ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ಖ್ಯಾತ ನಟ ವಿಜಯಕಾಂತ್‌: ಆರೋಗ್ಯ ಸ್ಥಿತಿ ಗಂಭೀರ

vijayakanth
Published on

ಚೆನ್ನೈ: ತಮಿಳಿನ ಪ್ರಖ್ಯಾತ ನಟ ಹಾಗೂ ದೇಸಿಯ ಮುರಪೊಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಸಂಸ್ಥಾಪಕ ವಿಜಯಕಾಂತ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ವಿಜಯಕಾಂತ್‌ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆರೋಗ್ಯದಲ್ಲಿ ಏರುಪೇರಾಗಿರುವುದಾಗಿ ವರದಿಯಾಗಿದೆ.

ಇಂದು ಬೆಳಗ್ಗೆ ತೀವ್ರವಾದ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ನಸುಕಿನ ಸುಮಾರು 3 ಗಂಟೆಗೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ ಎಂದು ಅವರ ಕುಟುಂಬದ ಮೂಲಗಳು ಹೇಳಿವೆ. ಕಳೆದ ವರ್ಷ ಕೋವಿಡ್‌ ಒಂದನೇ ಅಲೆಯಲ್ಲಿ ಇವರಿಗೆ ಸೋಂಕು ತಗುಲಿತ್ತು. ಚೆನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು ಹಾಗೂ ಚಿಕಿತ್ಸೆ ಪಡೆದ ಕೆಲವು ದಿನಗಳ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net