More

    ಪ್ರತಿಭಟನೆ ಮುಗಿಸಿಬಂದು ಆತ್ಮಹತ್ಯೆ ಮಾಡಿಕೊಂಡ ಯುವರೈತ; ಕಾರಣ ನಿಗೂಢ!

    ಚಂಡೀಗಢ: ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿಯಲ್ಲಿ ಮೂರು ವಾರಗಳಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಯುವ ರೈತನೊಬ್ಬ ಮನೆಗೆ ಬಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

    ಡಿಸೆಂಬರ್ 18ರಂದು ದೆಹಲಿ ಗಡಿಯ ಸಮೀಪ ರೈತ ಪ್ರತಿಭಟನಾ ಸ್ಥಳದಿಂದ ಮರಳಿದ್ದ 22 ವರ್ಷದ ಪಂಜಾಬ್ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣ ನಿಗೂಢವಾಗಿದೆ. ಪಂಜಾಬ್ ರಾಜ್ಯದ ಬತಿಂಡಾ ಜಿಲ್ಲೆಯ ದಯಾಲ್‌ಪುರ ಮಿರ್ಜಾ ಗ್ರಾಮದ ನಿವಾಸಿ ಗುರ್ಲಭ್ ಸಿಂಗ್ ಎಂದು ಗುರುತಿಸಲಾಗಿದೆ.

    ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಇವರು ಕೂಡ ಭಾಗಿಯಾಗಿದ್ದರು. ಆದರೆ ಕಳೆದ ಶುಕ್ರವಾರ ಮನೆಗೆ ಮರಳಿದ್ದ ಸಿಂಗ್​ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಷ ಸೇವನೆ ಮಾಡಿದ ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ ಎಂದು ಮಾಹಿತಿ ನೀಡಿದ್ದಾರೆ.

    ಆತ್ಮಹತ್ಯೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಸಣ್ಣ ರೈತರಾಗಿದ್ದ ಸಿಂಗ್​ ಸುಮಾರು ಆರು ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು ಎನ್ನಲಾಗುತ್ತಿದೆ. ಸಾಲ ತೀರಿಸಲು ಸಾಧ್ಯವಾಗದೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬಶಂಕೆ ವ್ಯಕ್ತವಾಗಿರುವುದಾಗಿ ಪೊಲೀಸರು ಹೇಳಿದ್ದಾರೆ.

    ಲಿವ್​ ಇನ್ ಹೆಸರಲ್ಲಿ ಗರ್ಭಿಣಿ ಮಾಡಿ ಬೀದಿಗೆ ಬಿಟ್ಟಿದ್ದಾನೆ- ಆತ್ಮಹತ್ಯೆ ಬಿಟ್ಟು ಬೇರೆನು ಮಾಡಲಿ?

    ಕರಿದುಳಿದ ಎಣ್ಣೆಗೆ ಡಾಲ್ಡಾ ಸೇರಿಸಿ ಪರಿಶುದ್ಧ ತುಪ್ಪ ಎಂದರು…ಆಹಾ! ಘಮಘಮ ಎಂದು ವಿಷ ತಿಂದ ಜನ

    400 ವರ್ಷಗಳ ಬಳಿಕ ಆಗಸದಲ್ಲಿ ಇಂದು ಕೌತುಕ- ನೀವೂ ಕಣ್ತುಂಬಿಸಿಕೊಳ್ಳಬಹುದು ಈ ‘ಮಹಾ ಸಂಯೋಗ’

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts