ಆ.4ಕ್ಕೆ ಅಮಿತ್ ಷಾ ಬೆಂಗಳೂರು ಭೇಟಿ: ಸಿಎಂ ಬೊಮ್ಮಾಯಿ‌ ಮಾಹಿತಿ

amith sha april
Published on

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆ.4ರಂದು ಬೆಂಗಳೂರಿಗೆ ಬರುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಸುದ್ದಿಗಾರರಿಗೆ ಮಂಗಳವಾರ ಉತ್ತರಿಸಿದ ಅವರು ಸಿಐಐ ಆಯೋಜಿಸಿರುವ ಸಿದ್ಧಿ- ಸಂಕಲ್ಪ ಕಾರ್ಯಕ್ರಮದಲ್ಲಿ ಷಾ ಪಾಲ್ಗೊಂಡು ದೆಹಲಿಗೆ ಮರಳಲಿದ್ದಾರೆ ಎಂದರು.

ಪರಾಮರ್ಶೆ: ರಾಜ್ಯದಲ್ಲಿ ಮಳೆಯಿಂದ ಆಗಿರುವ ಹಾನಿ ಹಾಗೂ ಕೈಗೊಂಡ ಪರಿಹಾರ ಕ್ರಮಗಳ ಪರಾಮರ್ಶೆ, ಮಂಕಿಫಾಕ್ಸ್ ರೋಗಕ್ಕೆ ಸಂಬಂಧಿಸಿದಂತೆ ಸಚಿವರು ಮತ್ತು ಅಧಿಕಾರಿಗಳ ಜತೆ ಚರ್ಚಿಸುವುದಕ್ಕಾಗಿ ಇಂದು ಮಧ್ಯಾಹ್ನ ಎರಡು ಪ್ರತ್ಯೇಕ ಸಭೆಗಳನ್ನು ನಡೆಸುವೆ ಎಂದು ಸಿಎಂ ಬೊಮ್ಮಾಯಿ‌ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net