ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಿಕರಿಗೆ ಗುಡ್​ ನ್ಯೂಸ್​: ಗೌರವ ಧನ ಹೆಚ್ಚಳ

anganwadi
Published on

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಚೊಚ್ಚಲ ಬಜೆಟ್​ ಅನ್ನು ಮಂಡನೆ ಮಾಡುತ್ತಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಭರ್ಜರಿ ಗುಡ್​ ನ್ಯೂಸ್​ ಕೊಟ್ಟಿರುವ ಮುಖ್ಯಮಂತ್ರಿಗಳು, ಗೌರವಧನವನ್ನು ಹೆಚ್ಚಳ ಮಾಡಿರುವುದಾಗಿ ಹೇಳಿದ್ದಾರೆ.

ಆಶಾ ಕಾರ್ಯಕರ್ತೆಯರು ಸೇರಿ ಹಲವರ ಗೌರವ ಧನ ಹೆಚ್ಚಳ ಮಾಡಿ ಘೋಷಿಸಿದ್ದಾರೆ. ಆಶಾ ಕಾರ್ಯಕರ್ತರು, ಗ್ರಾಮ ಸಹಾಯಕರಿಗೆ 1000 ರೂಗಳು, ಬಿಸಿಯೂಟ ತಯಾರಿಕರಿಗೂ ತಲಾ 1000 ಗೌರವ ಧನ ಹೆಚ್ಚಳ ಮಾಡಲಾಗಿದೆ.

ಇದರ ಜತೆಗೆ, ಅಂಗನವಾಡಿ ಕಾರ್ಯಕರ್ತರಿಗೂ ಗೌರವ ಧನ ಹೆಚ್ಚಳ ಮಾಡಲಾಗಿದೆ. ಅವರ ಸೇವೆಗಳ ಅನುಭವದ ಆಧಾರದ ಮೇಲೆ 1000 ರೂಪಾಯಿಯಿಂದ 1500 ರೂಗಳ ಹೆಚ್ಚಳ ಮಾಡಲಾಗುವುದು. ಪ್ರವಾಸಿ ಗೈಡ್‌ಗಳಿಗೆ ಮಾಸಿಕ 2000 ಪ್ರೋತ್ಸಾಹ ಗೌರವ ಧನ ನೀಡಲಾಗುವುದು ಎಂದು ಘೋಷಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net