More

    10 ರಿಂದ 14 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ

    ಜಿಲ್ಲಾಧಿಕಾರಿ ಆರ್.ಲತಾ ಆದೇಶ – ನಿಯಮ ಉಲ್ಲಂಸಿದರೆ ಕಾನೂನು ಕ್ರಮ


    ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
    ಚುನಾವಣೆ ಹಿನ್ನೆಲೆಯಲ್ಲಿ ಮೇ 10 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು 13 ರಂದು ಎಣಿಕೆ ನಡೆಯಲಿದೆ. ಮತ ಎಣಿಕೆ ನಂತರವೂ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೇ 10 ರಂದು ಸಂಜೆ 6 ಗಂಟೆಯಿಂದ 14 ರ ಮಧ್ಯರಾತ್ರಿ 12 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.
    ದೇವನಹಳ್ಳಿ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ ಇವಿಎಂ ಮತ್ತು ವಿವಿ ಪ್ಯಾಟ್‌ಗಳ ಸ್ಟ್ರಾಂಗ್ ರೂಂ ಇರುವುದರಿಂದ ಹಾಗೂ 13ರಂದು ಚುನಾವಣಾ ಮತ ಎಣಿಕೆ ನಡೆಯಲಿರುವುದರಿಂದ ಸಮಾಜದಲ್ಲಿ ಶಾಂತಿಭಂಗ ಉಂಟಾಗಬಾರದು, ಅಹಿತಕರ ಘಟನೆಗಳುನಡೆಯಬಾರದು ಎಂಬ ಕಾರಣಕ್ಕೆ ನಿಷೇಧಾಜ್ಞೆ ಹೊರಡಿಸಲಾಗಿದೆ. ಸಾರ್ವಜನಿಕರ ಶಾಂತಿ ಸುವ್ಯವಸ್ಥೆ ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಸಮ್ಮತ ಮತ ಎಣಿಕೆ ನಡೆಸುವ ನಿಟ್ಟಿನಲ್ಲಿ ಈ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಈ ಅವಧಿಯಲ್ಲಿ ಸಕಾರಣವಿಲ್ಲದೇ ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವಂತಿಲ್ಲ. ಯಾವುದೇ ಆಯುಧ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ವಸ್ತುಗಳನ್ನು ಹೊಂದುವುದನ್ನು ಮತ್ತು ಸಾಗಾಟ ಮಾಡುವುದನ್ನು ನಿಷೇಧಿಸಿದೆ. ಗೆದ್ದ ಅಭ್ಯರ್ಥಿಗಳ ಮೆರವಣಿಗೆ ಹಾಗೂ ಪಟಾಕಿ ಸಿಡಿಸುವುದು ಹಾಗೂ ಸಾರ್ವಜನಿಕ ಸಭೆ ಸಮಾರಂಭ ಸಂಭ್ರಮಾಚರಣೆಗೆ ಅವಕಾಶವಿಲ್ಲ. ಬಂದ್, ಪ್ರತಿಭಟನೆ, ಮುಷ್ಕರ, ಪ್ರತಿಕೃತಿ ದಹನ, ಪ್ರದರ್ಶನ, ಆಸ್ತಿ ಪಾಸ್ತಿ ಹಾನಿಗೊಳಿಸುವ ಹಾಗೂ ವಿರೂಪಗೊಳಿಸುವ ಚಟುವಟಿಕೆಗಳ ವಿರುದ್ಧ ಕಾನೂನು ಕ್ರಮ ಜರುಗಲಿದೆ.
    ಸಂತೆ, ಜಾತ್ರೆ ಮತ್ತು ಇತರೆ ಜನಸಮೂಹಗಳನ್ನು ನಿಷೇಧಿಸಿದೆ. ಎಣಿಕೆ ಕೇಂದ್ರದ ವ್ಯಾಪ್ತಿಯಲ್ಲಿ ಸಾರ್ವಜನಿಕರ ಪ್ರವೇಶ ನಿಷೇಧಿಸಿರುವ ಪ್ರದೇಶದಲ್ಲಿ ಪ್ರವೇಶ ನಿಷೇಧಿಸಿದೆ ನಿಷೇಧಾಜ್ಞೆ ಅವಧಿಯಲ್ಲಿ ನಿಯಮ ಉಲ್ಲಂಸಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಡಿಸಿ ಎಚ್ಚರಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts