ಅಣ್ಣಾಮಲೈ ಜೀವಕ್ಕೆ ಆಪತ್ತು- ವೈ ಪ್ಲಸ್​ ಭದ್ರತೆ ಒದಗಿಸಿದ ಸರ್ಕಾರ

annamalai
Published on

ಚೆನ್ನೈ: ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ ಸದ್ಯ ರಾಜಕೀಯದಲ್ಲಿ ಬಿಜಿಯಾಗಿದ್ದಾರೆ. ನಾಡು ಬಿಜೆಪಿ ಘಟಕದ ಉಪಾಧ್ಯಕರಾಗಿರುವ ಅವರು ಸದ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ.

ಈ ಸಂದರ್ಭದಲ್ಲಿ ಅವರ ಜೀವಕ್ಕೆ ಬೆದರಿಕೆ ಇರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ಸಿಕ್ಕಿದೆ. ಕರ್ನಾಟಕದಲ್ಲಿ ದಿಟ್ಟ ಪೊಲೀಸ್​ ಅಧಿಕಾರಿ ಎಂದು ಹೆಸರು ಪಡೆದು ಕರ್ನಾಟಕದ ಸಿಂಹ ಎಂದೇ ಖ್ಯಾತಿ ಪಡೆದಿರುವ ಅಣ್ಣಾಮಲೈ ಅವರು ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಂತೆಯೇ ಅವರ ಜೀವಕ್ಕೆ ಬೆದರಿಕೆ ಇರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಅವರಿಗೆ ಸಾಕಷ್ಟು ಕರೆಗಳು ಬಂದ ಕಾರಣ ಭದ್ರತೆ ಹೆಚ್ಚಿಸಲಾಗಿದ್ದು, ಇದೀಗ ವೈ ಪ್ಲಸ್​ ಭದ್ರತೆ ನೀಡಲಾಗಿದೆ. ಕೆಲವು ತಿಂಗಳಿನಿಂದ ನನಗೆ ಬೆದರಿಕೆ ಕರೆಗಳು ಬರುತ್ತಿದೆ. ಈ ಹಿನ್ನಲೆ ಭದ್ರತೆಯನ್ನು ಪೊಲೀಸರು ನೀಡಿದ್ದಾರೆ ಅಣ್ಣಾ ಮಲೈ ತಿಳಿಸಿದ್ದಾರೆ.

ಕೆಲ ಮಾವೋವಾದಿ ಮತ್ತು ಪಿಎಫ್​ಐ ಗುಂಪುಗಳಿಂದ ಬೆದರಿಕೆ ಬರುತ್ತಿರುವುದಾಗಿ ತಿಳಿದುಬಂದಿದೆ. ವೈ ಪ್ಲಸ್​ ಭದ್ರತೆ ಹಿನ್ನೆಲೆಯಲ್ಲಿ ಸದ್ಯ ಅವರ ಭದ್ರತೆಗೆ 11 ಜನ ಕಮಾಂಡೋಗಳು ಮತ್ತು ಇಬ್ಬರು ಗನ್​ ಮ್ಯಾನ್​ ಇರಲಿದ್ದು, ಅವರ ನಿವಾಸಕ್ಕೆ ಒಬ್ಬರು ಭದ್ರತೆಯನ್ನು ನಿಯೋಜಿಸಲಾಗಿದೆ.

10 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ಬಳಿಕ ಅವರು ಮೇ 2019ರಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net