More

    ಕೋವಿಡ್‌ ಲಸಿಕೆ ಅಭಿಯಾನಕ್ಕೆ ಭಾರತಕ್ಕೆ 186 ಕೋಟಿ ರೂ. ನೆರವು ನೀಡಲು ಮುಂದಾದ ಅಮೆರಿಕ

    ನವದೆಹಲಿ: ಭಾರತದ ಕೋವಿಡ್-19 ಲಸಿಕೆ ಅಭಿಯಾನಕ್ಕೆ ನೆರವು ನೀಡಲು ಅಮೆರಿಕ ಧಾವಿಸಿದೆ. ಈ ಕಾರ್ಯಕ್ರಮಕ್ಕೆ ತಾನು 25 ಮಿಲಿಯನ್ ಡಾಲರ್ (ಸುಮಾರು 186 ಕೋಟಿ ರೂಪಾಯಿ) ಆರ್ಥಿಕ ನೆರವು ನೀಡುವುದಾಗಿ ಅಮೆರಿಕ ಹೇಳಿದೆ.

    ಈ ಕುರಿತು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕನ್ ಪ್ರಕಟಿಸಿದ್ದು, ಭಾರತಕ್ಕೆ ನೆರವು ನೀಡುವುದಾಗಿ ಹೇಳಿದ್ದಾರೆ. ಬ್ಲಿಂಕನ್ ಅವರ ಜೊತೆಗೆ ಸವಿಸ್ತಾರವಾಗಿ ಮಾತುಕತೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್, ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಅಮೆರಿಕ ಭಾರತಕ್ಕೆ ತೋರಿದ ವಿಶೇಷ ನೆರವನ್ನು ಪ್ರಸ್ತಾಪಿಸಿ ಧನ್ಯವಾದ ಹೇಳಿದರು.

    ಕೋವಿಡ್ ಸಾಂಕ್ರಾಮಿಕ ಮತ್ತು ಅದರಿಂದಾಗಿರುವ ನಕಾರಾತ್ಮಕ ಪರಿಣಾಮಗಳನ್ನು ನಿರ್ವಹಿಸುವ ಕುರಿತು ಮತ್ತಷ್ಟು ಸಹಕಾರಕ್ಕೆ ಉತ್ತೇಜನ ನೀಡುವ ಸಂಬಂಧ ನಡೆದಿರುವ ಈ ಮಾತುಕತೆಯಲ್ಲಿ ನೆರವು ನೀಡಲು ಅಮೆರಿಕ ಮುಂದಾಗಿರುವುದಾಗಿ ಪ್ರಕಟಿಸಲಾಗಿದೆ ಎಂದು ಅವರು ವಿವರಿಸಿದರು.

    ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಅಮೆರಿಕ ಭಾರತಕ್ಕೆ ತೋರಿದ ವಿಶೇಷ ನೆರವನ್ನು ಪ್ರಸ್ತಾಪಿಸಿ ಧನ್ಯವಾದ ಹೇಳಿದ ಜೈಶಂಕರ್‌ ಅವರು, ಭಾರತದಲ್ಲಿ ಲಸಿಕೆ ಉತ್ಪಾದನೆಗೆ ಕಚ್ಚಾ ಸಾಮಗ್ರಿಗಳ ಪೂರೈಕೆ ಮಾಡಿದ ಅಮೆರಿಕಕ್ಕೆ ವಿದೇಶಾಂಗ ಸಚಿವರು ಧನ್ಯವಾದ ಹೇಳಿದರು.

    ಮಾಹಿತಿ ನೀಡುತ್ತಿರುವ ಬ್ಲಿಂಕನ್‌:

    VIDEO: ಇಸ್ಲಾಂಗೆ ವಿರುದ್ಧವಾಗಿ ಜನರನ್ನು ನಗಿಸುತ್ತಿಯಾ ಎಂದು ಖ್ಯಾತ ಹಾಸ್ಯನಟನನ್ನು ಗುಂಡಿಕ್ಕಿ ಕೊಂದರು!



    VIDEO: ಇಸ್ಲಾಂಗೆ ವಿರುದ್ಧವಾಗಿ ಜನರನ್ನು ನಗಿಸುತ್ತಿಯಾ ಎಂದು ಖ್ಯಾತ ಹಾಸ್ಯನಟನನ್ನು ಗುಂಡಿಕ್ಕಿ ಕೊಂದರು!

    34 ಕೋಟಿ ರೂ. ಬ್ಲೂಫಿಲ್ಮಂ ದಂಧೆಗಿದ್ಯಾ ಶಿಲ್ಪಾ ಲಿಂಕ್‌? ನಟಿಗೆ ಕ್ಲೀನ್‌ಚಿಟ್‌ ನೀಡಲ್ಲ ಎಂದ ಪೊಲೀಸರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts