ಪಟಾಕಿ ಬ್ಯಾನ್​- ಸುಪ್ರೀಂಕೋರ್ಟ್​ ಹೇಳಿದ್ದೇನು?

crackers
Published on

ನವದೆಹಲಿ: ದೀಪಾವಳಿ ಸಂದರ್ಭದಲ್ಲಿ ನಡೆಯಲಿರುವ ಕಾಳಿ ಪೂಜೆಯ ವೇಳೆ ಪಟಾಕಿ ಸಿಡಿಸುವುದನ್ನು ನಿಷೇಧಿಸಿರುವ ಕೋಲ್ಕತಾ ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್​ ಎತ್ತಿಹಿಡಿದಿದೆ.

ಹೈಕೋರ್ಟ್​ ತೀರ್ಪಿಗೆ ತಡೆ ನೀಡುವಂತೆ ಕೋರಿದ್ದ ವಿಶೇಷ ಮೇಲ್ಮನವಿಯನ್ನು ಸುಪ್ರೀಂಕೋರ್ಟ್​ ವಜಾ ಮಾಡಿದೆ.

ಉತ್ಸವಗಳನ್ನು ನಡೆಸುವುದು ಎಲ್ಲರಿಗೂ ಮುಖ್ಯ. ಆದರೆ ಅದಕ್ಕಿಂತ ಮುಖ್ಯವಾದದ್ದು ಮನುಷ್ಯನ ಜೀವ. ಮನುಷ್ಯನ ಪ್ರಾಣ ಕಾಪಾಡಿಕೊಳ್ಳುವುದು ಬಹುಮುಖ್ಯವಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಕೋಲ್ಕೊತಾ ಕೋರ್ಟ್​ ತೀರ್ಪು ನೀಡಿದೆ. ಕರೊನಾ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಪರಿಸರ ಮಾಲಿನ್ಯದಿಂದ ಮನುಷ್ಯರ ಮೇಲೆ ಆಗುವ ಅನಾಹುತ ತಡೆಗಟ್ಟುವುದೇ ಮುಖ್ಯ. ಆದ್ದರಿಂದ ಹೈಕೋರ್ಟ್​ ತೀರ್ಪಿಗೆ ತಡೆ ನೀಡಲಾಗದು ಎಂದಿದೆ.

ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಗೌತಮ್ ರಾಯ್ ಮತ್ತು ಬುರ್ರಾ ಬಜಾರ್ ಪಟಾಕಿ ಮಾಲೀಕರ ಸಂಘ ಸುಪ್ರೀಂಕೋರ್ಟ್​ಗೆ ವಿಶೇಷ ಮೇಲ್ಮನವಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಇಂದಿರಾ ಬ್ಯಾನರ್ಜಿ ಅವರನ್ನೊಳಗೊಂಡ ವಿಭಾಗೀಯ ಪೀಠ, ಹೈಕೋರ್ಟ್​ ತೀರ್ಪಿಗೆ ತಡೆ ನೀಡಲು ನಿರಾಕರಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net