೆ ಮೂಲಕ ಆಸ್ಟ್ರೇಲಿಯಾದಲ್ಲಿ ಯೋಗ ತರಬೇತಿ ನೀಡಲು...

ಸೆನ್ಸೆಕ್ಸ್​ 334 ಅಂಶಕ್ಕೂ ಹೆಚ್ಚು ಕುಸಿತ: ನಿಫ್ಟಿ 12,000ಕ್ಕೂ ಕೆಳಕ್ಕೆ…

ಮುಂಬೈ: ಷೇರುಪೇಟೆಯ ವಾರಾಂತ್ಯದ ದಿನದ ವಹಿವಾಟಿನ ಕೊನೆಗೆ ಬಾಂಬೆ ಸ್ಟಾಕ್​ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್​ 334 ಅಂಶ ಕುಸಿತ ಮತ್ತು ನ್ಯಾಷನಲ್...

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

ಮಂಗಳೂರು: ಅಡಕೆ ಆರೋಗ್ಯಕ್ಕೆ ಹಾನಿಕಾರಕ ಎನ್ನುವುದು ಏಕಪಕ್ಷೀಯ ವಾದ. ಮಾಹಿತಿ ಕೊರತೆಯಿಂದ ಅಡಕೆ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಅಡಕೆ ಆರೋಗ್ಯಕ್ಕೆ ಹಾನಿಕರ ಅಲ್ಲ ಎನ್ನುವುದನ್ನು ಸಂಶೋಧನಾ ಪರಾಮರ್ಶನ ಗ್ರಂಥದ ಮೂಲಕ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬೇಕು.
-ಹೀಗೆಂದವರು ಕೃಷಿ, ಆರ್ಥಿಕ ಡಾ.ವಿಘ್ನೇಶ್ವರ ವರ್ಮುಡಿ.
ನಗರದ ಕೇಂದ್ರ ಕಚೇರಿಯಲ್ಲಿ ಬುಧವಾರ ಕ್ಯಾಂಪ್ಕೊ ದಿನಾಚರಣೆ ಹಿನ್ನೆಲೆಯಲ್ಲಿ ಉಪನ್ಯಾಸ ನೀಡಿದ ಅವರು, ಅಡಕೆ ಉತ್ಪನ್ನಗಳು ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಹಲವಾರು ಸಂಶೋಧನೆಗಳು ದೃಢಪಡಿಸಿವೆ. ಕ್ಯಾಂಪ್ಕೊ ಸಂಸ್ಥೆ ಈ ಎಲ್ಲ ಸಂಶೋಧಕರನ್ನು ಒಗ್ಗೂಡಿಸಿ ಅಡಕೆಯ ಔಷಧೀಯ ಗುಣ ಬಗ್ಗೆ ಪರಾಮರ್ಶನ ಗ್ರಂಥ ರಚಿಸಿ ನ್ಯಾಯಾಲಯದಲ್ಲಿ ಸಾಬೀತು ಪಡಿಸುವ ಜವಾಬ್ದಾರಿ ವಹಿಸಬೇಕು ಎಂದು ಸಲಹೆ ನೀಡಿದರು.
ಕೃಷಿ, ಜಲತಜ್ಞ ಶ್ರೀಪಡ್ರೆ ಅವರನ್ನು ಕ್ಯಾಂಪ್ಕೊ ವತಿಯಿಂದ ಸನ್ಮಾನಿಸಲಾಯಿತು. ಹಲಸು ಭವಿಷ್ಯದ ಆಶಾದಾಯಕ ಬೆಳೆ. ಹಲಸು ಬೆಳೆಯನ್ನು ನಿರ್ಲಕ್ಷಿಸಬಾರದು. ಕ್ಯಾಂಪ್ಕೊ ಹಲಸು ಖರೀದಿಗೆ ಮುಂದಾಗಬೇಕು ಎಂದು ಶ್ರೀ ಪಡ್ರೆ ತಿಳಿಸಿದರು.
ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಶಂಕರನಾರಾಯಣ ಭಟ್ ಕೆ. ಸ್ವಾಗತಿಸಿ, ವ್ಯವಸ್ಥಾಪಕ ನಿರ್ದೇಶಕ ಸುರೇಶ್ ಭಂಡಾರಿ ಎಂ. ವಂದಿಸಿದರು. ಟಿ.ಎಸ್.ಭಟ್ ಕಾರ್ಯಕ್ರಮ ನಿರೂಪಿಸಿದರು.

ಸಂಶೋಧನೆಗೆ ಗಮನ ಹರಿಸಿ: ಕ್ಯಾಂಪ್ಕೊ ದಿನಾಚರಣೆ ಉದ್ಘಾಟಿಸಿದ ಸಂಸ್ಥೆ ಸ್ಥಾಪಕ ನಿರ್ದೇಶಕ ಎಲ್.ತಿಮ್ಮಪ್ಪ ಹೆಗಡೆ, ಕ್ಯಾಂಪ್ಕೊ ರೈತರ ಆಶೋತ್ತರ ಈಡೇರಿಸಿದ ಸಂಸ್ಥೆಯಾಗಿ ಬೆಳೆದು ನಿಂತಿದೆ. ಸಂಶೋಧನಾ ರಂಗಕ್ಕೆ ಹೆಚ್ಚಿನ ಒತ್ತು ನೀಡಬೇಕು. ಅಡಕೆಯ ಮೌಲ್ಯವರ್ಧಿತ ಉತ್ಪನ್ನ ಸಿದ್ಧಪಡಿಸಿದರೆ, ಹೆಚ್ಚಿನ ಮಾರುಕಟ್ಟೆ ಒದಗಿಸಬಹುದು ಎಂದರು.

ಒಂದು ತಿಂಗಳಲ್ಲಿ ಅಂತಿಮ ವರದಿ: ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಸಿಪಿಸಿಆರ್‌ಐ ಸಂಸ್ಥೆ ಅಧ್ಯಯನ ನಡೆಸಿ ಈಗಾಗಲೇ ಅಡಕೆ ಆರೋಗ್ಯಕರ ಎಂಬ ಬಗ್ಗೆ ಮಧ್ಯಂತರ ವರದಿ ಸಲ್ಲಿಸಿದೆ. ಮುಂದಿನ ಒಂದು ತಿಂಗಳಲ್ಲಿ ಅಂತಿಮ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಲಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ತಿಳಿಸಿದರು. ಕ್ಯಾಂಪ್ಕೊ ವತಿಯಿಂದ ತೆಂಗಿನ ಮೌಲ್ಯವರ್ಧಿತ ಉತ್ಪನ್ನಗಳ ಘಟಕ ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಕ್ಯಾಂಪ್ಕೊ ತೆಂಗಿನಕಾಯಿ ಖರೀದಿ ಮಾಡಲಿದೆ. ಬೆಳೆಗಾರರು ಅಡಕೆಯನ್ನು ಮಾತ್ರ ನಂಬದೆ, ಸಮಗ್ರ ಕೃಷಿ ಅಳವಡಿಸಿಕೊಳ್ಳಬೇಕು ಎಂದರು.

೨೦೨೦ರಲ್ಲಿ ತಂಬಾಕು ನಿಷೇಧದ ಕರಿನೆರಳು ಗೋಚರಿಸಿದೆ. ತಂಬಾಕು ನಿಷೇಧವಾದರೆ ಅಡಕೆ ಮಾರುಕಟ್ಟೆ ಗಣನೀಯ ಪ್ರಮಾಣದಲ್ಲಿ ಕುಸಿಯಲಿದೆ. ಈ ಹಿನ್ನೆಲೆಯಲ್ಲಿ ಅಡಕೆಯ ಪರ್ಯಾಯ ಬಳಕೆ ಬಗ್ಗೆ ಸಂಶೋಧನೆ ನಡೆಯಬೇಕಿದೆ. ಬೆಳೆಗಾರರ ರಕ್ಷಣೆಗೆ ತೆಂಗಿನಕಾಯಿ ಖರೀದಿಗೆ ಕ್ಯಾಂಪ್ಕೊ ಆದ್ಯತೆ ನೀಡಬೇಕು.
|ವಿಘ್ನೇಶ್ವರ ವರ್ಮುಡಿ, ಕೃಷಿ-ಆರ್ಥಿಕ ತಜ್ಞ

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...