More

    ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್​ ಸ್ಥಿತಿ ಗಂಭೀರ

    ಗುವಾಹಟಿ: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿರುವ ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಅವರ ಸ್ಥಿತಿ ಗಂಭೀರವಾಗಿದೆ.

    ಉಸಿರಾಟದ ತೊಂದರೆಯಿಂದ 86 ವರ್ಷದ ತರುಣ್ ಅವರು ಪ್ರಜ್ಞಾಹೀನರಾಗಿದ್ದು, ತುರ್ತು ನಿಗಾ ಘಟಕದಲ್ಲಿ ವೆಂಟಿಲೇಟರ್‌ ನೆರವಿನಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ಹೇಳಿದ್ದಾರೆ.

    ಕರೊನಾ ಸೋಂಕಿಗೆ ತುತ್ತಾಗಿದ್ದ ಅವರು ಕೆಲವು ದಿನಗಳ ಹಿಂದಷ್ಟೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ನವೆಂಬರ್‌ 2ರಂದು ಅವರ ಆರೋಗ್ಯಸ್ಥಿತಿ ಹದಗೆಟ್ಟಿದ್ದರಿಂದ ಪುನಃ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

    ಇದನ್ನೂ ಓದಿ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಸ್ಥಾನಕ್ಕೆ ಮಹಾದೇವ ಪ್ರಕಾಶ್ ರಾಜೀನಾಮೆ

    ನಿನ್ನೆ ಮಧ್ಯಾಹ್ನದಿಂದಲೇ ಆರೋಗ್ಯ ತೀವ್ರವಾಗಿ ಹದಗೆಟ್ಟಿದೆ. ಸದ್ಯ ಚಿಕಿತ್ಸೆ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ. ಅವರು ಸಂಪೂರ್ಣ ಅಪ್ರಜ್ಞಾವಸ್ಥೆಯಲ್ಲಿದ್ದಾರೆ. ಔಷಧಿಗಳು ಹಾಗೂ ಇತರೆ ಮಾರ್ಗಗಳ ಮೂಲಕ ಅವರ ಅಂಗಾಂಗಗಳನ್ನು ಕೆಲಸ ಮಾಡುವಂತೆ ಮಾಡಲು ಪ್ರಯತ್ನಗಳು ನಡೆದಿವೆ ಎಂದು ಆರೋಗ್ಯ ಅಧೀಕ್ಷಕ ಅಭಿಜಿತ್‌ ಶರ್ಮ ತಿಳಿಸಿದ್ದಾರೆ.

    ಮುಂದಿನ 48 ರಿಂದ 72 ಗಂಟೆಗಳು ನಿರ್ಣಾಯಕ ಸಮಯವಾಗಿದ್ದು ವೈದ್ಯರು ತಮ್ಮ ಕೈಲಾದ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

    ಜಾನ್​​ಸನ್​ ಪೌಡರ್​ನಿಂದ ಕ್ಯಾನ್ಸರ್​: ₹890 ಕೋಟಿ ಪರಿಹಾರಕ್ಕೆ ‘ಸುಪ್ರೀಂ’ ಆದೇಶ

    ಏಳು ಜಿಲ್ಲೆ ದಾಟಿ ಬಂದ.. 3 ಸಾವಿರ ಕಿ.ಮೀ. ಸುತ್ತಿ ಬಂದ.. ಚೆಲುವ ಹುಲಿರಾಯ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts