More

    VIDEO: ಕರ್ತವ್ಯಲೋಪ- ಎಸ್​ಐ, ಎಎಸ್​ಐಯನ್ನೇ ಲಾಕಪ್​ಗೆ ತಳ್ಳಿದ ಪೊಲೀಸ್​ ಅಧಿಕಾರಿ; ವಿಡಿಯೋ ವೈರಲ್

    ಪಟ್ನಾ: ತಮ್ಮ ಐವರು ಕಿರಿಯ ಉದ್ಯೋಗಿಗಳು ಕೆಲಸದಲ್ಲಿ ಅಸಡ್ಡೆ ತೋರಿದ್ದರಿಂದ ಅಸಮಾಧಾನಗೊಂಡ ಪೊಲೀಸ್ ಅಧಿಕಾರಿಯೊಬ್ಬರು ಎಲ್ಲರನ್ನೂ ಲಾಕಪ್ ಒಳಗೆ ಕೂಡಿ ಹಾಕಿರುವ ಘಟನೆ ಬಿಹಾರದ ನವಾಡ ಪಟ್ಟಣದಲ್ಲಿ ನಡೆದಿದೆ.

    ಇದೇ 8ರಂದು ನಡೆದ ಈ ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಪೊಲೀಸ್ ಸಂಘಟನೆ ಹಾಗೂ ಜಿಲ್ಲಾ ಸಿಬ್ಬಂದಿ ಒಕ್ಕೂಟವು ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಮಂಗ್ಲಾ ಅವರಲ್ಲಿ ಈ ಬಗ್ಗೆ ತನಿಖೆ ನಡೆಸಲು ಒತ್ತಾಯಿಸಿವೆ.

    ಸಬ್ ಇನ್ಸ್‌ಪೆಕ್ಟರ್ ಶತ್ರುಘ್ನ ಪಾಸ್ವಾನ್ ಮತ್ತು ರಾಮರೇಖಾ ಸಿಂಗ್, ಎಎಸ್‍ಐ ಸಂತೋಷ್ ಪಾಸ್ವಾನ್, ಸಂಜಯ್ ಸಿಂಗ್ ಮತ್ತು ರಾಮೇಶ್ವರ ಉರಾನ್ ಅವರನ್ನು ನಾವಡ ನಗರ ಪೊಲೀಸ್ ಠಾಣೆಯ ಲಾಕಪ್ ಒಳಗೆ ಮಧ್ಯರಾತ್ರಿ 2 ಗಂಟೆಯವರೆಗೆ ಕೂಡಿಹಾಕಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಇದಕ್ಕೆ ಪ್ರತಿಕ್ರಿಯೆ ನೀಡಿರುವ ಎಸ್​ಪಿ ಗೌರವ್ ಮಂಗ್ಲಾ, ಕಿರಿಯ ಅಧಿಕಾರಿಗಳ ಮೇಲೆ ಹಲ್ಲೆಯಾಗುವಂತಹ ಯಾವುದೇ ಘಟನೆ ಠಾಣೆಯಲ್ಲಿ ಸಂಭವಿಸಿಲ್ಲ ಎಂದಿದ್ದಾರೆ. ಇನ್ಸ್​​ಪೆಕ್ಟರ್ ವಿಜಯ್ ಕುಮಾರ್ ಸಿಂಗ್ ಕೂಡ ಘಟನೆಯನ್ನು ಅಲ್ಲಗಳೆದಿದ್ದಾರೆ.

    ಆದರೆ ಲಭ್ಯವಾಗಿರುವ ಮಾಹಿತಿ ಹಾಗೂ ಸಿಸಿಟಿವಿಯಲ್ಲಿ ದಾಖಲಾಗಿರುವಂತೆ, ಸೆ.8ರ ರಾತ್ರಿ 9 ಗಂಟೆಯ ಸುಮಾರಿಗೆ ಹಳೆಯ ಪ್ರಕರಣಗಳ ಬಗ್ಗೆ ಮಾಹಿತಿ ಪಡೆಯಲು ವರಿಷ್ಠಾಧಿಕಾರಿ ಠಾಣೆಗೆ ಬಂದಿದ್ದರು. ಈ ವೇಳೆ ಅಧಿಕಾರಿಗಳ ಬೇಜವಾಬ್ದಾರಿಯ ಬಗ್ಗೆ ಕೋಪಗೊಂಡು ಅಧಿಕಾರಿಗಳನ್ನೇ ಕೂಡಿ ಹಾಕಲು ಆದೇಶಿಸಿದ್ದರು.

    ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಆದರೆ ವರಿಷ್ಠಾಧಿಖಾರಿ ನನ್ನ ಕರೆ ಸ್ವೀಕರಿಸುತ್ತಿಲ್ಲ ಎಂದು ಬಿಹಾರದ ಪೊಲೀಸ್ ಸಂಘದ ಅಧ್ಯಕ್ಷ ಮೃತ್ಯುಂಜಯ್ ಕುಮಾರ್ ಸಿಂಘ್ ತಿಳಿಸಿದ್ದಾರೆ. (ಏಜೆನ್ಸೀಸ್​)

    ಗೇಮಿಂಗ್​ ಆ್ಯಪ್​ನಿಂದ ಬಳಕೆದಾರರಿಗೆ ಟೋಪಿ: ಆರು ಕಡೆ ಇ.ಡಿ ದಾಳಿ- 17 ಕೋಟಿ ರೂ. ಜಪ್ತಿ

    ಬೆಕ್ಕನ್ನು ಹುಲಿ ಮಾಡಿದ ಭೂಪ: ವಾಟ್ಸ್​ಆ್ಯಪ್​ನಲ್ಲಿ ಮಾರಾಟಕ್ಕಿಟ್ಟು ಪೊಲೀಸರ ಕೈಗೆ ಸಿಕ್ಕಿಬಿದ್ದ

    ಗಣೇಶ ವಿಸರ್ಜನೆ ವೇಳೆ ಗಲಾಟೆ ಕೊಲೆಯಲ್ಲಿ ಅಂತ್ಯ! ಕಾಲೇಜು ವಿದ್ಯಾರ್ಥಿಗಳಿಂದ ಭಯಾನಕ ಕೃತ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts