More

    ಲ್ಯಾಂಡಿಂಗ್‌ ಆಗದೇ ಆಕಾಶದಲ್ಲೇ ಗಂಟೆಗಟ್ಟಲೆ ಹಾರಿದ ಸಂಸದ ಅನಂತ್‌ಕುಮಾರ್‌ ಇದ್ದ ವಿಮಾನ

    ಹುಬ್ಬಳ್ಳಿ: ರಾಜ್ಯದ ಹಲವು ನಗರಗಳಲ್ಲಿ ಇಂದು ಕೂಡ ಧಾರಾಕಾರ ಮಳೆ ಮುಂದುವರೆದಿದೆ. ಇದರಿಂದ ಹಲವು ಕಡೆಗಳಲ್ಲಿ ವಿಮಾನ ಹಾರಾಟಗಳ ಸಂಚಾರದಲ್ಲಿಯೂ ಅಸ್ತವ್ಯಸ್ತ ಉಂಟಾಗಿದೆ.

    ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳಿದ ಇಂಡಿಗೋ ವಿಮಾನವನ್ನು ಹವಾಮಾನ ವೈಪರೀತ್ಯದಿಂದ ಲ್ಯಾಂಡ್ ಮಾಡಲಾಗದೆ ಆಕಾಶದಲ್ಲೇ ಕೆಲಕಾಲ ಹಾರಾಟ ನಡೆಸಬೇಕಾಯಿತು. ಇದರಿಂದ ಕೆಲಕಾಲ ಆತಂಕ ವಾತಾವರಣವೂ ಸೃಷ್ಟಿಯಾಗಿತ್ತು.

    ಈ ವಿಮಾನದಲ್ಲಿ ಸಂಸದ ಅನಂತಕುಮಾರ ಹೆಗಡೆ ಅವರೂ ಪ್ರಯಾಣಿಸುತ್ತಿದ್ದರು. ಇವರ ಜತೆ ಇನ್ನೂ 46 ಪ್ರಯಾಣಿಕರು ಇದ್ದರು.

    ಈ ವಿಮಾನ ಹುಬ್ಬಳ್ಳಿ ನಿಲ್ದಾಣದಲ್ಲಿ ಬೆಳಗ್ಗೆ 8:55ಕ್ಕೆ ಲ್ಯಾಂಡ್ ಆಗಬೇಕಿತ್ತು. ಆದರೆ, ಹುಬ್ಬಳ್ಳಿಯಲ್ಲಿ ಹವಾಮಾನ ವೈಪರೀತ್ಯದ ಕಾರಣ ಎಟಿಸಿ ಏರ್ ಟ್ರಾಫಿಕ್ ಕಂಟ್ರೋಲ್‌ನಿಂದ ಲ್ಯಾಂಡಿಂಗ್‍ಗೆ ಅನುಮತಿ ದೊರೆಯಲಿಲ್ಲ. ಹಾಗಾಗಿ ಬೆಳಗ್ಗೆ ಕೆಲ ಕಾಲ ಲ್ಯಾಂಡಿಂಗ್‍ಗೆ ಅವಕಾಶ ನೀಡಲು ಸಾಧ್ಯವಾಗಿರಲಿಲ್ಲ.

    ಇದನ್ನೂ ಓದಿ: ಉಡುಪಿಯಲ್ಲಿ ಬೀಸಿದ ಸುಂಟರಗಾಳಿಗೆ ಹಾರಿದ ಮನೆ ಚಾವಣಿ: ಇಬ್ಬರಿಗೆ ಗಾಯ, ಕಂಪೌಂಡ್ ಗೋಡೆ ಕುಸಿತ

    ಈ ಹಿನ್ನೆಲೆಯಲ್ಲಿ ಸುಮಾರು ಒಂದೂವರೆ ಗಂಟೆ ಕಾಲ ವಿಮಾನ ಆಗಸದಲ್ಲೇ ಸುತ್ತಾಡತೊಡಗಿತು. ಇದರಿಂದಾಗಿ ಅನಂತ್‌ಕುಮಾರ್‌ ಸೆರಿದಂತೆ ವಿಮಾನದಲ್ಲಿದ್ದ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿತ್ತು. ಅಂತೂ ಆಕಾಶದಲ್ಲಿಯೇ ಸುತ್ತಾಡಿ ಸುತ್ತಾಡಿ ಕೊನೆಗೆ 10:25ಕ್ಕೆ ವಿಮಾನ ಸುರಕ್ಷಿತವಾಗಿ ಲ್ಯಾಂಡ್​ ಆಗಿದೆ. ಈ ವೇಳೆ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ ಎಂದು ವರದಿಯಾಗಿದೆ.

    ಕಳೆದ ವಾರ ಭಾರೀ ಮಳೆಯಿಂದಾಗಿ ಕೇರಳದಲ್ಲಿ ಏರ್​ ಇಂಡಿಯಾ ವಿಮಾನ ಅಪಘಾತಕ್ಕೆ ತುತ್ತಾಗಿ 18 ಜನರು ಮೃತಪಟ್ಟಿದ್ದರು. ಈ ಘಟನೆ ಹಿನ್ನೆಲೆಯಲ್ಲಿ ಆತಂಕ ಮತ್ತೂ ಹೆಚ್ಚಾಗಿತ್ತು ಎನ್ನಲಾಗಿದೆ.

    ಈ ನಡುವೆ ಹುಬ್ಬಳ್ಳಿ-ಧಾರವಾಡದ ತುಪ್ಪರಿ ಹಳ್ಳದ ತಾತ್ಕಾಲಿಕ ಸೇತುವೆ ಮುಳುಗಡೆ ಆಗಿದೆ.

    ಸೆಪ್ಟೆಂಬರ್‌ನಲ್ಲಿ ಶಾಲೆ ಶುರುವಾಗತ್ತಾ? ಸಚಿವ ಸುರೇಶ್‌ಕುಮಾರ್‌ ಏನು ಹೇಳಿದ್ದಾರೆ ಕೇಳಿ…

    ಮಚ್ಚು ಹಿಡಿದು ಚಿನ್ನದಂಗಡಿಗೆ ನುಗ್ಗಿದವನ ಚಚ್ಚಿದಳು ಚಿಕ್ಕಮಗಳೂರು ಮಹಿಳೆ!

    ನಾಯಿಗಳು ಕಚ್ಚಿ ತಿಂದ ಕರೊನಾ ಸೋಂಕಿತನ ಶವ!

    ಪಾಕ್‌ಗೆ ಬಿಗ್‌ ಷಾಕ್‌: ಸಾಲವೂ ಬಂದ್‌, ತೈಲವೂ ಬಂದ್‌ ಎಂದ ಸೌದಿ ಅರೇಬಿಯಾ!

    ಫ್ರಿಜ್‌ ಟ್ರೇ ಬಳಸಿ ಆನ್‌ಲೈನ್‌ ಕ್ಲಾಸ್‌: ಶಿಕ್ಷಕಿಯ ಪ್ಲ್ಯಾನ್‌ಗೆ ಅಪಾರ ಮೆಚ್ಚುಗೆ

    ದಫನ್‌ ಆಗಿದ್ದವ ರಾತ್ರಿ ಹೆಂಡತಿಗೆ ಪ್ರತ್ಯಕ್ಷನಾಗಿ ನಾನೇ ನಿನ್ನ ಗಂಡ ಎಂದ!

    ಸರ್ಕಾರಿ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಪತ್ನಿ ಡೆಲಿವರಿ: ಶ್ಲಾಘನೆಗಳ ಮಹಾಪೂರ

    ಹೋಟೆಲ್‌ನಲ್ಲಿ ರಾತ್ರಿ ಕಳೆದ ಪ್ರೇಮಿಗಳು ಮಾರನೆಯ ದಿನ ಶವವಾದರು!

    ಅತ್ಯಂತ ಕ್ರೂರವಾಗಿ ಲಾಕಪ್‌ ಡೆತ್‌ ಮಾಡಿದ್ದ ಆರೋಪಿ ಪೊಲೀಸ್‌ ಕರೊನಾಕ್ಕೆ ಬಲಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts