More

    ಗ್ರಾಮೀಣ ಮಕ್ಕಳಲ್ಲಿ ಪ್ರತಿಭೆ ಹೆಚ್ಚು

    ನಿಪ್ಪಾಣಿ: ಗ್ರಾಮೀಣ ಭಾಗದ ಮಕ್ಕಳು ಶೈಕ್ಷಣಿಕ, ಕ್ರೀಡೆ, ಸಾಂಸ್ಕೃತಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಸರ್ಕಾರದ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಕೂಡ ಗ್ರಾಮಿಣ ಮಕ್ಕಳು ಮಿಂಚುತ್ತಿದ್ದಾರೆ ಎಂದು ಬಸವಜ್ಯೋತಿ ಯುಥ್ ಫೌಂಡೇಷನ್ ಅಧ್ಯಕ್ಷ ಬಸವಪ್ರಸಾದ ಜೊಲ್ಲೆ ಹೇಳಿದರು.

    ತಾಲೂಕಿನ ಸೌಂದಲಗಾ ಗ್ರಾಮದಲ್ಲಿ ಸಚಿವೆ ಶಶಿಕಲಾ ಜೊಲ್ಲೆಯವರ ವಿಶೇಷ ಪ್ರಯತ್ನದಿಂದ, ಲೊಕೋಪಯೋಗಿ ಇಲಾಖೆಯ ಅನುದಾನದಡಿ ಮಂಜೂರಾದ ಸರ್ಕಾರಿ ಮರಾಠಿ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳಿಗೆ ತಲಾ ಒಂದು ಕೊಠಡಿ ನಿರ್ಮಾಣಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.

    ಶಾಲಾ ಕೊಠಡಿ ನಿರ್ಮಾಣಕ್ಕೆ ರೂ. 22 ಲಕ್ಷ ಅನುದಾನ ಮಂಜೂರಾಗಿದ್ದು, ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಸಚಿವೆ ಶಶಿಕಲಾ ಜೊಲ್ಲೆ ಈ ಭಾಗದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದಾರೆ. ಮೂಲಭೂತ ಸೌಕರ್ಯ ಒದಗಿಸಿ, ಕ್ಷೇತ್ರವನ್ನು ರಾಜ್ಯದಲ್ಲಿ ಮಾದರಿಯನ್ನಾಗಿ ಮಾಡಿರುವುದಾಗಿ ಹೇಳಿದರು. ಎಪಿಎಂಸಿ ಸದಸ್ಯ ಸಂಜಯ ಶಿಂತ್ರೆ, ಅಪ್ಪಾಸಾಹೇಬ ಡವಣೆ, ಧೋಂಡಿರಾಮ ಕಾಂಬಳೆ, ಗಣಪತಿ ಗಾಡಿವಡ್ಡರ, ರಘುನಾಥ ಚೌಗಲೆ, ಎಸ್.ಎಸ್. ಢವಣೆ, ಆನಂದ ಸುರವಸೆ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts