ರಾಯಭಾರಿ ಮಗಳ ಕಿಡ್​ನ್ಯಾಪ್: ಜಾಗತಿಕವಾಗಿ ಪಾಕಿಸ್ತಾನ ತಲೆ ಎತ್ತದಂತೆ ಮಾಡಿದ ಅಫ್ಘಾನಿಸ್ತಾನ್​!

pak
Published on

ಇಸ್ಲಾಮಾಬಾದ್: ಪಾಕಿಸ್ತಾನದ ದುಷ್ಕರ್ಮಿಗಳು ಆಫ್ಘಾನಿಸ್ತಾನ ರಾಯಭಾರಿ ಮಗಳನ್ನು ಅಪಹರಿಸಿ ಚಿತ್ರಹಿಂಸೆ ನೀಡಿದ್ದ ವಿವಾದ ಇದೀಗ ಮಹತ್ವದ ತಿರುವನ್ನು ಪಡೆದುಕೊಂಡಿದೆ. ಈ ಘಟನೆಯ ನಂತರ ಪಾಕಿಸ್ತಾನ ಜಾಗತಿಕವಾಗಿ ತೀವ್ರ ಮುಖಭಂಗ ಅನುಭವಿಸುವಂತಾಗಿದ್ದು, ತಲೆತಗ್ಗಿಸುವಂತಾಗಿದೆ.

ಜುಲೈ 16ರಂದು ಅಫ್ಘಾನಿಸ್ತಾನದ ರಾಯಭಾರಿಯ ಮಗಳಾದ ಸಿಲ್‌ಸಿಲಾ ಅಲಿಖಿಲ್ ಅವರನ್ನು ಅಪಹರಣ ಮಾಡಲಾಗಿತ್ತು. ಅವರು ತಮ್ಮ ಮನೆಗೆ ತೆರಳುತ್ತಿದ್ದ ಮಾರ್ಗಮಧ್ಯೆ ಅಪರಿಚಿತರು ಅವರನ್ನು ಕಿಡ್​ನ್ಯಾಪ್​ ಮಾಡಿ ಚಿತ್ರಹಿಂಸೆ ನೀಡಿದ್ದರು. ಅಪಹರಣಕಾರರಿಂದ ಬಿಡುಗಡೆ ಹೊಂದಿದ ಬಳಿಕ ಸಿಲ್‌ಸಿಲಾ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಅಪಹರಣದಿಂದ ತೀವ್ರ ಕೆಂಡಾಮಂಡಲವಾಗಿರುವ ಅಫ್ಘಾನಿಸ್ತಾನ, ಪಾಕಿಸ್ತಾನದಲ್ಲಿರುವ ತನ್ನ ರಾಯಭಾರಿ ಮತ್ತು ಹಿರಿಯ ಅಧಿಕಾರಿಗಳನ್ನು ವಾಪಸ್ ಕರೆಸಿಕೊಂಡಿದೆ. ಎಲ್ಲಾ ಭದ್ರತಾ ಬೆದರಿಕೆಗಳನ್ನು ಪರಿಹರಿಸುವವರೆಗೆ ಆಫ್ಘಾನಿಸ್ತಾನದ ರಾಯಭಾರಿ ಮತ್ತು ಪಾಕಿಸ್ತಾನದ ಹಿರಿಯ ರಾಜತಾಂತ್ರಿಕರನ್ನು ಆಫ್ಘನ್ ಸರ್ಕಾರ ವಾಪಸ್ ಕರೆಸಿಕೊಳ್ಳಲಾಗುವುದು ಎಂದು ಸರ್ಕಾರ ಹೇಳಿದೆ.

ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಎದುರಾಗಿದೆ. ಪಾಕಿಸ್ತಾನಕ್ಕೆ ಅಫ್ಘನ್ ನಿಯೋಗವು ಶೀಘ್ರದಲ್ಲೇ ಭೇಟಿ ನೀಡಲಿದ್ದು, ಈ ಪ್ರಕರಣ ಮತ್ತು ಎಲ್ಲಾ ಸಂಬಂಧಿತ ಸಮಸ್ಯೆಗಳ ಚರ್ಚೆಗೆ ಕ್ರಮ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net