

ಪುಣೆ: ಪುಣೆ-ಮುಂಬೈ ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು , ಐವರು ದಾರುಣವಾಗಿ ಮೃತಪಟ್ಟಿದ್ದಾರೆ. ಇಂದು ನಸುಕಿನಲ್ಲಿ ಈ ಘಟನೆ ಸಂಭವಿಸಿದೆ.
ಲೋನಾವಾಲಾ ಸಮೀಪದ ಮುಂಬೈನಿಂದ ಪುಣೆ ಕಡೆಗೆ ತೆರಳುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ, ಕಂಟೈನರ್‌ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಕಾರು ನಜ್ಜುಗುಜ್ಜಾಗಿದ್ದು ಒಂದೇ ಕುಟುಂಬದ ಐವರನ್ನು ಬಲಿ ಪಡೆದಿದೆ. ಮೃತಪಟ್ಟವರೆಲ್ಲಾ ಹರಿಯಾಣ ಮೂಲದವರು ಎಂದು ತಿಳಿದುಬಂದಿದೆ.
ಅಪಘಾತದಿಂದಾಗಿ ಸ್ವಲ್ಪ ಸಮಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.