More

    ಪ್ರತಿಭಟನೆ ಬೆನ್ನಲ್ಲೇ ದೆಹಲಿಯಲ್ಲಿ ಸ್ಫೋಟ: ಆಟೋದಲ್ಲಿ ಬಂದು ಕೃತ್ಯ! ಸಿಸಿಟಿವಿಯಲ್ಲಿ ಸಿಕ್ತು ಸುಳಿವು

    ನವದೆಹಲಿ: ಗಣರಾಜ್ಯೋತ್ಸವದ ಸಂದರ್ಭದಲ್ಲಿ ರೈತರ ಸೋಗಿನಲ್ಲಿ ಬಂದು ತೀವ್ರ ಹಿಂಸಾಚಾರ ಮಾಡಿರುವ ಘಟನೆ ಬೆನ್ನಲ್ಲೇ ಶುಕ್ರವಾರ (ಜ.29) ನವದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿ ಬಳಿ ಸಂಭವಿಸಿದ ಸ್ಫೋಟ ಭಾರಿ ಆತಂಕಕ್ಕೆ ಈಡು ಮಾಡಿದೆ. ಈ ನಡುವೆಯೇ, ದೇಶದ ಪ್ರಮುಖ ನಗರಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಿಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಹಲವೆಡೆ ಹೈಅಲರ್ಟ್ ಘೋಷಿಸಲಾಗಿದೆ.

    ಸಂಜೆ 5 ಗಂಟೆ ಸುಮಾರಿಗೆ ಡಾ.ಎಪಿಜೆ ಅಬ್ದುಲ್ ಕಲಾಂ ರಸ್ತೆಯ ಜಿಂದಾಲ್ ಹೌಸ್ ಬಳಿ ಸಂಭವಿಸಿರುವ ಲಘು ಬಾಂಬ್ ಸ್ಫೋಟ ಕುರಿತಂತೆ ತನಿಖೆ ಕೈಗೊಂಡಿರುವ ಪೊಲೀಸರಿಗೆ ಕೆಲವೊಂವು ಮಾಹಿತಿಗಳು ಲಭ್ಯವಾಗಿವೆ. ದೆಹಲಿ ವಿಶೇಷ ತನಿಖಾ ತಂಡದ ಪೊಲೀಸರು ಹಾಗೂ ರಾಷ್ಟ್ರೀಯ ತನಿಖಾ ತಂಡದ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಕೆಲವೊಂದು ಮಾಹಿತಿಗಳು ಸಿಸಿಟಿವಿ ಫುಟೇಜ್​ನಿಂದ ಲಭ್ಯವಾಗಿವೆ.

    ಕೆಲ ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಟ ನಡೆಸಿರುವುದು ಸಿಸಿಟಿವಿಯಲ್ಲಿ ಕಂಡುಬಂದಿದೆ. ಈ ದೃಶ್ಯದಲ್ಲಿ ಶುಕ್ರವಾರ (ಜ.29) ಆಟೋದಲ್ಲಿ ಬಂದಿರುವ ವ್ಯಕ್ತಿಯೊಬ್ಬ ಇಬ್ಬರು ವ್ಯಕ್ತಿಗಳನ್ನು ಸ್ಥಳಕ್ಕೆ ಡ್ರಾಪ್ ಮಾಡಿದ್ದು, ಈ ಇಬ್ಬರು ವ್ಯಕ್ತಿಗಳು ಸ್ಫೋಟಗೊಂಡ ಸ್ಥಳಕ್ಕೆ ತೆರಳಿರುವುದು ಕಂಡು ಬಂದಿದೆ ಎಂದು ಮೂಲಗಳು ಹೇಳಿವೆ. ಇವರು ಬಂದು ಹೋದ ಕೆಲವೇ ನಿಮಿಷಗಳಲ್ಲಿ ಸ್ಫೋಟ ಸಂಭವಿಸಿದೆ.

    ಮಾತ್ರವಲ್ಲದೇ ಅಲ್ಲಿಗೆ ಬಂದಿರುವ ಆಟೋ ಚಾಲಕನ ಗುರುತು ಪತ್ತೆಯಾಗಿದ್ದು, ಅವರನ್ನು ಸಂಪರ್ಕಿಸಿ ಅನುಮಾನಾಸ್ಪದ ವ್ಯಕ್ತಿಗಳ ರೇಖಾಚಿತ್ರವನ್ನು ಬಿಡಿಸಲು ತಯಾರಿ ನಡೆಸಲಾಗಿದೆ. ಇದಕ್ಕಾಗಿ ವಿಶೇಷ ತಂಡದ ರಚನೆಯಾಗಿದೆ.
    ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವೊಂದು ಮಾಹಿತಿ ಸಿಕ್ಕಿದೆ. ಆದರೆ ಈಗಲೇ ಅದನ್ನು ಬಹಿರಂಗಪಡಿಸಲಾಗುವುದಿಲ್ಲ ಎಂದು ದೆಹಲಿ ಪೊಲೀಸ್ ಮುಖ್ಯಸ್ಥ ಎಸ್‌ಎನ್ ಶ್ರೀವಾತ್ಸವ ಅವರು ಹೇಳಿದ್ದಾರೆ.

    ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದ್ದರಿಂದಾಗಿ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಇಸ್ರೇಲ್ ರಾಯಭಾರಿ ಕಚೇರಿಯಿಂದ ಕೇವಲ 2 ಕಿಮೀ ದೂರದಲ್ಲಿಯೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೀಟಿಂಗ್ ರಿಟ್ರೀಟ್ ಕಾರ್ಯಕ್ರಮ ನಡೆಯುತ್ತಿತ್ತು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದ್ದರು.

    ವಿವಿಐಪಿಗಳಿದ್ದ ಈ ಪ್ರದೇಶದಲ್ಲಿ ಬಿಗಿ ಭದ್ರತೆಯ ನಡುವೆಯೂ ಬಾಂಬ್ ಸ್ಫೋಟ ಸಂಭವಿಸಿರುವುದು ಆತಂಕ ಹೆಚ್ಚಿಸಿದೆ.
    ಈ ನಡುವೆಯೇ, ಮಹಾಕುಂಭಮೇಳಕ್ಕೆ ಭದ್ರತೆಯನ್ನು ಹೆಚ್ಚಿಸಲಾಗುತ್ತಿದೆ. ಹರಿದ್ವಾರದಲ್ಲಿ ಈಗಾಗಲೇ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಅಯೋಧ್ಯೆ ಸೇರಿದಂತೆ ಉತ್ತರಪ್ರದೇಶದ ಹಲವೆಡೆ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.

    ಕೇಂದ್ರವನ್ನು ಹೀಗಳೆಯುವ ಭರದಲ್ಲಿ ಗುಂಡೇಟಿನಿಂದ ರೈತ ಬಲಿ ಎಂದ ಪತ್ರಕರ್ತ ಸರ್ದೇಸಾಯಿಗೆ ಏನಾಯ್ತು ನೋಡಿ…

    ಗಣರಾಜ್ಯೋತ್ಸವದ ದಿನ ಸಿಖ್‌ ಧ್ವಜ ಹಾರಿಸಿದವರಿಗೆ ಕೋಟಿ ರೂ ಬಹುಮಾನ: ಪತ್ರ ವೈರಲ್​

    VIDEO: ದೆಹಲಿ ಹಿಂಸಾಚಾರ: ನಟ ದೀಪ್​ ಸಿಧು ಎಸ್ಕೇಪ್​, ಎಫ್​ಐಆರ್​ ದಾಖಲು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts