More

    ನನ್ನದು ಅಕ್ರಮ ಬಂಧನ: ಹೈಕೋರ್ಟ್‌ ಬಾಗಿಲಿಗೆ ಅರ್ನಬ್‌ ಗೋಸ್ವಾಮಿ

    ಮುಂಬೈ: 2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಆರೋಪದ ಮೇಲೆ ಬಂಧಿತರಾಗಿರುವ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಮುಂಬೈ ಹೈಕೋರ್ಟ್ ಮೊರೆ ಹೋಗಿದ್ದಾರೆ.

    ಪೊಲೀಸರು ತಮ್ಮನ್ನು ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಅವರು ಆರೋಪಿಸಿರುವ ಅವರು, ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸಬೇಕೆಂದು ಕೂಡ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಕೋರಿಕೊಂಡಿದ್ದಾರೆ.

    ಅರ್ನಬ್ ಗೋಸ್ವಾಮಿ ಮತ್ತು ಇನ್ನಿಬ್ಬರು ತಮಗೆ 5.4 ಕೋಟಿ ರೂ. ಹಣ ನೀಡಬೇಕು. ಆ ಹಣ ನೀಡಲು ಅವರು ಒಪ್ಪುತ್ತಿಲ್ಲ. ಇದರಿಂದ ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಡೆತ್‌ನೋಟ್ ಬರೆದಿಟ್ಟು ಅನ್ವಯ್ ನಾಯಕ್​ ಆತ್ಮಹತ್ಯೆ ಮಾಡಿಕೊಂಡಿದ್ದರು. ಮಗನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ, ಅನ್ವಯ್ ಅವರ ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು.

    ರಿಪಬ್ಲಿಕ್ ಟಿವಿ ಸ್ಟುಡಿಯೋ ನಿರ್ಮಿಸುವಾಗ ಅನ್ವಯ್ ನಾಯಕ್ ಅವರೇ ಇಂಟೀರಿಯರ್ ಡಿಸೈನಿಂಗ್ ಮಾಡಿಕೊಟ್ಟಿದ್ದರು. ಅದರ ಹಣ ನೀಡದೆ ಸತಾಯಿಸಿದ್ದರಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಅರ್ನಬ್ ಗೋಸ್ವಾಮಿ ವಿರುದ್ಧ ಕೇಳಿಬಂದಿದೆ.

    ಇದನ್ನೂ ಓದಿ: ಕೈದಿಗಳಿಗೆ ಮೀಸಲಿಟ್ಟ ಕೋವಿಡ್‌ ಕೇಂದ್ರದಲ್ಲಿ ರಾತ್ರಿ ಕಳೆದ ಅರ್ನಬ್‌

    ಈ ಹಿನ್ನೆಲೆಯಲ್ಲಿ ಮುಂಬೈಯ ಲೋವರ್ ಪರೇಲ್‌ನಲ್ಲಿರುವ ಅರ್ನಬ್ ಗೋಸ್ವಾಮಿ ನಿವಾಸಕ್ಕೆ ತೆರಳಿದ್ದ ಪೊಲೀಸರು ನಿನ್ನೆ ಬೆಳಗ್ಗೆ ಅವರನ್ನು ಬಂಧಿಸಿದ್ದರು.

    ನಂತರ ಅವರನ್ನು ಅಲಿಬೌಗ್ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು, ಕೋರ್ಟ್ ಅವರಿಗೆ ನವೆಂಬರ್ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಇದೀಗ ಅವರು ಹೈಕೋರ್ಟ್‌ ಮೊರೆ ಹೋಗಿದ್ದು, ತಮ್ಮನ್ನು ಅಕ್ರಮವಾಗಿ ಬಂಧಿಸಲಾಗಿದ್ದು, ತಕ್ಷಣವೇ ಬಿಡುಗಡೆ ಮಾಡಲು ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿದ್ದಾರೆ. ಇಂದು ಈ ಅರ್ಜಿಯು ವಿಚಾರಣೆಗೆ ಬರುವ ಸಾಧ್ಯತೆ ಇದೆ.

    ಬೆದರಿಕೆಗೆ ₹1 ಸಾವಿರ, ಕೊಲೆ ಮಾಡಲು ₹55 ಸಾವಿರ… ಹಲವು ‘ಸೇವೆ’ ನಮ್ಮಲ್ಲಿ ಲಭ್ಯ…

    ಟೈಟಾನಿಕ್‌ ಹಡಗಿನಲ್ಲಿ ಪ್ರಯಾಣಿಸುತ್ತಿದ್ದ ಪಾದ್ರಿಯ ಪತ್ರ ₹48 ಲಕ್ಷಕ್ಕೆ ಹರಾಜು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts