

ಕೋಲ್ಕತಾ: ಪಶ್ಚಿಮ ಬಂಗಾಳ ಚುನಾವಣೆಯ ಫಲಿತಾಂಶ ಬಹುತೇಕ ಮುಗಿಯುತ್ತಾ ಬಂದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಭಾರೀ ಮುನ್ನಡೆ ಸಾಧಿಸಿದ್ದು, ನಿರೀಕ್ಷೆಯಂತೆ ಗೆಲುವಿನತ್ತ ಹೆಜ್ಜೆ ಇಟ್ಟಿದೆ. ಇದರ ಬೆನ್ನಲ್ಲೇ ಮಮತಾ ಬ್ಯಾನರ್ಜಿಗೆ ಎಲ್ಲೆಡೆಯಿಂದ ಅಭಿನಂದನೆಗಳ ಸುರಿಮಳೆಯಾಗುತ್ತಿದೆ.
ಈ ನಡುವೆ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಅಖಿಲೇಶ್‌ಶ್ ಯಾದವ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟು ಟ್ವೀಟ್ ಮಾಡಿದ್ದಾರೆ. ಮಮತಾ ಬ್ಯಾನರ್ಜಿಯವರಿಗೆ ಅಭಿನಂದನೆ ಸಲ್ಲಿಸಿರುವ ಸಲ್ಲಿಸಿರುವ ಅವರು, 'ದೀದೀ, ಓ ದೀದೀ' ಎಂದು ಮೂದಲಿಸಿದ್ದವರಿಗೆ ಜನರೇ ಉತ್ತರ ಕೊಟ್ಟಿದ್ದಾರೆ, ಈಗ ಅವರೆಲ್ಲಿ ಹೋದರು ಎಂದ್ದು ದೀದಿ ಜಿಯೋ ದೀದಿ (ದೀದಿ ನೀವು ದೀರ್ಘ ಕಾಲ ಬಾಳಿ) ಎಂದಿದ್ದಾರೆ.
ಒಟ್ಟು 292 ಸ್ಥಾನಗಳ ಪೈಕಿ, ಈಗಿನವರೆಗೆ ಟಿಎಂಸಿ 200ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಮೂಲಕ ಗೆಲುವಿಗೆ ಬೇಕಾದ ಬಹುಮತದ 147 ಮ್ಯಾಜಿಕ್ ನಂಬರ್ ದಾಟಿದೆ. ಬಿಜೆಪಿ 83 ಸ್ಥಾನಗಳಲ್ಲಿ ಮುನ್ನಡೆ ಪಡೆದಿದ್ದರೆ ಕಾಂಗ್ರೆಸ್ ಒಂದೇ ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ.
ಆದರೆ ಅದೇ ಇನ್ನೊಂದೆಡೆ, ಮಮತಾ ಬ್ಯಾನರ್ಜಿ ಹಾಗೂ ಸುವೇಂದು ಅಧಿಕಾರಿ ನಡುವಿನ ಪೈಪೋಟಿ ಮುಂದುವರೆದಿದೆ.