More

    ಬೆಳಗಾವಿ, ಬೆಂಗಳೂರಿನ ಮೇಲೆ ಬಿದ್ದಿದೆ ಓವೈಸಿ ಕಣ್ಣು: ಅಧಿಪತ್ಯ ಸಾಧಿಸಲು ‘ಮಾಜಿ’ಗಳ ಭೇಟಿ

    ಬೆಂಗಳೂರು: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಚುನಾವಣಾ ವಿವಾದ ಸದ್ಯ ಸುಪ್ರೀಂಕೋರ್ಟ್​ನಲ್ಲಿದೆ. ಶೀಘ್ರದಲ್ಲಿ ಚುನಾವಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್​ ನೀಡಿರುವ ಆದೇಶಕ್ಕೆ ಸುಪ್ರೀಂಕೋರ್ಟ್​ ತಡೆ ನೀಡಿರುವ ಹಿನ್ನೆಲೆಯಲ್ಲಿ, ಅಂತಿಮ ಆದೇಶಕ್ಕಾಗಿ ಎಲ್ಲರೂ ಕಾತರರಾಗಿದ್ದಾರೆ.

    ಆದರೆ ಈ ನಡುವೆಯೇ, ಅಸಾದುದ್ದೀನ್ ಓವೈಸಿ ನೇತೃತ್ವದ ಅಖಿಲ ಭಾರತ ಮಜ್ಲಿಸ್-ಎ-ಇಟ್ಟೇಹಾದ್-ಉಲ್-ಮುಸ್ಲೀಮೀನ್ (ಎಐಎಂಐಎಂ) ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಗ್ರೇಟರ್ ಹೈದ್ರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವುದನ್ನು ಗಮನದಲ್ಲಿ ಇಟ್ಟುಕೊಂಡು ಬೆಂಗಳೂರಿನತ್ತ ಪಕ್ಷ ಚಿತ್ತ ಹರಿಸಿದೆ.

    ಇದಾಗಲೇ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಸ್ಪರ್ಧಿಸಲು ಎಐಎಂಐಎಂ ತೀರ್ಮಾನಿಸಿದ್ದು ಆ ನಿಟ್ಟಿನಲ್ಲಿಯೂ ಕಾರ್ಯಪ್ರವೃತ್ತವಾಗಿದೆ. ದೇಶಾದ್ಯಂತ ತನ್ನ ನೆಲೆಯನ್ನು ವಿಸ್ತರಿಸಲು ಬಯಸುತ್ತಿರು ಪಕ್ಷ, ಎಷ್ಟು ವಾರ್ಡ್​ಗಳಲ್ಲಿ ತಮ್ಮ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತಿದೆ ಎಂಬುದು ಸ್ಪಷ್ಟವಾಗಿಲ್ಲ. ಆದರೆ ಸೂಕ್ತ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದೆ.

    ಈ ಸಂಬಂಧ ಈಗಾಗಲೇ ಮುಸ್ಲಿಂ ಸಮುದಾಯದ ಬಿಬಿಎಂಪಿ ಮಾಜಿ ಸದಸ್ಯರನ್ನು ಸಂಪರ್ಕಿಸಿರುವ ಓವೈಸಿ ತಮ್ಮ ಪಕ್ಷದಿಂದಲೇ ಸ್ಪರ್ಧಿಸುವಂತೆ ಮನವೊಲಿಸುತ್ತಿದ್ದಾರೆ, ಜತೆಗೆ ಮುಸ್ಲಿಂ ಮತದಾರರು ಹೆಚ್ಚಿರುವ ಪ್ರದೇಶಗಳಲ್ಲಿರುವ ಪ್ರಬಲ ನಾಯಕರೊಂದಿಗೆ ಸಂಪರ್ಕ ಬೆಳೆಸಿಕೊಂಡಿದ್ದು ಅವರ ಮೂಲಕ ಪಕ್ಷದ ಬಲವರ್ಧನೆಗೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಕೆಲ ಮಾಜಿ ಶಾಸಕರು ಆ ಪಕ್ಷ ಸೇರಲು ತಯಾರಿ ನಡೆಸಿದ್ದಾರಂತೆ.

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಎಐಎಂಐಎಂ ರಾಜ್ಯ ಪ್ರಧಾನ ಕಾರ್ಯದರ್ಶಿ ಲತೀಫ್ ಖಾನ್ ಪಠಾಣ್, “ನಾವು ಈ ಹಿಂದೆ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಯೋಜಿಸಿದ್ದೆವು, ಆದರೆ ಸಿದ್ದರಾಮಯ್ಯ ಸರ್ಕಾರವು ವಿವಿಧ ತಂತ್ರಗಳನ್ನು ಬಳಸಿ ನಮ್ಮನ್ನು ತಡೆದಿದೆ. ಅದರ ಹೊರತಾಗಿಯೂ, ಈ ಹಿಂದೆ ನಮ್ಮೊಂದಿಗಿದ್ದ ಎಸ್‌ಡಿಪಿಐ ಅಭ್ಯರ್ಥಿ ಚುನಾವಣೆಯಲ್ಲಿ ಗೆದ್ದರು. ಆದರೆ ಈ ಬಾರಿ ನಾವು ಮೊದಲೇ ತಯಾರಿ ನಡೆಸುತ್ತಿದ್ದೇವೆ. ” ಎಂದಿದ್ದಾರೆ.

    “ಜನರಿಗೆ ಒಳ್ಳೆಯ ಕೆಲಸ ಮಾಡಿದ ಕಾರ್ಯಕರ್ತರನ್ನು ನಾವು ಬಯಸುತ್ತೇವೆ. ಸಮಿತಿಗಳು ಅಂತಹ ಅಭ್ಯರ್ಥಿಗಳನ್ನು ಗುರುತಿಸುತ್ತವೆ ಮತ್ತು ಪಕ್ಷದ ಮುಖಂಡರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ. ನಾವು ಯುವಕರಿಗೆ ಟಿಕೆಟ್ ನೀಡಲು ಉತ್ಸುಕರಾಗಿದ್ದೇವೆ ಎಂದಿದ್ದಾರೆ.

    ಸ್ಥಾಪನಾ ದಿನ ಇದ್ರೇನಂತೆ? ಅಜ್ಜಿ ನೋಡೋಕೆ ಹೋಗಿರ್ಬೋದು… ಎಲ್ಲಾದಕ್ಕೂ ಕಾರಣ ಕೊಡೋಕಾಗತ್ತಾ?

    ಮಗ ಹುಟ್ಟುತ್ತಲೇ ವಿಚಿತ್ರ ಅನುಭವ: ಮಂತ್ರವಾದಿ ನೀಡಿದ ಚಿಕಿತ್ಸೆ- ಮುಂದೆ ಆದದ್ದು ಭಯಾನಕ!

    2000 ವರ್ಷಗಳ ಹಿಂದೆಯೇ ಇತ್ತು ಫಾಸ್ಟ್​ಫುಡ್ ಮಳಿಗೆ​: ಇದು ಪತ್ತೆಯಾದದ್ದೇ ರೋಚಕ

    ಈ ಪತ್ರವನ್ನು ಗುಟ್ಟಾಗಿ ಬರೆಯುತ್ತಿದ್ದೇನೆ. ಈ ನತದೃಷ್ಟೆಗೆ ದಯವಿಟ್ಟು ನೆರವಾಗಿ ಮೇಡಂ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts