More

    ಗ್ರಾಮೀಣ ಕ್ರೀಡೆ ಕಬಡ್ಡಿ ಕ್ರಿಕೆಟ್‌ಗೆ ಸಮಾನ

    ರಿಪ್ಪನ್‌ಪೇಟೆ: ಗ್ರಾಮೀಣ ಕ್ರೀಡೆಯಾದ ಕಬಡ್ಡಿ ಇತ್ತೀಚೆಗೆ ಹೊಸ ವಿನ್ಯಾಸವನ್ನು ಪಡೆದುಕೊಂಡು ಭಾರತೀಯರನ್ನು ಸೆಳೆಯುತ್ತಿದೆ. ಕ್ರಿಕೆಟ್‌ಗೆ ಸಮನಾಗಿರುವ ಕಬಡ್ಡಿ ಪಂದ್ಯ ವೀಕ್ಷಿಸುವವರ ಸಂಖ್ಯೆಯೂ ಹೆಚ್ಚುತ್ತಿದ್ದು, ಉತ್ತಮ ಸ್ಥಾನ ಪಡೆದುಕೊಂಡಿದೆ ಎಂದು ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕ ಧರ್ಮೇಶ್ ಸಿರಿಬೈಲ್ ತಿಳಿಸಿದರು.
    ಭಾನುವಾರ ಪಟ್ಟಣದ ವಿಶ್ವ ಮಾನವ ಸಭಾಭವನದಲ್ಲಿ ತಾಲೂಕು ಒಕ್ಕಲಿಗರ ಸಂಘದಿಂದ ಆಯೋಜಿಸಿದ್ದ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸಾಧನೆ ಮಾಡಿದ ಕ್ರೀಡಾಪಟಗಳಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಮಲೆನಾಡಿನ ನಮ್ಮೂರಿನ ಯುವಕರು ಪಾಲ್ಗೊಂಡು ಯಶಸ್ಸು ಗಳಿಸಿದ್ದಾರೆ. ಇದರೊಂದಿಗೆ ಗ್ರಾಮ, ತಾಲೂಕು, ಜಿಲ್ಲೆ, ರಾಜ್ಯವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದಾರೆ. ಇವರ ಕ್ರೀಡಾ ಅಭಿರುಚಿಗೆ ಪ್ರೋತ್ಸಾಹ ನೀಡಬೇಕಿರುವುದು ನಮ್ಮೆಲ್ಲರ ಕರ್ತವ್ಯ ಎಂದರು.
    ಪ್ರೋ ಕಬಡ್ಡಿ ಟೂರ್ನಿಯಲ್ಲಿ ಯುಪಿ ಯೋಧ ತಂಡದ ಪರ ಆಡುತ್ತಿರುವ ಹಾಲುಗುಡ್ಡೆ ಗ್ರಾಮದ ಗಗನ್ ಗೌಡ ಹಾಗೂ ಖೇಲೋ ಇಂಡಿಯಾ ಕಬಡ್ಡಿ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಸಾಧನೆ ಗೈದ ಪಟ್ಟಣದ ಗಗನ್‌ಗೌಡ ಹಾಗೂ ಪ್ರಜ್ವಲ್ ಅವರನ್ನು ಸನ್ಮಾನಿಸಲಾಯಿತು.
    ಪಟ್ಟಣದ ಶ್ರೀಸಿದ್ಧಿವಿನಾಯಕ ದೇವಸ್ಥಾನದಿಂದ ಸಾಗರ ರಸ್ತೆಯ ವಿಶ್ವಮಾನವ ಸಭಾಭವನದವರೆಗೆ ಕ್ರೀಡಾಪಟುಗಳನ್ನು ಮೆರವಣಿಗೆಯಲ್ಲಿ ಕರೆತರಲಾಯಿತು. ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಂ.ಬಿ.ಲಕ್ಷ್ಮಣಗೌಡ, ತೀರ್ಥಹಳ್ಳಿ ಘಟಕದ ಅಧ್ಯಕ್ಷ ಬಾಳೆಹಳ್ಳಿ ಪ್ರಭಾಕರ, ರಾಮಕೃಷ್ಣ ವಿದ್ಯಾಸಂಸ್ಥೆಯ ಮುಖ್ಯಸ್ಥ ದೇವರಾಜ, ದೈಹಿಕ ಶಿಕ್ಷಣ ಶಿಕ್ಷಕ ವಿನಯ್, ಮುಖಂಡರಾದ ಎಂ.ಎಂ.ಪರಮೇಶ, ಮಂಜುನಾಥ, ಷಣ್ಮುಖ, ಶೇಖರಪ್ಪಗೌಡ, ರಾಜುಗೌಡ, ಶ್ರೀಧರ, ಮಹೇಶ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts