More

    ಅಂಗನವಾಡಿಯಲ್ಲಿ ಸಹಾಯಕಿಯರ 171 ಹುದ್ದೆಗೆ ಅರ್ಜಿ ಆಹ್ವಾನ- ವಿಜಯಪುರದಲ್ಲಿ ಅವಕಾಶ

    ವಿಜಯಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ 7 ತಾಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಶಿಶು ಅಭಿವೃದ್ಧಿ ಇಲಾಖೆ ಮಹಿಳೆಯರಿಂದ ಆನ್​ಲೈನ್​ ಅರ್ಜಿ ಆಹ್ವಾನಿಸಿದೆ.

    ಕಾರ್ಯಕರ್ತೆ: 15
    ಸಹಾಯಕಿ: 156
    ಒಟ್ಟು: 171

    ವಿಜಯಪುರ ಜಿಲ್ಲೆಯ 7 ತಾಲೂಕುಗಳ ವ್ಯಾಪ್ತಿಯಲ್ಲಿನ ಇಂಡಿ, ಚಡಚಣ, ಸಿಂದಗಿ, ವಿಜಯಪುರ ಗ್ರಾಮೀಣ, ವಿಜಯಪುರ ನಗರ, ಬಸವನ ಬಾಗೇವಾಡಿ, ಮುದ್ದೇಬಿಹಾಳದ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಗ್ರಾಮಗಳ ಅಂಗನವಾಡಿಗಳಲ್ಲಿ ಹುದ್ದೆಗಳು ಖಾಲಿ ಇವೆ.

    ಗೌರವಧನದ ಆಧಾರದ ಮೇಲೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ನೇಮಕ ಮಾಡಿಕೊಳ್ಳಲಾಗುವುದು. ಸಹಾಯಕಿ ಹುದ್ದೆಗೆ ಅಂಗವಿಕಲರು ಅರ್ಹರಾಗಿರುವುದಿಲ್ಲ. ಅಭ್ಯಥಿರ್ಗಳು ಜನನ ಪ್ರಮಾಣಪತ್ರ, ವಿದ್ಯಾರ್ಹತೆ ಪ್ರಮಾಣಪತ್ರ, ವಾಸಸ್ಥಳ ದೃಢೀಕರಣ ಪತ್ರ (ತಹಸೀಲ್ದಾರ್​ ಕಚೇರಿಯಿಂದ ಪಡೆದದ್ದು), ಜಾತಿ ಪ್ರಮಾಣಪತ್ರವನ್ನು ಸಲ್ಲಿಸಬೇಕು. ಆನ್​ಲೈನ್​ ಅರ್ಜಿಗಳಿಗೆ ಮಾತ್ರ ಮಾನ್ಯತೆ ಇದ್ದು, ದಾಖಲೆಗಳು ಅಸ್ಪಷ್ಟವಾಗಿದ್ದರೆ ಅರ್ಜಿ ತಿರಸ್ಕರಿಸಲಾಗುವುದು.

    ಅರ್ಹತೆಗಳು: ಕಾರ್ಯಕರ್ತೆ ಹುದ್ದೆಗೆ ಎಸ್ಸೆಸ್ಸೆಲ್ಸಿ, ಸಹಾಯಕಿಯರ ಹುದ್ದೆಗೆ ಕನಿಷ್ಠ 4ನೇ ತರಗತಿ, ಗರಿಷ್ಠ 9ನೇ ತರಗತಿ. ಕನ್ನಡ ಭಾಷೆ ಜ್ಞಾನ ಅವಶ್ಯ. ಕನಿಷ್ಠ 18ವರ್ಷ, ಗರಿಷ್ಠ 35 ವರ್ಷ. ಅಂಗವಿಕಲರಿಗೆ 10 ವರ್ಷ ವಯೋಸಡಿಲಿಕೆ ಇದೆ.

    ಗೌರವಧನ
    ಈ ನೇಮಕಾತಿಗಳು ಗೌರವಧನ ಆಧಾರಿತವಾಗಿವೆ. ಕಾರ್ಯಕರ್ತೆಗೆ ಮಾಸಿಕ 10,000 ರೂ, ಸಹಾಯಕಿಯರಿಗೆ 5,000 ರೂ. ವೇತನ ನಿಗದಿಯಾಗಿದೆ.

    ಅರ್ಜಿ ಸಲ್ಲಿಸಲು ಕೊನೇ ದಿನ: 3.3.2022

    ಅಧಿಸೂಚನೆಗೆ: https://bit.ly/3ozEDHM

    ಮಾಹಿತಿಗೆ: https://anganwadirecruit.kar.nic.in

    ಪದವೀಧರರರಾ? ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಖಾಲಿ ಇವೆ 48 ಹುದ್ದೆಗಳು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts