ಬೆಂಗಳೂರಿನ ಆಸ್ಪತ್ರೆಯಲ್ಲಿ ಹಿರಿಯ ನಟ ‌ಮಿಥುನ್‌ ಚರ್ಕವರ್ತಿ- ಆತಂಕ ಮೂಡಿಸಿದ ಫೋಟೋ: ಮಗ ಹೇಳಿದ್ದೇನು?

mithun
Published on

ಬೆಂಗಳೂರು: ಬಾಲಿವುಡ್​ ಹಿರಿಯ ನಟ ಮಿಥುನ್ ಚಕ್ರವರ್ತಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದರಿಂದ ಅಭಿಮಾನಿಗಳು ಗಾಬರಿ ಪಟ್ಟುಕೊಳ್ಳುತ್ತಿದ್ದಾರೆ.

ಮೂತ್ರಪಿಂಡದಲ್ಲಿ ಕಲ್ಲು ಕಾಣಿಸಿಕೊಂಡಿದ್ದರಿಂದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ತಮ್ಮ ತಂದೆ ಆಸ್ಪತ್ರೆಗೆ ಸೇರಿರುವ ಬಗ್ಗೆ ಅವರ ಮಗ ಮಿಮೋಹ್ ಟ್ವೀಟ್‌ ಮಾಡಿದ್ದರು.

ಆದರೆ ಇದೀಗ ತಮ್ಮ ತಂದೆ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಮಾಡಲಾಗಿದೆ ಎಂದು ವಿಮೋಹ್‌ ಹೇಳಿದ್ದಾರೆ. ಮೂತ್ರಪಿಂಡದಲ್ಲಿನ ಕಲ್ಲು ತೆಗೆಸಲು ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆಯ ಬಳಿಕ ಮನೆಗೆ ಮರಳಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ನಡುವೆ ಹಿರಿಯ ನಟ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿಯುತ್ತಲೇ ಎಲ್ಲೆಡೆಗಳಿಂದ ಅವರ ಚೇತರಿಕೆಗೆ ಹಾರೈಕೆಗಳು ಕೇಳಿಬರುತ್ತಿವೆ. ಇತ್ತೀಚೆಗೆ ಬಿಡುಗಡೆಗೊಂಡ ಕಾಶ್ಮೀರಿ ಫೈಲ್ಸ್‌ ಚಿತ್ರದಲ್ಲಿ ಮನೋಜ್ಞ ಅಭಿನಯದ ಮೂಲಕ ಮತ್ತಷ್ಟು ಅಭಿಮಾನಿಗಳನ್ನು ಗಳಿಸಿರುವ ‘ಬಾಲಿವುಡ್‌ ದಾದಾ’ ಅವರ ಚೇತರಿಕೆಗೆ ರಾಜಕೀಯ ಗಣ್ಯರೂ ಹಾರೈಸುತ್ತಿದ್ದಾರೆ.

ಬಿಜೆಪಿಯ ಮುಖಂಡ ಸಂಜಯ್ ಸಿಂಗ್ ಮತ್ತು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಡಾ.ಅನುಪಮ್ ಹಜ್ರಾ ಬಂಗಾಳಿ ಭಾಷೆಯಲ್ಲಿ ಟ್ವೀಟ್​ ಮಾಡಿ, 'ಬೇಗ ಗುಣಮುಖರಾಗಿ ಮಿಥುನ್​ ದಾದಾ ಎಂದು ಬರೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net