ನವದೆಹಲಿ: ಡಾಲರ್ ಎದುರು ರೂಪಾಯಿ ಬೆಲೆ ಕುಸಿತವಾಗುತ್ತಿದ್ದರೂ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರು ಅದಕ್ಕೆ ಸ್ಪಷ್ಟನೆ ನೀಡಿದ್ದಲ್ಲದೆ, ಸೂಕ್ತ ಸಮಜಾಯಿಷಿಯನ್ನು ಕೂಡ ಕೊಟ್ಟಿದ್ದಾರೆ. ಆ ಮೂಲಕ ದೇಶದಲ್ಲಿ ಆರ್ಥಿಕ ಸ್ಥಿತಿ ಸಮಂಜಸವಾಗಿಯೇ ಇದೆ ಎಂಬುದನ್ನೂ ಒತ್ತಿ ಹೇಳಿದ್ದಾರೆ.
ಇಂದು ಇಂಟರ್ನ್ಯಾಷನಲ್ ಮಾನಿಟರಿ ಫಂಡ್ (ಐಎಂಎಫ್), ವಿಶ್ವಬ್ಯಾಂಕ್ ವಾರ್ಷಿಕ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ನಿರ್ಮಲಾ ಸೀತಾರಾಮನ್ ಈ ಸಮರ್ಥನಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.
ಭಾರತೀಯ ಅರ್ಥವ್ಯವಸ್ಥೆಯ ಮೂಲಭೂತ ಅಂಶಗಳು ಶಕ್ತಿಯುತವಾಗಿವೆ ಹಾಗೂ ಜಗತ್ತಿನ ಇತರೆಡೆಗೆ ಹೋಲಿಸಿಕೊಂಡರೆ ಚೆನ್ನಾಗಿಯೇ ಇದೆ ಎಂದು ಹೇಳಿಕೊಂಡಿರುವ ಅವರು, ರೂಪಾಯಿ ಬೆಲೆ ಕುಸಿತವಾಗುತ್ತಿಲ್ಲ, ಡಾಲರ್ ಶಕ್ತಿಯುತವಾಗುತ್ತಿದೆಯಷ್ಟೇ ಎಂದೂ ಹೇಳಿದ್ದಾರೆ.
ಬದುಕಿದ್ದ ವೃದ್ಧೆಯನ್ನೇ ಕಚ್ಚಿ ಕಚ್ಚಿ ತಿಂದ ಬೀದಿನಾಯಿಗಳು!; ಸಾರ್ವಜನಿಕರಿಂದ ಅಂತ್ಯಸಂಸ್ಕಾರ..