ಸಂಸತ್ತಿನಲ್ಲಿ ನಡೆಯಲಿರುವ ರಾಷ್ಟ್ರಪತಿ ಭಾಷಣಕ್ಕೆ ಬಹಿಷ್ಕಾರ: 16 ಪಕ್ಷಗಳು ಸನ್ನದ್ಧ!

president
Published on

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ನಾಳೆಯಿಂದ (ಜನವರಿ 29) ಆರಂಭಗೊಳ್ಳಲಿದೆ. ಇದರ ಹಿನ್ನೆಲೆಯಲ್ಲಿ ಮೊದಲ ದಿನ ರಾಷ್ಟ್ರಪತಿಯವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆದರೆ ಈ ಭಾಷಣಕ್ಕೆ ಬಹಿಷ್ಕಾರ ಹಾಕಲು 16 ವಿರೋಧ ಪಕ್ಷಗಳು ಸಿದ್ಧವಾಗಿವೆ.

ಈ ಕುರಿತು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಮಾಹಿತಿ ನೀಡಿದ್ದಾರೆ. ಬಿಜೆಟ್​ ಅಧಿವೇಶನದ ಆರಂಭದಲ್ಲಿ ನಾಳೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್​​ ಜಂಟಿ ಸದನವನ್ನ ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಕಾಂಗ್ರೆಸ್​ ಸೇರಿದಂತೆ 16 ವಿಪಕ್ಷಗಳು ಕಲಾಪ ಬಹಿಷ್ಕರಿಸಲು ತೀರ್ಮಾನಿಸಿವೆ ಎಂದು ಅವರು ಹೇಳಿದ್ದಾರೆ.

ಪ್ರತಿಪಕ್ಷಗಳಿಲ್ಲದೆ ಕೃಷಿ ಮಸೂದೆಗಳನ್ನು ಸದನದಲ್ಲಿ ಬಲವಂತವಾಗಿ ಅಂಗೀಕರಿಸಲಾಗಿದೆ. ರೈತರಿಗೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ ಈ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಅವರು ಹೇಳಿದರು.

ಬಜೆಟ್ ಮಂಡನೆಗೆ ಮುನ್ನ ಜನವರಿ 29ರಂದು ಸಂಸತ್ತಿನಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಜ್ಯ ಸಭೆ ಹಾಗೂ ಲೋಕಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಫೆಬ್ರುವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net