

ವಿಜಯವಾಣಿ ಸುದ್ದಿಜಾಲ ಕಿನ್ನಿಗೋಳಿ
ಗ್ರಾಮೀಣ ಮಕ್ಕಳು ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸುವಂತೆ ಮಾಡಲು ಕೆನರಾ ಬ್ಯಾಂಕ್‌ನ ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯ ಮೂಲಕ ಅನೇಕ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ. ಮೂಲಸೌಕರ್ಯ ಮತ್ತು ಒಳ್ಳೆಯ ಶಿಕ್ಷಣದಿಂದ ಮಕ್ಕಳ ಶೈಕ್ಷಣಿಕ ಗುಣಮಟ್ಟ ಉತ್ತಮವಾಗಿ ರೂಪುಗೊಳ್ಳುತ್ತದೆ. ನಮಗೆ ಗುಣಮಟ್ಟದ ಶಿಕ್ಷಣ ಸಿಕ್ಕಿದರೆ ದೇಶಕ್ಕೆ ಕೊಡುಗೆ ಕೊಡಲು ಸಾಧ್ಯ ಎಂದು ಕೆನರಾ ಬ್ಯಾಂಕ್ ಮುಂಬೈ ವಿಭಾಗದ ಡಿಜಿಎಂ ಸಂದೀಪ್ ರಾವ್ ಪುನರೂರು ಹೇಳಿದರು.
ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್‌ಗೆ ಕೆನರಾ ಬ್ಯಾಂಕ್‌ನ ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯಿಂದ ನೀಡಲಾದ ಮೂರು ಲಕ್ಷ ರೂ. ವೆಚ್ಚದ ಜನರೇಟರ್ ಸೆಟ್ ಹಸ್ತಾಂತರಿಸಿ ಮಾತನಾಡಿದರು.
ಶ್ರೀ ಶಾರದಾ ಸೊಸೈಟಿ ಕೋಶಾಧಿಕಾರಿ ಕೊಡೆತೂರು ಭುವನಾಭಿರಾಮ ಉಡುಪ ಅಧ್ಯಕ್ಷತೆ ವಹಿಸಿದ್ದರು. ಪಾಲಕರ- ಶಿಕ್ಷಕರ ಸಂಘದ ಅಧ್ಯಕ್ಷ ಶ್ಯಾಮ ಸುಂದರ್ ಶೆಟ್ಟಿ ಉಪಸ್ಥಿತರಿದ್ದರು. ಶಾಲಾ ಸಂಚಾಲಕರಾದ ದೇವಪ್ರಸಾದ್ ಪುನರೂರು ಸ್ವಾಗತಿಸಿದರು. ಪ್ರಾಂಶುಪಾಲ ಜಿತೇಂದ್ರ ವಿ.ರಾವ್ ಹೆಜಮಾಡಿ ವಂದಿಸಿದರು. ಸಹ ಶಿಕ್ಷಕಿ ಶ್ರೀಲತಾ ನಿರೂಪಿಸಿದರು.