More

    ಕರೊನಾ ಲಸಿಕೆ ವಿಜ್ಞಾನಿಯ ದುರಂತ ಅಂತ್ಯ! 14ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟರಾ ವಿಜ್ಞಾನಿ?

    ಮಾಸ್ಕೋ: ಕರೊನಾ ಬಂದಾಗಿನಿಂದ ವಿಜ್ಞಾನಿಗಳು ಕರೊನಾ ಲಸಿಕೆ ಸಿದ್ಧಪಡಿಸಲು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಅದೇ ರೀತಿ ಔಷಧ ಸಿದ್ಧಪಡಿಸಲು ಹಗಲು ರಾತ್ರಿ ಕೆಲಸ ಮಾಡುತ್ತಿದ್ದ ವಿಜ್ಞಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಷ್ಯಾದಲ್ಲಿ ನಡೆದಿದೆ.

    ಇದನ್ನೂ ಓದಿ: ಹೊಸ ಪಕ್ಷ ಸ್ಥಾಪಿಸಲು ಹೊರಟ ರಜನಿಕಾಂತ್​ಗೆ ಸಮನ್ಸ್​! ಕಾರಣವೇನು ಗೊತ್ತಾ?

    ರಷ್ಯಾದ ಸೇಂಟ್ ಪೀಟರ್ಸ್ಬರ್ಗ್​ ನಿವಾಸಿ ಅಲೆಕ್ಸಾಂಡರ್ ಸಶಾ ಕಗಾನ್ಸ್ಕಿ (45) ಸಾವನ್ನಪ್ಪಿರುವ ವಿಜ್ಞಾನಿ. ಇವರು ತಾವು ವಾಸವಿದ್ದ ಬಿಲ್ಡಿಂಗ್​ನ 14ನೇ ಮಹಡಿಯಿಂದ ಹಾರಿ ಪ್ರಾಣ ಬಿಟ್ಟಿದ್ದಾರೆ ಎನ್ನಲಾಗಿದೆ. ಮೃತ ದೇಹದ ಮೇಲೆ ಕೇವಲ ಅಂಡರ್​ವೇರ್​ ಮಾತ್ರವೇ ಕಾಣಿಸಿದೆ. ಇದು ನಿಜಕ್ಕೂ ಆತ್ಮಹತ್ಯೆಯೇ ಅಥವಾ ಕೊಲೆಯೋ ಎನ್ನುವ ಅನುಮಾನಗಳು ವ್ಯಕ್ತವಾಗಿವೆ.

    ಇದನ್ನೂ ಓದಿ: 20 ಮಂದಿ ಬರಬೇಕಾದ ಮದುವೆಗೆ ಬಂದದ್ದು 10 ಸಾವಿರ! ಈಗ ಈ ಕುತೂಹಲದ ಮದುವೆಯದ್ದೇ ಚರ್ಚೆ

    ವಿಜ್ಞಾನಿಯ ಆತ್ಮಹತ್ಯೆಗೆ ಕಾರಣವೇನು ಎನ್ನುವುದು ತಿಳಿದುಬಂದಿಲ್ಲ. ಈ ವಿಚಾರದಲ್ಲಿ ಹೆಚ್ಚಿನ ತನಿಖೆ ನಡೆಸಿ, ಸತ್ಯಾಂಶವನ್ನು ಹೊರತರುವುದಾಗಿ ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್​)

    ಮದುವೆಯಾಗಿ ಎರಡೇ ತಿಂಗಳಲ್ಲಿ ಗರ್ಭಿಣಿಯಾಗಿದ್ದು ಹೇಗೆ? ಹೊಟ್ಟೆ ಹಿಂದಿನ ಸತ್ಯ ಬಿಚ್ಚಿಟ್ಟ ಗಾಯಕಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts