VIDEO: ಕಾಳಿಯಮ್ಮ ಉತ್ಸವದಲ್ಲಿ ಭಕ್ತರ ಮೇಲೆ ಉರುಳಿದ ರಥ: ಇಬ್ಬರ ಸಾವು, ಮೂವರ ಸ್ಥಿತಿ ಗಂಭೀರ

1288188
Published on

ಆನೇಕಲ್ (ಬೆಂಗಳೂರು ಗ್ರಾಮಾಂತರ): ಕಾಳಿಯಮ್ಮ ರಥೋತ್ಸವದ ವೇಳೆ ರಥದ ಚಕ್ರ ತುಂಡಾಗಿ ಭಕ್ತರ ಮೇಲೆ ಬಿದ್ದು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಮಿಳುನಾಡು ಗಡಿಭಾಗದ ಮಾದೇನಹಳ್ಳಿಯಲ್ಲಿ ನಡೆದಿದೆ.

ಮೃತರು ಮಾದೇನಹಳ್ಳಿ ಮನೋಹರಂ ಮತ್ತು ಶರವಣನ್. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಳಿಯಮ್ಮ ದೇವಾಲಯದ ರಥೋತ್ಸವದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಪ್ರತಿವರ್ಷದಂತೆ ಈ ವರ್ಷವೂ ಕಾಳಿಯಮ್ಮ ರಥೋತ್ಸವವನ್ನು ಅದ್ದೂರಿಯಾಗಿ ಮಾಡಲಾಗಿತ್ತು. ರಥವನ್ನು ನೂರಾರು ಭಕ್ತರು ಎಳೆದುಕೊಂಡು ಹೋಗುವ ವೇಳೆ ರಥದ ಚಕ್ರ ತುಂಡಾಗಿ ಭಕ್ತರ ಮೇಲೆ ಬಿದ್ದಿದೆ.

ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಜಾತ್ರೆಯಲ್ಲಿ ಸುಮಾರು 18 ಹಳ್ಳಿಯ ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು. ಘಟನೆಗೆ ಸಂಬಂಧಿಸಿದಂತೆ ಪಾಪರಪಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿಡಿಯೋ ಇಲ್ಲಿದೆ ನೋಡಿ:

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net