More

    ಡೆಂಘೆಗೆ ಬಲಿಯಾದ ಶಾಸಕಿ: ಕಾಂಗ್ರೆಸ್‌ನಲ್ಲಿ ಗೆಲುವು ಸಾಧಿಸಿದ್ದ ಇವರು ಬಿಜೆಪಿಯಲ್ಲಿಯೂ ಜಯಭೇರಿ ಬಾರಿಸಿದ್ದರು

    ಅಹಮದಾಬಾದ್: ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಉಂಜಾ ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿದ್ದ ಆಶಾ ಪಟೇಲ್ ಡೆಂಘೆಗೆ ಬಲಿಯಾಗಿದ್ದಾರೆ.

    ಎರಡು ದಿನಗಳಿಂದ ಇವರು ಡೆಂಘೆಯಿಂದ ಬಳಲುತ್ತಿದ್ದರು. ಅವರನ್ನು ಅಹಮದಾಬಾದ್‍ನ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.

    ತೀವ್ರವಾಗಿ ಅಸ್ವಸ್ಥರಾಗಿದ್ದ ಆಶಾ ಅವರನ್ನು ವೆಂಟಿಲೇಟರ್‌ನಲ್ಲಿ ಇಡಲಾಗಿತ್ತು. ವೈದ್ಯರ ತಂಡವು ಆಶಾ ಅವರಿಗೆ ಹೆಚ್ಚಿನ ನಿಗಾ ವಹಿಸಿ ಚಿಕಿತ್ಸೆ ಕೊಟ್ಟರೂ ಅವರ ಪ್ರಯತ್ನ ಫಲಿಸಲಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ನಿತಿನ್‌ ಪಟೇಲ್‌ ತಿಳಿಸಿದ್ದಾರೆ.

    ಆಶಾ ಪಟೇಲ್ 2017ರಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾದರು. 2019ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಉಪಚುನಾವಣೆಯಲ್ಲಿ ಉಂಜಾ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. ಅಲ್ಲಿಯೂ ಗೆಲುವು ಸಾಧಿಸಿದ್ದರು.

    ಆಶಾ ಪಟೇಲ್ ನಿಧನಕ್ಕೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ರಾಜ್ಯಪಾಲ ಆಚಾರ್ಯ ದೇವವ್ರತ್ ಸಂತಾಪ ಸೂಚಿಸಿದ್ದಾರೆ.

    ಅಪ್ಪನ ಬಲಿದಾನ ವ್ಯರ್ಥವಾಗಲು ಬಿಡಲಾರೆ, ವಾಯುಪಡೆ ಪೈಲಟ್‌ ಆಗಿ ಅವರ ಕನಸು ನನಸಾಗಿಸುವೆ ಎಂದ ಪುತ್ರಿ

    VIDEO: ಸಾಯುವ ಕೆಲವೇ ಗಂಟೆಗಳ ಮೊದಲು ರಾವತ್‌ ಆಡಿದ್ದ ಮಾತುಗಳ ವಿಡಿಯೋ ಬಿಡುಗಡೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts