ರಾಜ್ಯದಲ್ಲಿ ಅತಿವೃಷ್ಟಿ: ಮೂಲ ಸೌಕರ್ಯ ಕಲ್ಪಿಸಲು 500 ಕೋಟಿ ರೂ. ಬಿಡುಗಡೆ- ಸಿಎಂ ಬೊಮ್ಮಾಯಿ

CMBommai
Published on

ಬೆಂಗಳೂರು: ಅತಿವೃಷ್ಟಿಯಿಂದ ಹಾನಿಗೊಳಗಾದ ಮೂಲಭೂತ ಸೌಕರ್ಯಗಳ ತುರ್ತು ಮರುಸ್ಥಾಪನೆಗಾಗಿ 500 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದೇಶ‌ ಹೊರಡಿಸಿದ್ದಾರೆ‌.

ಇಂದು ದೇವನಹಳ್ಳಿಯಲ್ಲಿ ಮಳೆ ಮತ್ತು ನೆರೆ ಹಾವಳಿ ಬಗ್ಗೆ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಈ ಸಂದರ್ಭದಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ.

ಕಳೆದ ಕೆಲ ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ. ಇದರಿಂದ ಹಲವಾರು ಜಿಲ್ಲೆಗಳಲ್ಲಿ ಸಮಸ್ಯೆಯಾಗಿದೆ. ಮೂಲಭೂತ ಸೌಕರ್ಯಗಳಾದ ರಸ್ತೆ, ಸೇತುವೆ, ಶಾಲೆ, ಅಂಗವಾಡಿ ಕೇಂದ್ರ, ವಿದ್ಯುತ್ ಕಂಬ, ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡಗಳು ಹಾನಿಗೆ ಒಳಗಾಗಿವೆ.

ಕೆಲ ದಿನಗಳ ಹಿಂದೆ ನಾನು ಕೆಲವು ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದು, ಆ ಸಂದರ್ಭದಲ್ಲಿ ಈ ಹಾನಿಯನ್ನು ಸ್ವತಃ ವೀಕ್ಷಣೆ ಮಾಡಿದ್ದೇನೆ. ತ್ವರಿತ ಗತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಯಥಾಸ್ಥಿತಿಗೆ ತರಬೇಕಾಗಿದೆ. ಇದಕ್ಕಾಗಿ ಹಲವಾರು ಕಾಮಗಾರಿಗಳನ್ನು ಕೈಗೊಳ್ಳಬೇಕಾಗಿದೆ. ಇದಕ್ಕಾಗಿ ಕೂಡಲೇ 500 ಕೋಟಿ ಹಣವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದೇಶ ಹೊರಡಿಸಿದ್ದಾರೆ‌.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net