ಬಾಲಿವುಡ್‌ ನಟ ಅರ್ಜುನ್‌ ಕಪೂರ್‌ಗೆ ಕರೊನಾ ಪಾಸಿಟಿವ್

arjun kapoor
Published on

ಮುಂಬೈ: ಬಾಲಿವುಡ್‌ ನಟ ಅರ್ಜುನ್‌ ಕಪೂರ್‌ ಅವರಿಗೆ ಕರೊನಾ ಸೋಂಕು ದೃಢಪಡಿಸಿದರು. ಈ ಕುರಿತು ಅವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.

ನಾನು ಕರೊನಾ ಪರೀಕ್ಷೆ ಮಾಡಿಸಿಕೊಂಡಿದ್ದೆ. ಅದರಲ್ಲಿ ಪಾಸಿಟಿವ್ ಎಂದು ಬಂದಿದೆ. ನನಗೆ ಕರೊನಾದ ಯಾವುದೇ ಗುಣಲಕ್ಷಣಗಳೂ ಇಲ್ಲ ಎಂದಿದ್ದಾರೆ.

ವೈದ್ಯರ ಸಲಹೆಯ ಮೆಲೆ ಮನೆಯಲ್ಲಿ ಪ್ರತ್ಯೇಕವಾಗಿದ್ದೇನೆ.

ಯಾರೂ ಭಯಪಡುವ ಅಗತ್ಯವಿಲ್ಲ. ನನ್ನ ಆರೋಗ್ಯ ಚೆನ್ನಾಗಿದೆ. ಪಾಸಿಟಿವ್‌ ಬಂದಿರುವ ಹಿನ್ನೆಲೆಯಲ್ಲಿ, ಪ್ರತ್ಯೇಕವಾಗಿ ಇರಲಿದ್ದೇನೆ ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ.

ನಿಮಗೆಲ್ಲಾ ತಿಳಿಸುವುದು ನನ್ನ ಕರ್ತವ್ಯವಾಗಿದೆ. ಈ ಕಾರಣದಿಂದ ಇಲ್ಲಿ ಮಾಹಿತಿ ನೀಡುತ್ತಿದ್ದೇನೆ. ನಿಮ್ಮೆಲ್ಲರ ಬೆಂಬಲಕ್ಕಾಗಿ ಮುಂಚಿತವಾಗಿ ಧನ್ಯವಾದ ಹೇಳುತ್ತಿದ್ದೇನೆ ಮತ್ತು ನನ್ನ ಆರೋಗ್ಯದ ಕುರಿತು ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಿದ್ದೇನೆ. ಇವು ವಿಶೇಷ ಮತ್ತು ಅನಿರೀಕ್ಷಿತ ಸಮಯವಾಗಿದ್ದು, ಎಲ್ಲಾ ಮಾನವೀಯ ಗುಣಗಳು ಈ ಸಾಂಕ್ರಾಮಿಕವನ್ನು ಹಿಮ್ಮೆಟ್ಟಿಸಲಿವೆ ಎಂಬ ನಂಬಿಕೆಯಿದೆ ಎಂದು ಬರೆದುಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net