More

    ಕೋಳಿಕ್ಕೋಡ‌ ವಿಮಾನ ದುರಂತ: ಮೃತರ ಸಂಖ್ಯೆ 14ಕ್ಕೆ ಏರಿಕೆ- 15 ಮಂದಿಯ ಸ್ಥಿತಿ ಗಂಭೀರ

    ತಿರುವನಂತಪುರಂ​: ದುಬೈನಿಂದ 191 ಪ್ರಯಾಣಿಕರನ್ನು ಹೊತ್ತು ಕೇರಳ ತಲುಪಿದ ಏರ್​ ಇಂಡಿಯಾ ವಿಮಾನ ಕರೀಪುರದಲ್ಲಿರುವ ಕೋಳಿಕ್ಕೊಡ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕ್ರ್ಯಾಶ್ ಲ್ಯಾಂಡಿಂಗ್ ಆದ ಪರಿಣಾಮ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿದೆ.

    ಪೈಲೆಟ್‌ ಸೇರಿದಂತೆ 14 ಮಂದಿ ಮೃತಪಟ್ಟಿರುವುದಾಗಿ ಮಲಪ್ಪುರಂ ಎಸ್‌ಪಿ ಮಾಹಿತಿ ನೀಡಿದ್ದಾರೆ. 123 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ 15 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    ವಿಮಾನದಲ್ಲಿ ಇಬ್ಬರು ಪೈಲೆಟ್‌ಗಳು ಇದ್ದು, ಇಬ್ಬರ ಜೀವಕ್ಕೂ ಹಾನಿಯಾಗಿದೆಯೇ ಇಲ್ಲವೇ ಎಂಬ ಬಗ್ಗೆ ಈಗಲೇ ಹೇಳುವುದು ಕಷ್ಟ ಎಂದು ಎಸ್‌ಪಿ ಹೇಳಿದ್ದಾರೆ.

    ನಡೆದದ್ದು ಏನು? ಕೇರಳದಲ್ಲಿ ವಿಮಾನ ಕ್ರ್ಯಾಶ್ ಲ್ಯಾಂಡಿಂಗ್: ಪೈಲಟ್ ಸೇರಿ 11ಕ್ಕೇರಿದ ಸಾವಿನ ಸಂಖ್ಯೆ

     ರಾಷ್ಟ್ರಪತಿ, ಪ್ರಧಾನಿ ಸಂತಾಪ: ಘಟನೆಗೆ ರಾಷ್ಟ್ರಪತಿ ರಾಮ್‌ನಾಥ್‌ ಕೋವಿಂದ್‌ ಹಾಗೂ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಗಾಯಗೊಂಡಿರುವವರು ಶೀಘ್ರದಲ್ಲಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಮೃತಪಟ್ಟಿರುವವರ ಕುಟುಂಬ ವರ್ಗಕ್ಕೆ ಸಾವಿನ ದುಃಖವನ್ನು ಸಹಿಸಿಕೊಳ್ಳುವ ಶಕ್ತಿ ಬರಲಿ ಎಂದು ಪ್ರಾರ್ಥಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರ ಜತೆ ಮಾತುಕತೆ ನಡೆಸಿರುವುದಾಗಿ ಹೇಳಿದ್ದಾರೆ.

    ತಾಯ್ನೆಲ ಸ್ಪರ್ಶಿಸಲು ಹಾತೊರೆದವರಿಗೆ ಕಾಡಿತ್ತು ದುಃಸ್ವಪ್ನ; ‘ವಂದೇ ಭಾರತ’ ವಿಮಾನವದು; ಟೇಬಲ್​ ಟಾಪ್​ ನಿಲ್ದಾಣದಲ್ಲಿ ಮತ್ತೊಂದು ದುರಂತ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts