

ನವದೆಹಲಿ: ಕರ್ನಾಟಕ ಸೇರಿದಂತೆ ದೇಶದಲ್ಲಿ ಒಟ್ಟು 24 ವಿಶ್ವವಿದ್ಯಾಲಯಗಳು ನಕಲಿಯಾಗಿದ್ದು, ಇವುಗಳಲ್ಲಿ ದಾಖಲಾತಿ ಮಾಡಿಕೊಳ್ಳುವ ಮುನ್ನ ಎಚ್ಚರ ವಹಿಸುವುದು ಅಗತ್ಯವಾಗಿದೆ/
ಈ 24 ನಕಲಿ ವಿವಿಯ ಕುರಿತು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ನೀಡಿರುವ ವರದಿಯ ಬಗ್ಗೆ ಲೋಕಸಭೆಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
'ಯುಜಿಸಿ 24 ಸ್ವಯಂ ಘೋಷಿತ ಶಿಕ್ಷಣ ಸಂಸ್ಥೆಗಳನ್ನು ನಕಲಿ ಎಂದು ಘೋಷಿಸಿದೆ. ವಿದ್ಯಾರ್ಥಿಗಳು, ಪಾಲಕರು, ಸಾಮಾನ್ಯ ಜನರು ಮತ್ತು ಮೀಡಿಯಾಗಳು ಮಾಡಿರುವ ದೂರಿನ ಆಧಾರದ ಮೇಲೆ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ನಕಲಿ ಅಥವಾ ಮಾನ್ಯತೆ ಪಡೆಯದ ವಿಶ್ವವಿದ್ಯಾಲಯಗಳಿಗೆ ನೋಟಿಸ್ ನೀಡಲಾಗಿದ್ದು, ಅವುಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಪ್ರಧಾನ್ ವಿವರಿಸಿದ್ದಾರೆ.
ನಕಲಿ ವಿವಿಗಳ ಪಟ್ಟಿ ಇಲ್ಲಿದೆ.
ಕರ್ನಾಟಕ:
ಬಡಗನ್ವಿ ಸರ್ಕಾರ್ ವರ್ಲ್ಡ್ ಓಪನ್ ಯೂನಿವರ್ಸಿಟಿ ಎಜುಕೇಶನ್ ಸೊಸೈಟಿ (ಬೆಳಗಾವಿಯ ಗೋಕಾಕ್ನಲ್ಲಿದೆ)
ಉತ್ತರ ಪ್ರದೇಶ:
*ವಾರಣಾಸಿಯ ಸಂಸ್ಕೃತ ವಿಶ್ವವಿದ್ಯಾಲಯ;
* ಮಹಿಳಾ ಗ್ರಾಮ ವಿದ್ಯಾಪೀಠ, ಅಲಹಾಬಾದ್;
* ಗಾಂಧಿ ಹಿಂದಿ ವಿದ್ಯಾಪೀಠ, ಅಲಹಾಬಾದ್;
* ನ್ಯಾಷನಲ್ ಯೂನಿವರ್ಸಿಟಿ ಆಫ್ ಎಲೆಕ್ಟ್ರೋ ಕಾಂಪ್ಲೆಕ್ಸ್ ಹೋಮಿಯೋಪತಿ, ಕಾನ್ಪುರ;
* ನೇತಾಜಿ ಸುಭಾಷ್ ಚಂದ್ರ ಬೋಸ್ ಮುಕ್ತ ವಿಶ್ವವಿದ್ಯಾಲಯ, ಅಲಿಘರ್;
* ಉತ್ತರ ಪ್ರದೇಶ ವಿಶ್ವವಿದ್ಯಾಲಯ, ಮಥುರಾ;
* ಮಹಾರಾಣಾ ಪ್ರತಾಪ್ ಶಿಕ್ಷಾ ನಿಕೇತನ ವಿಶ್ವವಿದ್ಯಾಲಯ, ಪ್ರತಾಪಘರ್
* ಇಂದ್ರಪ್ರಸ್ಥ ಶಿಕ್ಷಾ ಪರಿಷತ್, ನೋಯ್ಡಾ
ನವದೆಹಲಿ:
* ಕಮರ್ಷಿಯಲ್ ಯೂನಿವರ್ಸಿಟಿ ಲಿಮಿಟೆಡ್,
* ಯುನೈಟೆಡ್ ನೇಷನ್ಸ್ ಯೂನಿವರ್ಸಿಟಿ,
* ವೊಕೇಷನಲ್ ಯೂನಿವರ್ಸಿಟಿ,
* ಎಡಿಆರ್ ಸೆಂಟ್ರಿಕ್ ಜುರಿಡಿಕಲ್ ವಿಶ್ವವಿದ್ಯಾಲಯ,
* ಇಂಡಿಯನ್ ಇನ್ ಸ್ಟಿಟ್ಯೂಷನ್ ಆಫ್ ಸೈನ್ಸ್ ಅಂಡ್ ಎಂಜಿನಿಯರಿಂಗ್,
* ವಿಶ್ವಕರ್ಮ ಓಪನ್ ಯೂನಿವರ್ಸಿಟಿ ಫಾರ್ ಸೆಲ್ಫ್ ಎಂಪ್ಲಾಯ್ ಮೆಂಟ್,
* ಅಧ್ಯತ್ಮಿಕ್ ವಿಶ್ವವಿದ್ಯಾಲಯ (ಆಧ್ಯಾತ್ಮಿಕ ವಿಶ್ವವಿದ್ಯಾಲಯ)
ಪಶ್ಚಿಮ ಬಂಗಾಳ:
* ಕೋಲ್ಕತ್ತಾದ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ ಮೆಡಿಸಿನ್
* ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ ಮೆಡಿಸಿನ್ ಅಂಡ್ ರಿಸರ್ಚ್
ಒಡಿಶಾ:
* ರೂರ್ಕೆಲಾದ ನವಭಾರತ್ ಶಿಕ್ಷಾ ಪರಿಷತ್
* ಉತ್ತರ ಒರಿಸ್ಸಾ ಕೃಷಿ ಮತ್ತು ತಂತ್ರಜ್ಞಾನ ವಿವಿ
ಪುದುಚೇರಿ:
ಶ್ರೀ ಬೋಧಿ ಅಕಾಡೆಮಿ ಆಫ್ ಹೈಯರ್ ಎಜುಕೇಶನ್
ಮಹಾರಾಷ್ಟ್ರ:
ಕ್ರೈಸ್ಟ್ ಟೆಸ್ಟಮೆಂಟ್ ಡೀಮ್ಡ್ ವಿಶ್ವವಿದ್ಯಾಲಯ
ಆಂಧ್ರಪ್ರದೇಶ;
ರಾಜಾ ಅರೇಬಿಕ್ ವಿಶ್ವವಿದ್ಯಾಲಯ, ನಾಗ್ಪುರ;
ಕೇರಳ
ಸೇಂಟ್ ಜಾನ್ಸ್ ವಿಶ್ವವಿದ್ಯಾಲಯ
ಇದಲ್ಲದೆ ದೆಹಲಿಯ ಕುತುಬ್ ಎನ್ ಕ್ಲೇವ್ ನ ಭಾರತೀಯ ಶಿಕ್ಷಣ ಪರಿಷತ್, ಉತ್ತರ ಪ್ರದೇಶದ ಲಖನೌನಲ್ಲಿರುವ ಭಾರತೀಯ ಯೋಜನೆ ಮತ್ತು ನಿರ್ವಹಣಾ ಸಂಸ್ಥೆ (ಐಐಪಿಎಂ) ಎಂಬ ಇನ್ನೆರಡು ಸಂಸ್ಥೆಗಳು ಯುಜಿಸಿ ಕಾಯ್ದೆ, 1956ರ ಉಲ್ಲಂಘನೆಯಲ್ಲಿ ಕಾರ್ಯನಿರ್ವಹಿಸುತ್ತಿದೆ.