ಕಲಬುರಗಿಯಲ್ಲಿ ಬೈಕ್‌ಗಳ ನಡುವೆ ಭೀಕರ ಅಪಘಾತ: ಮೂವರ ದುರ್ಮರಣ- ಓರ್ವನಿಗೆ ಗಂಭೀರ ಗಾಯ

accident
Published on

ಕಲಬುರಗಿ: ಚಿಂಚೋಳಿ ತಾಲ್ಲೂಕಿನ ಹೂವಿನಹಳ್ಳಿ ಬಳಿ ಎರಡು ಬೈಕ್​ಗಳು ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೂವರು ದುರ್ಮರಣಕ್ಕೀಡಾದ ಘಟನೆ ಶನಿವಾರ ಬೆಳಗ್ಗೆ ಸಂಭವಿಸಿದೆ.

ಶಿರೋಳ್ಳಿ ಗ್ರಾಮದ ಜಗನ್ನಾಥ್ ಚಕ್ಕುಲಿ (35) ಮೇಹಬೂಬ್ ಅಲಿ (45) ಹಾಗೂ ಚಿಂಚೋಳಿ ತಾಲ್ಲೂಕಿನ ಶಾದಿಪೂರ ಗ್ರಾಮದ ಶ್ರೀಕಾಂತ್ (30) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಅಮರ ಎಂಬುವವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಒಂದು ಬೈಕ್ ಚಿಂಚೋಳಿ ಕಡೆಗೆ ಹಾಗೂ ಇನ್ನೊಂದು ಬೈಕ್ ಸುಲೇಪೇಟ್ ಕಡೆಗೆ ಬರುವಾಗ ದುರ್ಘಟನೆ ನಡೆದಿದೆ. ಅತಿ ವೇಗದಿಂದ ಬೈಕ್​ ಓಡಿಸುತ್ತಿರುವುದೇ ಅಪಘಾತಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶಿಲನೆ‌ ಮಾಡಿದ್ದಾರೆ. ಈ ಕುರಿತು ಸುಲೆಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net