More

    ಬಿಜೆಪಿ ಟಿಕೆಟ್​ವಂಚಿತ ರಾಮದಾಸ್: ನಿನ್ನೆ ಸಂಸದ-ಅಭ್ಯರ್ಥಿಯನ್ನೇ ವಾಪಸ್ ಕಳಿಸಿ ಮುನಿಸು; ಇಂದು ಹೇಳಿದ್ದೇ ಬೇರೆ!

    ಬೆಂಗಳೂರು: ಕೃಷ್ಣರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ವಂಚಿತರಾಗಿ ತೀವ್ರ ಬೇಸರಗೊಂಡಿದ್ದ ಶಾಸಕ ಎಸ್.ಎ. ರಾಮದಾಸ್ ಅವರ ಮನವೊಲಿಸುವಲ್ಲಿ ಬಿಜೆಪಿ ವರಿಷ್ಠರು ಯಶಸ್ವಿಯಾಗಿದ್ದು, ಇದೀಗ ಪಕ್ಷದಲ್ಲೇ ಉಳಿಯುವ ನಿರ್ಧಾರ ಮಾಡಿದ್ದಾರೆ.

    ಇದನ್ನೂ ಓದಿ: ರಾಮದಾಸ್ ಕೂಡ ಬಿಜೆಪಿಗೆ ರಾಜೀನಾಮೆ?; ಮನೆಗೆ ಬಂದ ಸಂಸದ-ಅಭ್ಯರ್ಥಿಯನ್ನು ಭೇಟಿಯಾಗದೆ ವಾಪಸ್ ಕಳಿಸಿದ್ರು!

    ‘30 ವರ್ಷಗಳಿಂದ ಇದ್ದ ತಾಯಿ ಮನೆ(ಬಿಜೆಪಿ)ಯಿಂದ ಓಡಿಸಿದ್ದಾರೆ, ಹಾಗಾಗಿ ಆ ಮನೆಯಲ್ಲಿ ಇರಬೇಕಾ ಅಥವಾ ಬೇಡವಾ ಎಂಬುದನ್ನು ಕಾರ್ಯಕರ್ತರೊಂದಿಗೆ ಚರ್ಚಿಸಿ ನಿರ್ಧಾರ ಮಾಡುತ್ತೇನೆ’ ಎಂದು ರಾಮದಾಸ್ ಸೋಮವಾರ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಮದಾಸ್ ಪಕ್ಷ ತೊರೆದು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ ಅಥವಾ ಬೇರೆ ಪಕ್ಷದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಯಬಹುದು ಎಂಬ ಕುತುಹಲ ಮೂಡಿತ್ತು.

    ಇದನ್ನೂ ಓದಿ: ಶ್ರೀರಾಮುಲು ಮಾತ್ರವಲ್ಲ, ಅವರ ಪತ್ನಿ ಮತ್ತು ಮಕ್ಕಳಿಬ್ಬರೂ ಕೋಟ್ಯಧಿಪತಿಗಳು!

    ವಿದ್ಯಾರಣ್ಯಪುರಂ ಉದ್ಯಾನದಲ್ಲಿ ಮಂಗಳವಾರ ಸಂಜೆ ಕಾರ್ಯಕರ್ತರ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಮದಾಸ್ ನಂತರ ಸುದ್ದಿಗೋಷ್ಠಿಯಲ್ಲಿ ತಮ್ಮ ನಿಲುವು ಪ್ರಕಟಿಸಿದರು. ‘ಟಿಕೆಟ್ ಪಡೆಯುವ ವಿಚಾರದಲ್ಲಿ ನಾನು ಪಕ್ಷದ ವರಿಷ್ಠರನ್ನು ಅರ್ಥ ಮಾಡಿಸುವಲ್ಲಿ ಸೋತಿದ್ದೇನೆ, ಪಕ್ಷದ ವರಿಷ್ಠರು ಪಕ್ಷ ನೀತಿಯನ್ನು ನನಗೆ ಅರ್ಥ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಕ್ಷದ ಘೋಷಿತ ಅಭ್ಯರ್ಥಿ ಏ.20 ರಂದು ನಾಮಪತ್ರ ಸಲ್ಲಿಸಲಿದ್ದು, ಅವರ ನಾಮಪತ್ರ ಸಂದರ್ಭ ಪಾಲ್ಗೊಳ್ಳುತ್ತೇನೆ’ ಎಂದರು.

    ಇದನ್ನೂ ಓದಿ: ನಾನು ನಿಮಗೆ, ನಿಮ್ಮ ಕುಟುಂಬಕ್ಕೆ ಮಾಡಿದ ಅನ್ಯಾಯ ಏನು? ನನ್ನ ಮೇಲೆ ಯಾಕಿಷ್ಟು ದ್ವೇಷ?: ಸುಮಲತಾಗೆ ಎಚ್​ಡಿಕೆ ಪ್ರಶ್ನೆ

    ಕೃಷ್ಣರಾಜ ಕ್ಷೇತ್ರದಲ್ಲಿ ಈ ಬಾರಿ ಯಾರು ಗೆಲುವು ಸಾಧಿಸುತ್ತಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ‘ಯಾರಿಗೆ ಮತದಾರರು ಆಶೀರ್ವಾದ ಮಾಡುತ್ತಾರೋ ಅವರು ಗೆಲ್ಲುತ್ತಾರೆ’ ಎಂದು ಹೇಳಿದರು. ಆದರೆ ರಾಮದಾಸ್ ಎಲ್ಲೂ ಕೂಡ ಪಕ್ಷದ ಘೋಷಿತ ಅಭ್ಯರ್ಥಿ ಹೆಸರು ಪ್ರಸ್ತಾಪಿಸುವುದಾಗಲಿ ಅವರ ಗೆಲುವಿನ ಕುರಿತು ಚಕಾರ ಎತ್ತದೆ ಇರುವುದು ಅಚ್ಚರಿ ಮೂಡಿಸಿದೆ.

    ದಾಖಲೆ ಇಲ್ಲದ 7 ಕೋಟಿ ರೂ. ಪತ್ತೆ; ಐಎಎಸ್​ ಅಧಿಕಾರಿಯೊಬ್ಬರು ಸ್ಥಳಕ್ಕೆ ಹೋದ ಬಳಿಕ ಹಣವೇ ನಾಪತ್ತೆ!

    ತಾನೂ ಕೋಟ್ಯಧಿಪತಿ, ಮಕ್ಕಳಿಬ್ಬರೂ ಕೋಟ್ಯಧಿಪತಿ, ಹೆಂಡತಿಯೂ ಕೋಟಿ ರೂ. ಮೌಲ್ಯದ ಚಿನ್ನಾಭರಣದ ಒಡತಿ, ಆದ್ರೆ ಸ್ವಂತ ಕಾರಿಲ್ಲ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts