

ನವದೆಹಲಿ : ಎಐಸಿಸಿ ಅಧ್ಯಕ್ಷರಾಗಿ ಯಾರನ್ನು ನೇಮಕ ಮಾಡಬೇಕು ಎಂಬ ಕುರಿತು ಇಂದು ನಡೆದ ಸುದೀರ್ಘ ಚರ್ಚೆಯಲ್ಲಿ, ಸೋನಿಯಾಗಾಂಧಿ ಅವರ ಹೆಸರೇ ಕೇಳಿಬಂದ ಹಿನ್ನೆಲೆಯಲ್ಲಿ, ಸದ್ಯ ಅವರೇ ಹಂಗಾಮಿ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.
ಕಾಯಂ ಅಧ್ಯಕ್ಷರನ್ನಾಗಿ ಯಾರನ್ನಾದರೂ ನೇಮಕ ಮಾಡುವವರೆಗೆ ಸೋನಿಯಾ ಗಾಂಧಿ ಅವರೇ ಮುಂದುವರೆಯಲಿ ಎಂದು ಇಂದು ನಡೆದಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಒಮ್ಮತದ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಆಗಸ್ಟ್ 10ಕ್ಕೆ ನನ್ನ ಎಐಸಿಸಿ ಆಧ್ಯಕ್ಷೆಯಾಗಿ ಮುಂದುವರಿಕೆ ಅವಧಿ ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಲು ಸೋನಿಯಾ ಗಾಂಧಿ ಮುಂದಾಗಿದ್ದರು. ಮುಂದಿನ ಅಧ್ಯಕ್ಷರು ಯಾರು ಎಂಬ ಬಗ್ಗೆ ಸುದೀರ್ಘ ಚರ್ಚೆ ನಡೆದಿತ್ತು.
ಅದರೆ ಕಾಂಗ್ರೆಸ್ ಮುಂಖಡರು ಸೋನಿಯಾ ಗಾಂಧಿ ಅವರೇ ಅಧ್ಯಕ್ಷರಾಗಬೇಕು ಎಂದು ಹೇಳಿದ ಹಿನ್ನೆಲೆಯಲ್ಲಿ ಹಾಗೂ ಸೋನಿಯಾ ಅವರ ಮನವೊಲಿಸುವಲ್ಲಿ ಸಕ್ಸಸ್ ಆಗಿರುವ ಕಾರಣ, ಹಂಗಾಮಿ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಮುಂದುವರೆದಿದ್ದಾರೆ ಎಂದು ತಿಳಿದುಬಂದಿದೆ.
. ಗಾಂಧಿ ಕುಟುಂಬದವರೇ ಎಐಸಿಸಿ ಅಧ್ಯಕ್ಷರಾಗಿ ಮುಂದುವರೆಯಬೇಕು ಎಂಬುದಾಗಿ ಕೆಲ ಕಾಂಗ್ರೆಸ್ ನಾಯಕರ ಒಂದು ಬಣ ಬೆಂಬಲಿಸಿತ್ತು. ಮತ್ತೆ ಗಾಂಧಿ ಕುಟುಂಬದವರೇತರರು ಎಐಸಿಸಿ ಅಧ್ಯಕ್ಷರಾಗಿ ನೇಮಕಕ್ಕೆ ಬೆಂಬಲ ಸೂಚಿಸಿದ್ದರು. ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್ ಗಾಂಧಿ ಕೂಡ ಒಂದು ಹಂತದಲ್ಲಿ, ಗಾಂಧಿಯೇತರ ಟುಂಬದವರೇ ಅಧ್ಯಕ್ಷರಾಗಲಿ ಎಂದೂ ಹೇಳಿದ್ದರು.
ಕೊನೆಗೂ ಇದೀಗ ಕಾಯಂ ಅಧ್ಯಕ್ಷ ಸ್ಥಾನದ ಕುರಿತು ಅಂತಿಮ ತೀರ್ಮಾನಕ್ಕೆ ಬರದ ಕಾರಣ, ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷೆಯಾಗಿ ಮುಂದುವರೆಯಲಿದ್ದಾರೆ ಎಂದು ತಿಳಿದುಬಂದಿದೆ.