ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಅಮಾನತುಗೊಂಡಿದ್ದ ಇಬ್ರಾಹಿಂ ಆಪ್ತನಿಗೆ ಮತ್ತೊಮ್ಮೆ ಉಚ್ಚಾಟನೆಯ ಬಿಸಿ!

abdul
Published on

ಮೈಸೂರು: ಶಾಸಕ ತನ್ವೀರ್ ಸೇಠ್ ಆಪ್ತ, ಕಾಂಗ್ರೆಸ್ ‌ಮುಖಂಡ ಅಬ್ದುಲ್‌ ಖಾದರ್ ಶಾಹಿದ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

ಜೆಡಿಎಸ್‌ ಸೇರ್ಪಡೆಗೊಂಡಿರುವ ಸಿ.ಎಂ ಇಬ್ರಾಹಿಂ ಅವರನ್ನು ಸ್ವಾಗತಿಸಿದ್ದಕ್ಕೆ ಈ ಶಿಸ್ತು ಕ್ರಮ ಜರುಗಿಸಲಾಗಿದೆ. ಇವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದ್ದು, ಈ ಕುರಿತು ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ಆದೇಶ ಹೊರಡಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೂಚನೆ ಮೇರೆಗೆ ಉಚ್ಚಾಟನೆ ಮಾಡಲಾಗಿದೆ.

ಈ ಹಿಂದೆ ಕೂಡ ಇಂಥದ್ದೇ ಘಟನೆ ನಡೆದಿತ್ತು. ಮಾಜಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಘೋಷಣೆ ಕೂಗಿದರು ಎಂಬ ಕಾರಣಕ್ಕೆ ಇವರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು. ಇದೀಗ ಪಕ್ಷದಿಂದಲೇ ಉಚ್ಚಾಟನೆಗೊಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net