ಗೃಹ ಸಚಿವ ಬಸವರಾಜ್​ ಬೊಮ್ಮಾಯಿಗೆ ಕರೊನಾ ಸೋಂಕು

bommai
Published on

ಬೆಂಗಳೂರು: ಗೃಹ ಸಚಿವ ಬಸವರಾಜ್​ ಬೊಮ್ಮಾಯಿ ಅವರಿಗೂ ಕರೊನಾ ಸೋಂಕು ಕಾಣಿಸಿಕೊಂಡಿದೆ.

ಈ ಕುರಿತು ಟ್ವೀಟ್​ ಮೂಲಕ ಅವರು ಮಾಹಿತಿ ನೀಡಿದ್ದಾರೆ. ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದೆ. ನನಗೂ ಸೋಂಕು ದೃಢಪಟ್ಟಿದೆ ಎಂದು ಅವರು ಹೇಳಿದ್ದಾರೆ.

ಆದರೆ ತಮಗೆ ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿರುವುದಾಗಿ ಟ್ವಿಟರ್​ನಲ್ಲಿ ಸಚಿವರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳದೇ ಸದ್ಯ ಮನೆಯಲ್ಲಿಯೇ ಪ್ರತ್ಯೇಕವಾಗಿ ಇರುವುದಾಗಿ ಅವರು ಹೇಳಿದ್ದಾರೆ.

ಜತೆಗೆ, ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪರೀಕ್ಷೆಗೆ ಒಳಪಡುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಕಳೆದ ಒಂದು ವಾರದಿಂದ ಬೊಮ್ಮಾಯಿಯವರು ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಮಂಗಳವಾರ ವಿಧಾನಸೌಧದಲ್ಲಿ ಬಿ. ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ಪಾಲ್ಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net