More

    ಬಾಂಬ್​ ಕಟ್ಟಿಕೊಂಡು ಭಾರಿ ಸ್ಫೋಟಕ್ಕೆ ಸಂಚು! ಸ್ವಲ್ಪದರಲ್ಲಿಯೇ ತಪ್ಪಿತು ಭಾರಿ ಅನಾಹುತ

    ಲಖನೌ: ಲಖನೌದಲ್ಲಿ ಭಾರಿ ಸ್ಫೋಟಕ್ಕೆ ಯತ್ನಿಸಿದ್ದ, ಆತ್ಮಾಹುತಿ ದಾಳಿ ಮೂಲಕ ವಿಧ್ವಂಸಕ ಕೃತ್ಯ ಎಸಗಲು ತಯಾರಿ ನಡೆಸಿದ್ದ ಅಲ್ ಖೈದಾ ಉಗ್ರ ಸಂಘಟನೆಯ ಸಂಚನ್ನು ವಿಫಲಗೊಳಿಸುವಲ್ಲಿ ಉತ್ತರ ಪ್ರದೇಶದ ಉಗ್ರ ನಿಗ್ರಹ ದಳ(ಎಟಿಎಸ್) ಯಶಸ್ವಿಯಾಗಿದೆ.

    ಲಖನೌದ ಜನನಿಬಿಡ ಪ್ರದೇಶಗಳಲ್ಲಿ ಆತ್ಮಾಹುತಿ ದಾಳಿ ನಡೆಸಲು ಇವರು ಸಜ್ಜಾಗಿದ್ದರು. ಇದರ ಮಾಹಿತಿ ದೊರೆತ ಕೂಡಲೇ ಕಾರ್ಯ ಪ್ರವೃತ್ತರಾದ ಎಟಿಎಸ್ ಸಿಬ್ಬಂದಿ ದಾಳಿ ನಡೆಸಿ, ಮಿನಾಜ್ ಅಹ್ಮದ್ ಹಾಗೂ ನಾಸಿರುದ್ದೀನ್ ಎಂಬುವವರನ್ನು ಬಂಧಿಸಿದ್ದಾರೆ. ಜತೆಗೆ ಸಜೀವ ಬಾಂಬ್ ಪತ್ತೆ ಹಚ್ಚಿ ನಿಷ್ಕ್ರಿಯಗೊಳಿಸಿದ್ದಾರೆ.

    ಅಲ್‍ಖೈದಾ ಉಗ್ರರ ಜತೆಗಿನ ನಂಟಿನ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ 11 ಸರ್ಕಾರಿ ಅಧಿಕಾರಿಗಳನ್ನು ಜಮ್ಮು ಕಾಶ್ಮೀರ ಸರ್ಕಾರ ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ಇದೀಗ ಇಂಥ ಕೃತ್ಯ ನಡೆದಿದೆ.
    ಲಖನೌದ ನಿವಾಸಿಗಳಾದ ಈ ಉಗ್ರರು ಅಲ್ ಖೈದಾ ಅನ್ಸಾರ್ ಖಜ್ವಾತ್ ಉಲ್ ಹಿಂದ್ ಸಂಘಟನೆಯ ಆತ್ಮಾಹುತಿ ದಾಳಿಯ ಸದಸ್ಯರು ಎಂದು ತಿಳಿದುಬಂದಿದೆ. ಉತ್ತರ ಪ್ರದೇಶದ ಪ್ರಮುಖ ಪಟ್ಟಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಭದ್ರತೆ ಹೆಚ್ಚಿಸಲಾಗಿದೆ. ಕಾಶ್ಮೀರದ ಜೊತೆ ನಿರಂತರ ಸಂಪರ್ಕ ಹೊಂದಿರುವ ಇವರು, ಹಲವು ದಿನಗಳ ಕಾಲ ವಿಧ್ವಂಸಕ ಕೃತ್ಯ ಎಸಗಲು ಯೋಜನೆ ಹಾಕಿಕೊಂಡಿರುವ ಬಗ್ಗೆ ತಿಳಿದುಬಂದಿದೆ.

    ಫೋಟೋದಲ್ಲಿದ್ದ ಚಿನ್ನದ ಸರವೇ ಮಹಿಳೆ ಪ್ರಾಣ ಕಸಿದುಕೊಂಡಿತು! ಭೀಕರ ಪ್ರಕರಣವನ್ನು ಭೇದಿಸಿದ ಪೊಲೀಸರು

    ಇಂದು ಭೂಮಿಯನ್ನು ಅಪ್ಪಳಿಸಲಿದೆ ಸೌರ ಬಿರುಗಾಳಿ: ಜಿಪಿಎಸ್​, ಟಿವಿ, ಮೊಬೈಲ್​ ಸಿಗ್ನಲ್​ಗಳು ಬಂದ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts