VIDEO: ಬೆಳ್ಳಂಬೆಳಗ್ಗೆ ಚಿತ್ರದುರ್ಗದಲ್ಲಿ ಭೀಕರ ಸರಣಿ ಅಪಘಾತ: ನಾಲ್ವರ ದಾರುಣ ಸಾವು

ಚಿತ್ರದುರ್ಗ: ಚಿತ್ರದುರ್ಗದ ಹಿರಿಯೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಸುಕಿನ ಜಾವ ಭಾರಿ ಸರಣಿ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಈರುಳ್ಳಿ ತುಂಬಿದ ಲಾರಿ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿ ಸಂಭವಿಸಿ ಈ ಅಪಘಾತ ನಡೆದಿದೆ. ಈ ಸಂದರ್ಭದಲ್ಲಿ ನಿಯಂತ್ರಣ ತಪ್ಪಿದ ಲಾರಿ, ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಎರಡೂ ಲಾರಿಗಳು ಪಲ್ಟಿ ಹೊಡೆದಿವೆ. ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ. ಚಿತ್ರದುರ್ಗ ಕಡೆಯಿಂದ ಬೆಂಗಳೂರು ಕಡೆ ಹೋಗುವಾಗ ಈ ಘಟನೆ ಸಂಭವಿಸಿದೆ. ಮೃತಪಟ್ಟವರನ್ನು ಹನುಮಪ್ಪ … Continue reading VIDEO: ಬೆಳ್ಳಂಬೆಳಗ್ಗೆ ಚಿತ್ರದುರ್ಗದಲ್ಲಿ ಭೀಕರ ಸರಣಿ ಅಪಘಾತ: ನಾಲ್ವರ ದಾರುಣ ಸಾವು