ಅಮಿತ್‌ ಷಾ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ- ಓಣಂ ಶುಭಾಶಯ

Amith Shah
Published on

ನವದೆಹಲಿ : ಪೋಸ್ಟ್‌ ಕೋವಿಡ್‌ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರು ಗುಣಮುಖರಾಗಿದ್ದು ಇಂದು ಬೆಳಗ್ಗೆ ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಆಗಿದ್ದಾರೆ.

ಆಗಸ್ಟ್ 2ರಂದು, ಕರೊನಾ ಪಾಸಿಟಿವ್‌ ಬಂದಿತ್ತು. ನಂತರ ಅವರು ಮೆಡಂತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ನೆಗೆಟಿವ್‌ ಬಂದ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆ ಮಾಡಲಾಗಿತ್ತು. ನಂತರ ಆಗಸ್ಟ್ 18ರಂದು ಆಯಾಸ ಕಾಣಿಸಿಕೊಂಡಿತ್ತು.

ಈ ಹಿನ್ನೆಲೆಯಲ್ಲಿ ಅವರನ್ನು ಪೋಸ್ಟ್‌ ಕೋವಿಡ್‌ ಚಿಕಿತ್ಸೆಗಾಗಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಏಮ್ಸ್) ದಾಖಲು ಮಾಡಲಾಗಿತ್ತು. ಇದೀಗ ಅವರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಬಿಡುಗಡೆಯಾಗಿದ್ದಾರೆ.

ನಿನ್ನೆ ಅವರನ್ನು ಪರೀಕ್ಷೆಗೆ ಒಳಪಡಿಸಿದ್ದಾಗ ಸಂಪೂರ್ಣ ಗುಣಮುಖರಾಗಿರುವುದು ತಿಳಿದುಬಂದಿತ್ತು. ಇಂದು ಮತ್ತೊಮ್ಮೆ ತಪಾಸಣೆ ನಡೆಸಿ ನಂತರ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಏಮ್ಸ್ ವೈದ್ಯರು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಟ್ವೀಟ್‌ ಮೂಲಕ ಅಮಿತ್‌ ಷಾ ಅವರು ಓಣಂ ಶುಭಾಶಯ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net