More

    ಮಹಿಳೆಯರಿಗೆ ಗ್ರಾಮಾಭಿವೃದ್ಧಿ ಯೋಜನೆ ವರದಾನ

    ಕೆ.ಆರ್.ಪೇಟೆ: ಮಹಿಳಾ ಸ್ವಾವಲಂಬನೆ ಹಾಗೂ ವೃತ್ತಿಕೌಶಲ ಮಾರ್ಗದರ್ಶನಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ವರದಾನವಾಗಿದೆ ಎಂದು ರಾಜ್ಯ ಆರ್‌ಟಿಒ ಸಂಘದ ರಾಜ್ಯ ಘಟಕ ಅಧ್ಯಕ್ಷ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.

    ಪಟ್ಟಣದ ಜಯನಗರ ಬಡಾವಣೆಯಲ್ಲಿ ಶನಿವಾರ ಆಯೋಜಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೊಸಹೊಳಲು ಭಾಗದ ಮಹಿಳಾ ಪ್ರಗತಿಬಂಧು ಸ್ವಸಹಾಯ ಸಂಘಗಳ ಪ್ರತಿನಿಧಿಗಳು ಹಾಗೂ ಸದಸ್ಯೆಯರ ಸಾಧನಾ ಸಮಾವೇಶದಲ್ಲಿ ಮಾತನಾಡಿದರು.
    ಹೆಣ್ಣು ಮಕ್ಕಳು ಪ್ರಗತಿಬಂಧು ಸ್ವಸಹಾಯ ಸಂಘಗಳ ಮೂಲಕ ಸಂಘಟಿತರಾಗಿ ಸಮಾಜದ ಮುಖ್ಯವಾಹಿನಿಗೆ ಬಂದು ಸಾಧನೆ ಮಾಡಿ ಮುನ್ನಡೆಯುತ್ತಿರುವುದು ಮೆಚ್ಚುವ ಸಂಗತಿಯಾಗಿದೆ ಎಂದು ಹೇಳಿದರು.

    314 ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಪ್ರತಿನಿಧಿಗಳು 15 ಕೋಟಿ ರೂ. ಗೂ ಹೆಚ್ಚಿನ ಸಾಲ ಸೌಲಭ್ಯವನ್ನು ಪಡೆದುಕೊಂಡು ಸಕಾಲದಲ್ಲಿ ಮರುಪಾವತಿಸುತ್ತಿದ್ದಾರೆ. ಗ್ರಾಮಾಭಿವೃದ್ಧಿ ಯೋಜನೆಯ ಎಲ್ಲಾ ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

    ಮಹಿಳೆಯರು ತಮ್ಮಲ್ಲಿನ ಕೀಳರಿಮೆ ತೊಡೆದುಹಾಕಿ ಆತ್ಮವಿಶ್ವಾಸದಿಂದ ಮುನ್ನಡೆಯಬೇಕು. ಹೆಣ್ಣುಮಕ್ಕಳು ತಮ್ಮಲ್ಲಿನ ವೃತ್ತಿಕೌಶಲವನ್ನು ಸದ್ಭಳಕೆ ಮಾಡಿಕೊಂಡು ಗುಡಿಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ನೂರಾರು ಹೆಣ್ಣುಮಕ್ಕಳಿಗೆ ಉದ್ಯೋಗ ನೀಡಿ ಸ್ವಾವಲಂಬಿ ಜೀವನ ನಡೆಸಲು ಅನುಕೂಲ ಮಾಡಿಕೊಡಬೇಕು. ಟೀಕೆಗಳು ಸಾಯುತ್ತವೆ, ಆದರೆ ನಾವು ಮಾಡುವ ಜನಪರ ಕೆಲಸ ಕಾರ್ಯಗಳು ಸಮಾಜದಲ್ಲಿ ಶಾಶ್ವತವಾಗಿ ಉಳಿಯುತ್ತವೆ ಎಂಬ ಸತ್ಯವನ್ನು ಅರಿತು ಬದಲಾವಣೆಯ ದಿಕ್ಕಿನತ್ತ ಹೆಜ್ಜೆ ಹಾಕಬೇಕು. ಇಂದಿನ ಸೋಲು ನಾಳಿನ ಗೆಲುವಿನಗೆ ಸೋಪಾನವಾಗಿಲದೆ. ಸೋಲಿಗೆ ಹೆದರದೆ ಗೆಲುವು ಸಾಧಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಹೇಳಿದರು.

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಮಮತಾಶೆಟ್ಟಿ, ಯುವಜನ ತರಬೇತುದಾರ ವಿಠಲಾಪುರ ಜಯರಾಂ ಮಾತನಾಡಿದರು. ಜ್ಞಾನವಿಕಾಸ ಯೋಜನೆಯ ಕಾವ್ಯ , ಮಮತಾ ಸೇರಿದಂತೆ ಸೇವಾ ಪ್ರತಿನಿಧಿಗಳು, ಸ್ವಯಂಸೇವಕರು ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಅದ್ವಿತೀಯ ಸಾಧನೆ ಮಾಡಿರುವ ಪ್ರಗತಿಬಂಧು ಮಹಿಳಾ ಸಂಘಗಳಿಗೆ ಬಹುಮಾನಗಳನ್ನು ವಿತರಿಸಿ ಸನ್ಮಾನಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts