More

    ಖಾಸಗಿ ಶಿಕ್ಷಣ ಸಂಸ್ಥೆ ನಡೆಸುವುದು ಸವಾಲಿನ ಕೆಲಸ

    ಮದ್ದೂರು: ಗ್ರಾಮಾಂತರ ಪ್ರದೇಶದಲ್ಲಿ ಮಾನಸ ಶಿಕ್ಷಣ ಸಂಸ್ಥೆಯನ್ನು ಸ್ಥಾಪನೆ ಮಾಡುವ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ ಎಂದು ಸರ್ಕಲ್ ಇನ್‌ಸ್ಪೆಕ್ಟರ್ ವೆಂಕಟೇಗೌಡ ಮೆಚ್ಚುಗೆ ವ್ಯಕ್ತಪಡಿಸಿದರು.


    ತಾಲೂಕಿನ ಬೆಸಗರಹಳ್ಳಿ ಗ್ರಾಮದ ಮಾನಸ ವಿದ್ಯಾಸಂಸ್ಥೆ ಹಾಗೂ ಮಾನಸ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಬುಧವಾರ ಆಯೋಜಿಸಿದ್ದ ಮಾನಸೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು ಪ್ರಸ್ತುತ ಸವಾಲಿನ ಕೆಲಸವಾಗಿದೆ. ಅಂತಹದರಲ್ಲಿ ನಗರ ಪ್ರದೇಶಗಳಿಗೆ ಹೋಲಿಕೆ ಮಾಡಿಕೊಂಡರೆ ಮಾನಸ ವಿದ್ಯಾ ಸಂಸ್ಥೆ ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಮನೆ ಮಾತಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.


    ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚೆಲುವಯ್ಯ ಮಾತನಾಡಿ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಫಲಿತಾಂಶದಲ್ಲಿ ಮಾನಸ ವಿದ್ಯಾ ಸಂಸ್ಥೆ ತಾಲೂಕಿನಲ್ಲಿ ಹೊಸ ಮೈಲಿಗಲ್ಲನ್ನು ಸೃಷ್ಟಿ ಮಾಡಿದೆ. ಶಿಕ್ಷಣದ ಜತೆಗೆ ವಿದ್ಯಾರ್ಥಿಗಳಿಗೆ ಕರಾಟೆ, ಸಂಗೀತ ಶಿಕ್ಷಣ ಕ್ರೀಡೆ ಸಾಂಸ್ಕೃತಿಕ ಚಟುವಟಿಕೆ ಸೇರಿದಂತೆ ಇತರ ಚಟುವಟಿಕೆಗಳಲ್ಲಿ ತೊಡಗಿಸುವ ಮೂಲಕ ಮಕ್ಕಳಲ್ಲಿ ಮನೋಸ್ಥೈರ್ಯ ತುಂಬುತ್ತಿರುವುದು ಹೆಮ್ಮೆಯ ಸಂಗತಿ. ಕಡಿಮೆ ಶುಲ್ಕದಲ್ಲಿ ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಮಾನಸ ವಿದ್ಯಾಸಂಸ್ಥೆ ಗ್ರಾಮೀಣ ಭಾಗದ ಶಿಕ್ಷಣ ಸಂಜೀವಿನಿಯಾಗಿದೆ ಎಂದರು.


    ಸಂಸ್ಥೆಯ ಅಧ್ಯಕ್ಷ ವಿ.ಕೆ.ಜಗದೀಶ್ ಮಾತನಾಡಿ, ನಮ್ಮ ಸಂಸ್ಥೆಯಿಂದ ಅತ್ಯಧಿಕ ಅಂಕಗಳಿಸಿ ಸರ್ಕಾರಿ ಕೋಟದಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಹೋಗುವ ವಿದ್ಯಾರ್ಥಿಗಳಿಗೆ 1 ಲಕ್ಷ ರೂ. ನಗದು ಪುರಸ್ಕಾರವನ್ನು ನೀಡಲಾಗುವುದು ಎಂದು ಘೋಷಿಸಿದರು.
    ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವಿದ್ಯಾರ್ಥಿಗಳು ವಿವಿಧ ಹಾಡುಗಳಿಗೆ ವಿಭಿನ್ನ ನೃತ್ಯ ಮಾಡುವ ಮೂಲಕ ಸಭಿಕರ ಗಮನ ಸೆಳೆದರು.
    ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಶಿವರಾಮೇಗೌಡ, ರಾಜ್ಯ ವಕೀಲರ ಪರಿಷತ್ತಿನ ಸದಸ್ಯ ಮಧುಸೂದನ್, ನಿವೃತ್ತ ಪ್ರಾಂಶುಪಾಲ ಎ.ಎಸ್.ರವಿ, ಬಿಇಒ ಸಿ.ಎಚ್.ಕಾಳಿರಯ್ಯ, ವಿಷಯ ಪರಿವೀಕ್ಷಕ ನಂಜರಾಜು, ಶಿಕ್ಷಣ ಸಂಯೋಜಕ ಲೋಕೇಶ್, ಮಾನಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ನಾಗರಾಜು, ಶೈಕ್ಷಣಿಕ ಸಲಹೆಗಾರ ಎಚ್.ಪಿ.ನಿಂಗರಾಜು, ಪ್ರಾಂಶುಪಾಲರಾದ ಟಿ.ಸಿ.ಪ್ರವೀಣ್‌ಕುಮಾರ್, ಆರ್.ಪಲ್ಲವಿ, ಮುಖ್ಯಶಿಕ್ಷಕರಾದ ಬಿ.ಎಂ.ಬಸವರಾಜು, ಶರತ್, ಬಿ.ವೈ.ರಮೇಶ್, ಕಲಾವತಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts