More

    ಇಂದು ₹600 ಕೋಟಿ ಸ್ಮಾರ್ಟ್ ಲೋಕಾರ್ಪಣೆ;  ಡಿಜಿಟಲ್ ಗ್ರಂಥಾಲಯಕ್ಕೆ ಸಿಎಂ ಬೊಮ್ಮಾಯಿ ಚಾಲನೆ

    ತುಮಕೂರು: ಸ್ಮಾರ್ಟ್‌ಸಿಟಿ ಯೋಜನೆ ಅಡಿ 600 ಕೋ. ರೂ. ವೆಚ್ಚದಲ್ಲಿ ನಿರ್ಮಿಸಿರುವ ವಿವಿಧ ಯೋಜನೆಗಳ ಲೋಕಾರ್ಪಣೆ ಹಾಗೂ ಫಲಾನುಭವಿಗಳ ಸಮ್ಮೇಳನದಲ್ಲಿ ಮಾ.5ರಂದು ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾದ ಗೃಹ ಸಚಿವ ಆರಗ ಜ್ಞಾನೇಂದ್ರ ಶನಿವಾರ ಅಂತಿಮ ಹಂತದ ಸಿದ್ಧತೆಗಳನ್ನು ಪರಿಶೀಲಿಸಿದರು.

    ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಮಧ್ಯಾಹ್ನ 1.30ಕ್ಕೆ ಜಿಲ್ಲಾಡಳಿತ, ಜಿಪಂ, ಮಹಾನಗರ ಪಾಲಿಕೆ ಹಾಗೂ ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಸಹಯೋಗದಲ್ಲಿ 600 ಕೋ. ರೂ., ವೆಚ್ಚದಲ್ಲಿ ಕೈಗೊಳ್ಳಲಾಗಿರುವ ಯೋಜನೆಗಳ ಲೋಕಾರ್ಪಣೆ ಹಾಗೂ ಫಲಾನುಭವಿಗಳ ಸಮ್ಮೇಳನ ಆಯೋಜಿಸಲಾಗಿದೆ.

    ಅಲ್ಪಸಂಖ್ಯಾತರ ಕಟ್ಟಡಗಳ ಉದ್ಘಾಟನೆ:ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಆಜಾದ್ ಭವನ ಮತ್ತು ಉಪ್ಪಾರಹಳ್ಳಿ ಸಾಮಾನ್ಯ ಸೇವಾ ಕೇಂದ್ರ ಹಾಗೂ ಮೌಲಾನಾ ಆಜಾದ್ ಮಾದರಿ ಶಾಲೆಯ ಹೆಚ್ಚುವರಿ ಕೊಠಡಿಗಳ ನಿರ್ಮಾಣ, ಗುಂಚಿಚೌಕ, ನೂತನ ಕಟ್ಟಡಗಳ ಉದ್ಘಾಟನಾ ಕಾರ್ಯಕ್ರಮವನ್ನು ಸಹ ಇದೇ ವೇಳೆ ಏರ್ಪಡಿಸಲಾಗಿದೆ.

    ಸ್ಮಾರ್ಟ್‌ಸಿಟಿ ಯೋಜನೆಗಳ ಲೋಕಾರ್ಪಣೆ: 88 ಕೋ.ರೂ. ವೆಚ್ಚದ ಕ್ಯಾತಸಂದ್ರ-ಗುಬ್ಬಿ ಗೇಟ್‌ವರೆಗಿನ ಹೊರವರ್ತುಲ ರಸ್ತೆ, 54.56 ಕೋ.ರೂ., ವೆಚ್ಚದಲ್ಲಿ ನಿರ್ಮಿಸಿರುವ ಸುಸಜ್ಜಿತ ಮಹಾತ್ಮ ಗಾಂಧಿ ಕ್ರೀಡಾಂಗಣ ಹಾಗೂ 26.59 ಅತ್ಯಾಧುನಿಕ ಡಿಜಿಟೆಲ್ ಲೈಬ್ರರಿ ಸೇರಿದಂತೆ ವಿವಿಧ ಯೋಜನೆಗಳನ್ನು ಸಿಎಂ ಲೋಕಾರ್ಪಣೆ ಮಾಡಲಿದ್ದಾರೆ.

    25 ಸಾವಿರ ಫಲಾನುಭವಿಗಳ ನಿರೀಕ್ಷೆ: ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಿಂದ ವಿವಿಧ ಯೋಜನೆಗಳ 25000 ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆತರಲಿದ್ದು ಸೂಕ್ತ ವ್ಯವಸ್ಥೆ ಮಾಡಲಾಗಿದೆ. ರಾಜ್ಯ ರಸ್ತೆ ಸಾರಿಗೆ ಹಾಗೂ ಖಾಸಗಿ ಸೇರಿದಂತೆ 358 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ಎಲ್ಲ ಗ್ರಾಪಂಗಳಿಂದ ಸಾರಿಗೆ ವ್ಯವಸ್ಥೆ ಮಾಡಲಾಗಿದ್ದು, ಫಲಾನುಭವಿಗಳನ್ನು ಮಧ್ಯಾಹ್ನ 12ರೊಳಗೆ ಕಾರ್ಯಕ್ರಮಕ್ಕೆ ಕರೆತರುವ. ಮುಗಿದ ಬಳಿಕ ಕರೆದೊಯ್ಯುವ ಜವಾಬ್ದಾರಿಯನ್ನು ಸ್ಥಳೀಯ ಗ್ರಾಪಂ ಪಿಡಿಒ ಹಾಗೂ ಗ್ರಾಮಲೆಕ್ಕಾಧಿಕಾರಿಗೆ ವಹಿಸಲಾಗಿದೆ.

    ಇಂದು ₹600 ಕೋಟಿ ಸ್ಮಾರ್ಟ್ ಲೋಕಾರ್ಪಣೆ;  ಡಿಜಿಟಲ್ ಗ್ರಂಥಾಲಯಕ್ಕೆ ಸಿಎಂ ಬೊಮ್ಮಾಯಿ ಚಾಲನೆ

    ಕಾರ್ಯಕ್ರಮದ ಅಂತಿಮ ಸಿದ್ಧತೆಯನ್ನು ಸಚಿವ ಆರಗ ಜ್ಞಾನೇಂದ್ರ ಪರಿಶೀಲಿಸಿದರು. ಜಿ.ಬಿ.ಜ್ಯೋತಿಗಣೇಶ್, ವೈ.ಎಸ್.ಪಾಟೀಲ್, ರಾಹುಲ್‌ಕುಮಾರ್ ಶಹಪೂರವಾಡ್‌ಡಾ.ಕೆ.ವಿದ್ಯಾಕುಮಾರಿ ಇದ್ದರು.

    ಫಲ-ಪುಷ್ಪ ಪ್ರದರ್ಶನ: ತೋಟಗಾರಿಕೆ ಇಲಾಖೆಯಿಂದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಈ ಸಾಲಿನ ಫಲ-ಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಫಲ-ಪುಷ್ಪ ಪ್ರದರ್ಶನದಲ್ಲಿ ಈ ಬಾರಿ ಶಿವಕುಮಾರ ಶ್ರೀಗಳು, ಸಿದ್ದೇಶ್ವರ ಶ್ರೀಗಳು, ಪುನೀತ್ ರಾಜ್‌ಕುಮಾರ್, ಅಬ್ದುಲ್ ಕಲಾಂ ಕಲಾಕೃತಿಗಳು ಗಮನಸೆಳೆಯಲಿವೆ. ಸಿಎಂ ಬೊಮ್ಮಾಯಿ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದು 3 ದಿನಗಳ ಪ್ರದರ್ಶನ ಇರಲಿದೆ.

    ಸಿಎಂ, ಸಚಿವರು ಭಾಗಿ: ಅಂತಾರಾಷ್ಟ್ರೀಯ ಮಟ್ಟದ ಮಹಾತ್ಮ ಗಾಂಧಿ ಕ್ರೀಡಾಂಗಣವನ್ನು ಸಿಎಂ ಬಸವರಾಜು ಬೊಮ್ಮಾಯಿ ಉದ್ಘಾಟಿಸಿದ ಬಳಿಕ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಏರ್ಪಡಿಸುವ ವೇದಿಕೆ ಕಾರ್ಯಕ್ರಮದಲ್ಲಿ ಉಳಿದೆಲ್ಲ್ಲ ಯೋಜನೆಗಳ ಲೋಕಾರ್ಪಣೆ ಮಾಡುವರು. ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವರಾದ ಜೆ.ಸಿ.ಮಾಧುಸ್ವಾಮಿ, ಭೈರತಿ ಬಸವರಾಜು, ಆರ್.ಅಶೋಕ್, ಬಿ.ಸಿ.ನಾಗೇಶ್, ಡಾ.ಕೆ.ಸುಧಾಕರ್, ಕೆ.ಸಿ.ನಾರಾಯಣಗೌಡ, ಎಂ.ಮುನಿರತ್ನ ಉಪಸ್ಥಿತರಿರುವರು. ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸುವರು. ಸಂಸದರಾದ ಜಿ.ಎಸ್.ಬಸವರಾಜು, ಜಗ್ಗೇಶ್ ಸೇರಿದಂತೆ ಎಲ್ಲ ಶಾಸಕರು, ಉಪಸ್ಥಿತರಿರುವರು. ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿಪಂ ಸಿಇಒ ಡಾ.ಕೆ.ವಿದ್ಯಾಕುಮಾರಿ, ಪಾಲಿಕೆ ಆಯುಕ್ತ ಎಚ್.ವಿ.ದರ್ಶನ್, ಪೊಲೀಸ್ ಅಧೀಕ್ಷಕ ರಾಹುಲ್‌ಕುಮಾರ್ ಶಹಪೂರ್‌ವಾಡ್ ಭಾಗವಹಿಸುವರು.

    ಇಂದು ₹600 ಕೋಟಿ ಸ್ಮಾರ್ಟ್ ಲೋಕಾರ್ಪಣೆ;  ಡಿಜಿಟಲ್ ಗ್ರಂಥಾಲಯಕ್ಕೆ ಸಿಎಂ ಬೊಮ್ಮಾಯಿ ಚಾಲನೆ
    ಲೋಕಾರ್ಪಣೆಗೆ ಸಿದ್ಧಗೊಂಡಿರುವ ಮಹಾತ್ಮಗಾಂಧಿ ಸ್ಟೇಡಿಯಂನಲ್ಲಿ ಅಂತಿಮ ಸಿದ್ಧತೆಗಳನ್ನು ಸಚಿವ ಆರಗ ಜ್ಞಾನೇಂದ್ರ ಪರಿಶೀಲಿಸಿದರು. ಜಿ.ಬಿ.ಜ್ಯೋತಿಗಣೇಶ್, ವೈ.ಎಸ್.ಪಾಟೀಲ ಇದ್ದರು.

    ಪ್ರಕರಣ ತನಿಖೆ ಮಾಡಲಾಗುತ್ತಿದೆ: ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಮಗ ಕಮಿಷನ್ ಸ್ವೀಕಾರ ಹಾಗೂ ಅವರ ಮನೆಯಲ್ಲಿ ಸಿಕ್ಕ 6 ಕೋಟಿ ರೂ. ಹಣದ ವಿಚಾರವಾಗಿ ತನಿಖೆ ನಡೆಯುತ್ತಿದೆ. ಇದರಲ್ಲಿ ಸರ್ಕಾರ ಮೂಗು ತೂರಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದರು. ಹಿಂದಿನ ಸರ್ಕಾರಗಳ ರೀತಿ ಅವರನ್ನು ಹಿಡಿ, ಇವರನ್ನು ಬಿಡು ಎಂಬ ಪ್ರಶ್ನೆಯೇ ಇಲ್ಲ. ತಾವು ಮಾಡಿರುವ ಭ್ರಷ್ಟಾಚಾರದಿಂದ ತಪ್ಪಿಸಿಕೊಳ್ಳಲೆಂದೇ ಸಿದ್ದರಾಮಯ್ಯ ಲೋಕಾಯುಕ್ತ ಡಮ್ಮಿ ಮಾಡಿ, ಎಸಿಬಿ ಜಾರಿಗೆ ತಂದರು ಎಂದು ಟೀಕಿಸಿದರು. ಅಲ್ಲದೆ ತನಗೆ ಬೇಕಾದ ಅಧಿಕಾರಿಗಳನ್ನು ಹಾಕಿಕೊಂಡು ಏನೇನು ಮಾಡಿದರು ಎಂಬುದು ಗೊತ್ತಿದೆ. ನ್ಯಾಯಾಲಯವೇ ಎಸಿಬಿ ರದ್ದು ಮಾಡಿ, ಲೋಕಾಯುಕ್ತವನ್ನು ತಂದಿದೆ. ಲೋಕಾಯುಕ್ತಕ್ಕೆ ಎಲ್ಲ ರೀತಿಯ ಬೆಂಬಲ ನೀಡಿದ್ದೇವೆ. ಮಾಡಾಳು ವಿರೂಪಾಕ್ಷ ಅವರದ್ದು ವೈಯಕ್ತಿಕ ವಿಚಾರ, ಕಾಂಗ್ರೆಸ್‌ನವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದರು. ಅರಸೀಕೆರೆಯಲ್ಲಿ ನಡೆದ ಬೆಂಗಾವಲು ವಾಹನ ಡಿಕ್ಕಿ ಎಂಬ ವಿಚಾರ ಸುಳ್ಳು, ನನಗೆ ಬೆಂಗಾವಲಿಗೆ ಇದ್ದ ಎರಡು ವಾಹನಗಳು ನನ್ನ ಜತೆಗೆ ಇವೆ. ಆದರೆ, ನಮ್ಮ ಹಿಂದೆ ಬಂದ ಪೊಲೀಸ್ ವಾಹನವೊಂದು ಡಿಕ್ಕಿಯಾಗಿದೆ. ಅವರಿಗೆ ಕಾನೂನು ರೀತಿ ಪರಿಹಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದರು.

    ಪಾರ್ಕಿಂಗ್ ವ್ಯವಸ್ಥೆ: ಬಸ್‌ಗಳ ನಿಲುಗಡೆಗೆ ಸರ್ಕಾರಿ ಪಾಲಿಟೆಕ್ನಿಕ್ ಹಿಂಭಾಗ, ಎಸ್‌ಎಸ್‌ಪುರಂನ ಸರ್ವೋದಯ ಹೈಸ್ಕೂಲ್ ಬಳಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಜೂನಿಯರ್ ಕಾಲೇಜು ಬಳಿ ಫಲಾನುಭವಿಗಳನ್ನು ಇಳಿಸಿದ ಬಳಿಕ ಬಸ್‌ಗಳನ್ನು ನಿಗದಿತ ಸ್ಥಳಗಳಲ್ಲಿ ಪಾರ್ಕಿಂಗ್ ಮಾಡಲಾಗುವುದು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts