More

    ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ನಾಳೆ ಐತಿಹಾಸಿಕ ತೀರ್ಪು- ಎಲ್ಲೆಡೆ ಕಟ್ಟೆಚ್ಚರ

    ಲಖನೌ: ಶತ ಶತಮಾನಗಳಷ್ಟು ಹಳೆಯದಾಗಿರುವ ರಾಮಮಂದಿರದ ಕೇಸ್​ ಕೊನೆಗೂ ಇತ್ಯರ್ಥವಾಗಿ ಕೆಲ ತಿಂಗಳು ಕಳೆದಿವೆ. ಇದೀಗ ಬಾಬ್ರಿ ಮಸೀದಿ ಕೇಸ್​ ತೀರ್ಪು. ಇದು ನಾಳೆ ಪ್ರಕಟವಾಗಲಿದ್ದು, ಇಡೀ ದೇಶದ ಕಣ್ಣು ಲಖನೌದತ್ತ ಸೆಳೆದಿದೆ.

    27 ವರ್ಷಗಳಷ್ಟು ಹಳೆಯಾದಾಗಿರುವ ಕೇಸ್​ ಇದು. ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಪ್ರಕರಣ ಇದಾಗಿದ್ದು, ಉತ್ತರ ಪ್ರದೇಶದ ಲಖನೌನ ಸಿಬಿಐ ವಿಶೇಷ ನ್ಯಾಯಾಲಯ ನಾಳೆ ಅಂತಿಮ ತೀರ್ಪು ಪ್ರಕಟಿಸಲಿದೆ.

    ತೀರ್ಪು ಪ್ರಕಟವಾಗುವ ಸಂದರ್ಭದಲ್ಲಿ ಪ್ರಕರಣದ ಎಲ್ಲಾ 32 ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಿಬಿಐ ಕೋರ್ಟ್​ ಕಳೆದ ವಿಚಾರಣೆ ವೇಳೆಯೇ ನಿರ್ದೇಶಿಸಿತ್ತು. ಈ ಹಿನ್ನೆಲೆಯಲ್ಲಿ, ಬಿಜೆಪಿಯ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ, ಮುರುಳಿ ಮನೋಹರ್ ಜೋಶಿ, ಉಮಾಭಾರತಿ, ಕಲ್ಯಾಣ್ ಸಿಂಗ್, ವಿನಯ್ ಕಟಿಯಾರ್, ಸಾಕ್ಷಿ ಮಹಾರಾಜ್ ಸೇರಿದಂತೆ 32 ಮಂದಿ ಹಾಜರು ಇರಬೇಕಿದೆ.

    ಮುನ್ನೆಚ್ಚರಿಕೆಯ ಕ್ರಮವಾಗಿ ಇದಾಗಲೇ ಸೂಕ್ಮ ಹಾಗೂ ಅತೀ ಸೂಕ್ಮ ಪ್ರದೇಶ ಸೇರಿದಂತೆ ಎಲ್ಲೆಡೆ ಭಾರೀ ಭದ್ರತೆ ಕೈಗೊಳ್ಳಲಾಗಿದೆ ಎನ್ನಲಾಗಿದೆ.

    ಇದನ್ನೂ ಓದಿ: ಲತಾ ಮಂಗೇಶ್ಕರ್​ಗೆ ವಿಷ ನೀಡಲಾಗಿತ್ತು! ಅಪ್ರತಿಮ ಗಾಯಕಿ ಜೀವನದ ಘೋರ ಕಹಿಸತ್ಯ…

    ಏನಿದು ಪ್ರಕರಣ? 1992ರ ಡಿಸೆಂಬರ್‌ 6. ಅಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ವಿವಾದಿತ ರಾಮ ಜನ್ಮಭೂಮಿ ಪ್ರದೇಶದಲ್ಲಿದ್ದ ಬಾಬರಿ ನಿರ್ಮಿತ ಮಸೀದಿಯನ್ನು ಕಾರಸೇವಕರು ಧ್ವಂಸಗೊಳಿಸಿದ್ದರು. ದೇಶಾದ್ಯಂತ ಕೋಮು ಸಂಘರ್ಷ ಭುಗಿಲೆದ್ದಿತ್ತು. ಮುಂಬಯಿ ಬಾಂಬ್‌ ಸ್ಫೋಟ, ಗೋಧ್ರಾ ದಹನ, ಗುಜರಾತ್‌ ಗಲಭೆಗಳು ಕೂಡ ನಡೆದದ್ದು ಇದೇ ಸಂದರ್ಭದಲ್ಲಿ.

    ಮಸೀದಿ ಧ್ವಂಸ ಪ್ರಕರಣಕ್ಕೂ ಮೊದಲು ಅಂದರೆ 1990ರಲ್ಲಿ ಗೋಪ್ಯ ಸಭೆಯೊಂದು ಬಿಜೆಪಿ ನಾಯಕ ವಿನಯ್ ಕಟಿಯಾರ್ ಮನೆಯಲ್ಲಿ ನಡೆದಿತ್ತು. ಈ ಸಭೆಯಲ್ಲಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಹೀಗೆ ಮಸೀದಿ ಕೆಡವಲು ಅಡ್ವಾಣಿ ಮತ್ತು ಇತರರು ಸಂಚು ರೂಪಿಸಿದ್ದರು ಎಂದು ಸಿಬಿಐ ತನ್ನ ಜಾರ್ಜ್​ಷೀಟ್​ನಲ್ಲಿ ಹೇಳಿದೆ.

    ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು (ಸೆಕ್ಷನ್ 153 ಎ), ರಾಷ್ಟ್ರೀಯ ಏಕೀಕರಣದ ಮೇಲೆ ಪರಿಣಾಮ ಬೀರುವ ಹೇಳಿಕೆಗಳನ್ನು ನೀಡುವುದು (ಸೆಕ್ಷನ್ 153 ಬಿ) ಅಥವಾ ಸಾರ್ವಜನಿಕ ಕಿಡಿಗೇಡಿತನಕ್ಕೆ (ಸೆಕ್ಷನ್ 505) ಸೇರಿದಂತೆ ಭಾರತೀಯ ಅಪರಾಧ ಸಂಹಿತೆ (ಐಪಿಸಿ) ಅಡಿಯಲ್ಲಿ ವಿವಿಧ ಅಪರಾಧಗಳಿಗೆ ಅವರ ಮೇಲೆ ಆರೋಪ ಹೊರಿಸಲಾಗಿದೆ.

    ಪ್ರಕರಣಕ್ಕೆ ಸಂಬಂಧಪಟ್ಟಂತೆ 92 ವರ್ಷದ ಎಲ್‌.ಕೆ.ಅಡ್ವಾಣಿಯವರು ಜುಲೈ 24ರಂದು ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿ ಹೇಳಿಕೆಯನ್ನು ದಾಖಲಿಸಿದ್ದರು. ಇನ್ನು, ಮುರುಳಿ ಮನೋಹರ್‌ ಜೋಷಿ ಜುಲೈ 23ರಂದು ತಮ್ಮ ಹೇಳಿಕೆ ದಾಖಲಿಸಿದ್ದು, ಇಬ್ಬರೂ ತಮ್ಮ ಮೇಲೆ ಕೇಳಿ ಬಂದಿದ್ದ ಆರೋಪಗಳನ್ನು ನಿರಾಕರಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ 351 ಸಾಕ್ಷಿದಾರರು ಹಾಗೂ 600 ಸಾಕ್ಷ್ಯಗಳನ್ನು ಸಿಬಿಐ ಇದಾಗಲೇ ಕೋರ್ಟ್​ ಮುಂದೆ ಹಾಜರುಪಡಿಸಿದೆ. ಸೆ.01ರಂದೇ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಾದ-ಪ್ರತಿವಾದ ಮುಕ್ತಾಯಗೊಂಡಿದೆ.

    ಅರೆ ಇದೆಂಥ ಆಘಾತ! ಕರ್ನಾಟಕಕ್ಕೂ ಕಾಲಿಟ್ಟುಬಿಟ್ಟಿದೆ ಹೊಸ ಚೀನಿ ವೈರಸ್​- ಇಬ್ಬರಲ್ಲಿ ಪತ್ತೆ!

    ಮಂಗಳ ಗ್ರಹದಲ್ಲಿಯೂ ಕಟ್ಟಬಹುದು ಮನೆ! ಪತ್ತೆಯಾಗಿವೆ ಮೂರು ಸರೋವರ

    ಕಾಲಿನಿಂದ ಒದ್ದ, ಹೊಟ್ಟೆಗೆ, ಮುಖಕ್ಕೆ ಗುದ್ದಿದ- ಕ್ಯಾಮೆರಾಮನ್​ನಿಂದ ಪತ್ರಕರ್ತನ ಮೇಲೆ ಹಲ್ಲೆ?

    ಗ್ಯಾಂಗ್​ರೇಪ್​ ಮಾಡಿ ನಾಲಗೆ ಕಟ್: ಜೀವನ್ಮರಣಗಳ ನಡುವೆ ಹೋರಾಡುತ್ತಿದ್ದ ಯುವತಿ ಸಾವು!

    ಲತಾ ಮಂಗೇಶ್ಕರ್​ಗೆ ವಿಷ ನೀಡಲಾಗಿತ್ತು! ಅಪ್ರತಿಮ ಗಾಯಕಿ ಜೀವನದ ಘೋರ ಕಹಿಸತ್ಯ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts