ಗ್ರಾಮಾಭಿವೃದ್ಧಿ ಯೋಜನೆಯಿಂದ ಸಮಾಜಕ್ಕೆ ಒಳಿತು

blank

ವಿಜಯವಾಣಿ ಸುದ್ದಿಜಾಲ ಗೋಳಿಯಂಗಡಿ

blank

ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ವಿವಿಧ ಕಾರ್ಯಕ್ರಮಗಳು ಸಮಾಜಕ್ಕೆ ಒಳಿತು ಮಾಡುವುದರೊಂದಿಗೆ ಶ್ರೇಷ್ಠತೆ ಕಾಪಾಡಿಕೊಂಡು ಬರುತಿರುವುದು ಪ್ರಶಂಸನೀಯ. ಕೆರೆ ಅಭಿವೃದ್ಧಿಯಿಂದ ಅಂತರ್ಜಲ ವೃದ್ಧಿಯೊಂದಿಗೆ ಬಹು ಉಪಯೋಗವಾಗಲಿದೆ ಎಂದು ಕುಂದಾಪುರ ಶಾಸಕ ಎ.ಕಿರಣ್‌ಕುಮಾರ್ ಕೊಡ್ಗಿ ಹೇಳಿದರು.

ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬ್ರಹ್ಮಾವರ ತಾಲೂಕು, ಬಿಲ್ಲಾಡಿ ಗ್ರಾಪಂ, ವಂಡಾರು ಮದಗ ಕೆರೆ ಅಭಿವೃದ್ಧಿ ಸಮಿತಿ ಸಂಯುಕ್ತ ಆಶ್ರಯದಲ್ಲಿ 832ನೇ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿಯಲ್ಲಿ ಪುನಶ್ಚೇತನಗೊಳಿಸಲಾದ ವಂಡಾರು ಬೋರ್ಡ್‌ಗಲ್ ಮದಗ ಕೆರೆ ಹಸ್ತಾಂತರ ನಾಮಫಲಕ ಅನಾವರಣಗೊಳಿಸಿ ಕೆರೆ ಹಸ್ತಾಂತರಿಸಿ ಭಾನುವಾರ ಮಾತನಾಡಿದರು.

ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಉಡುಪಿ ಜಿಲ್ಲಾ ನಿರ್ದೇಶಕ ನಾಗರಾಜ ಶೆಟ್ಟಿ, ವಂಡಾರು ಮದಗ ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶರತ್ ಶೆಟ್ಟಿ, ಶ್ರೀಲಕ್ಷ್ಮೀ ಸಮೂಹ ಸಂಸ್ಥೆ ಉದ್ಯಮಿ ಮಹೇಶ್ ಶೆಟ್ಟಿ, ಬ್ರಹ್ಮಾವರ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಬಿಲ್ಲಾಡಿ ಗ್ರಾಪಂ ಅಧ್ಯಕ್ಷೆ ಸರಸ್ವತಿ ಬಾ, ವಂಡಾರು ಚಿತಾರ ಗ್ರೂಫ್ ಆಪ್ ಇಂಡಸ್ಟ್ರೀಸ್ ಉದ್ಯಮಿ ಗೋಪಿನಾಥ್ ಕಾಮತ್, ವಂಡಾರು ಶ್ರೀ ಕೃಷ್ಣಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಮ್ಯಾನೇಜಿಂಗ್ ಡೈರೆಕ್ಟರ್ ಸಂಪತ್ ಶೆಟ್ಟಿ, ಬಿಲ್ಲಾಡಿ ಗ್ರಾಪಂ ಮಾಜಿ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಅಭಿವೃದ್ಧಿ ಅಧಿಕಾರಿ ಪ್ರಶಾಂತ್, ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಂಡಾರು ವಲಯ ಒಕ್ಕೂಟಗಳ ಅಧ್ಯಕ್ಷ ಸುರೇಶ, ಇನ್ನಿತರರು ಉಪಸ್ಥಿತರಿದ್ದರು.

ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಯಡ್ತಾಡಿಯಲ್ಲಿ ಆಕಸ್ಮಿಕ ಬೆಂಕಿ ಅವಘಾಡದಿಂದ ಮನೆ ಕಳೆದುಕೊಂಡ ರಾಘವೇಂದ್ರ ನಾಯ್ಕ ಅವರಿಗೆ ಪರಿಹಾರ ಧನ, ವಡ್ಡರ್ಸೆ ಗ್ರಾಮದ ಅಚ್ಲಾಡಿ ರುದ್ರಭೂಮಿ ಅಭಿವೃದ್ಧಿ ಕಾರ್ಯಕ್ಕೆ ಅನುದಾನ ಹಸ್ತಾಂತರಿಸಲಾಯಿತು.

ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬ್ರಹ್ಮಾವರ ತಾಲೂಕು ಯೋಜನಾಧಿಕಾರಿ ರಮೇಶ್ ಪಿ.ಕೆ. ಸ್ವಾಗತಿಸಿದರು. ಪೃಥ್ವಿ, ಶ್ರೀಕಲಾ ಪ್ರಾರ್ಥಿಸಿದರು. ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಉಡುಪಿ ಜಿಲ್ಲಾ ನಿರ್ದೇಶಕ ನಾಗರಾಜ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಮಂದಾರ್ತಿ ವಲಯ ಮೇಲ್ವಿಚಾರಕ ಸಚ್ಚಿನ್ ಕಾರ್ಯಕ್ರಮ ನಿರೂಪಿಸಿದರು. ಕೃಷಿ ಅಧಿಕಾರಿ ರಾಘವೇಂದ್ರ ವಂದಿಸಿದರು.

ಸಿಂಧೂರ ಅಳಿಸಿದ ಉಗ್ರರಿಗೆ ದಿಟ್ಟ ಉತ್ತರ ನೀಡಿದ ಭಾರತ

ಭಾರತೀಯ ಸೈನಿಕರಿಗೆ ಬೆಂಬಲ

Share This Article
blank

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

blank