More

    ಪಶ್ಚಿಮ ಬಂಗಾಳದಲ್ಲಿ ಬಾಂಬ್​ ಬ್ಲಾಸ್ಟ್​: ಟಿಎಂಸಿ ಕಾರ್ಯಕರ್ತರ ಮನೆಯಲ್ಲಿಯೇ ತಯಾರು?

    ಕೋಲ್ಕತ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಬಾಂಬ್​ ಬ್ಲಾಸ್ಟ್​ ಸಂಭವಿಸಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಸ್ಫೋಟದಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ. ರಾಂಪುರ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ.

    ಗಾಯಗೊಂಡಿರುವ ಆರು ಮಂದಿ ಬಿಜೆಪಿ ಕಾರ್ಯಕರ್ತರು ಎಂದು ಹೇಳಲಾಗುತ್ತಿದೆ. ಇವರ ಮೇಲೆ ದಾಳಿ ನಡೆಸಿರುವವರು ತೃಣಮೂಲ ಕಾಂಗ್ರೆಸ್​ನ ಕಾರ್ಯಕರ್ತರಾಗಿದ್ದು, ಇವರೆಲ್ಲರೂ ಮನೆಯಲ್ಲಿಯೇ ಕಚ್ಚಾ ಬಾಂಬ್​ ತಯಾರು ಮಾಡುವಲ್ಲಿ ಇವರೆಲ್ಲರೂ ನಿರತರಾಗಿದ್ದರು ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

    ಈ ಕುರಿತು ಪೊಲೀಸ್​ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಸದ್ಯ ಪಶ್ಚಿಮ ಬಂಗಾಳಕ್ಕೆ ಶೀಘ್ರದಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ಮುಖಂಡರು ಬಿರುಸಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬಿಜೆಪಿ ಮತ್ತು ಆಡಳಿತಾರೂಢ ತೃಣಮೂಲ ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಆಗಾಗ್ಗೆ ಮಾರಾಮಾರಿಯೂ ನಡೆಯುತ್ತಿದೆ.

    ಈ ಬೆನ್ನಲ್ಲೇ ಇಂಥದ್ದೊಂದು ಬಾಂಬ್​ ಸ್ಫೋಟಗೊಂಡಿದೆ ಎಂದು ಪೊಲೀಸರು ಹೇಳಿದ್ದಾರೆ. ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ಮನೆಗೆ ಹಿಂತಿರುಗುತ್ತಿದ್ದಾಗ ತೃಣಮೂಲ ಕಾಂಗ್ರೆಸ್‌ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಈ ಕಾರ್ಯಕರ್ತರು ಮನೆಯಲ್ಲಿಯೇ ಕಚ್ಚಾ ಬಾಂಬ್​ ತಯಾರಿಸುತ್ತಿದ್ದರು ಎಂದು ಗಾಯಗೊಂಡವರ ಕುಟುಂಬದ ಸದಸ್ಯರು ದೂರಿದ್ದಾರೆ.

    ಕುಟುಂಬದ ಸದಸ್ಯರ ಹೇಳಿಕೆಯನ್ನು ಗಮನಿಸಿದ್ದು, ತನಿಖೆ ನಡೆಸುತ್ತಿದ್ದೇವೆ. ಸ್ಥಳೀಯರಿಂದಲೂ ಮಾಹಿತಿ ಪಡೆಯಲಾಗುತ್ತಿದೆ’ ಎಂದು ಪೊಲೀಸ್‌ ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ. ಮಾರ್ಚ್ 27 ರಿಂದ 294 ವಿಧಾನಸಭಾ ಕ್ಷೇತ್ರಗಳಿಗೆ ಎಂಟು ಹಂತದಲ್ಲಿ ಚುನಾವಣೆ ನಡೆಯಲಿದೆ. ಪೊಲೀಸರು ಈ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    ಕೇಂದ್ರ ಸರ್ಕಾರದ ಸಚಿವಾಲಯಗಳಲ್ಲಿ ಉನ್ನತ ಪದವೀಧರರಿಗೆ ಉದ್ಯೋಗ: 89 ಹುದ್ದೆಗಳು ಖಾಲಿ

    ನಾನು ಸೇಫ್​, ನಾನು ಸೇಫ್​- ಜಿಗಿಜಿಗಿದು ಕುಪ್ಪಳಿಸಿದ ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್​

    ಯುವಕನಾದರೂ ಯುವತಿಯರ ಕಂಡರೆ ಅಸಹ್ಯವಾಗುತ್ತಿದ್ದು, ಭಯ ಶುರುವಾಗಿದೆ… ಏನಿದು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts