More

    ಸ್ಥಿತಿವಂತರಾದರೂ ಬಿಪಿಎಲ್​ ಕಾರ್ಡ್​ ಪಡೆದಿರುವಿರಾ? ಕ್ರಿಮಿನಲ್​ ಕೇಸ್​ ಎದುರಿಸಲು ಸಿದ್ಧರಾಗಿ

    ಬೆಂಗಳೂರು: ಬಡತನ ರೇಖೆಗಿಂತ ಕಡಿಮೆ ಇರುವವರಿಗಾಗಿ (ಬಿಪಿಎಲ್​) ಆಹಾರ ಧಾನ್ಯಗಳನ್ನು ಪೂರೈಕೆ ಮಾಡುವ ಉದ್ದೇಶದಿಂದ ಶುರು ಮಾಡಿರುವ ಬಿಪಿಎಲ್​ ಕಾರ್ಡ್​ ದುರ್ಬಳಕೆ ಹೆಚ್ಚಾಗುತ್ತಿದೆ. ಒಳ್ಳೆಯ ಉದ್ಯೋಗ, ಉತ್ತಮ ಸಂಬಳ ಅಷ್ಟೇ ಏಕೆ ಮೂರ್ನಾಲ್ಕು ಮನೆಗಳ ಮಾಲೀಕರಾದವರು ಕೂಡ ಈ ಕಾರ್ಡ್​ ಉಪಯೋಗ ಮಾಡಿಕೊಂಡು ಬಡವರ ಆಹಾರ ದೋಚುತ್ತಿದ್ದಾರೆ.

    ಇದೀಗ ಇಂಥ “ಖದೀಮ”ರ ಮೇಲೆ ಸರ್ಕಾರ ಕಣ್ಣಿಟ್ಟಿದ್ದು, ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್​ ಕೇಸ್​ ದಾಖಲು ಮಾಡುವುದಾಗಿ ಎಚ್ಚರಿಕೆ ನೀಡಿದೆ. ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಸಂಸ್ಥೆಯ ಅಧಿಕಾರಿ-ನೌಕರರು ಹಾಗೂ ಅವರ ಅವಲಂಬಿತ ಕುಟುಂಬ ವರ್ಗದವರು ಬಿಪಿಎಲ್​ ಕಾರ್ಡ್​ ಪಡೆದುಕೊಂಡಿದ್ದರೆ ಕೂಡಲೇ ತಮ್ಮ ಪಡಿತರ ಚೀಟಿಯನ್ನು ಆಹಾರ ಇಲಾಖೆಗೆ ಸಲ್ಲಿಸಿ ರದ್ದುಪಡಿಸಿಕೊಳ್ಳಬೇಕು, ಇಲ್ಲದಿದ್ದರೆ ಕ್ರಿಮಿನಲ್​ ಕೇಸ್​ ಎದುರಿಸಬೇಕಾಗುತ್ತದೆ ಎಂದು ಕಲಬುರಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ದಯಾನಂದ ಪಾಟೀಲ ಹೇಳಿದ್ದಾರೆ.

    ಆರ್ಥಿಕವಾಗಿ ಸದೃಢವಾಗಿರುವವರು ಬಿ.ಪಿ.ಎಲ್. ಪಡಿತರ ಚೀಟಿ ಪಡೆದಿರುವುದು ಗಮನಕ್ಕೆ ಬಂದಿದೆ. ಅಂಥವರ ವಿರುದ್ಧ ಶಿಸ್ತು ಕ್ರಮ ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡಿ ಸರ್ಕಾರಕ್ಕೆ ಉಂಟಾಗಿರುವ ನಷ್ಟವನ್ನು ವಸೂಲು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
    ರೇಷನ್​ ಅಂಗಡಿಗಳಲ್ಲಿ ಆಹಾರ ಧಾನ್ಯಗಳನ್ನು ಪಡೆಯುವ ಕಾರಣ, ಇಂಥವರನ್ನು ಗುರುತಿಸಲು ಹೆಚ್ಚು ಹೊತ್ತು ಬೇಕಾಗುವುದಿಲ್ಲ. ಒಂದು ವೇಳೆ ಕ್ರಿಮಿನಲ್​ ಕೇಸ್​ ದಾಖಲಾದರೆ ಉದ್ಯೋಗವನ್ನೂ ಕಳೆದುಕೊಳ್ಳಬೇಕಾದೀತು!

    ಬಿ.ಪಿ.ಎಲ್. ಪಡಿತರ ಚೀಟಿ ಪಡೆಯಲು ಯಾರು ಅರ್ಹರಲ್ಲ?

    ವೇತನ ಎಷ್ಟೇ ಇದ್ದರೂ ಎಲ್ಲಾ ಕಾಯಂ ನೌಕರರು ಅಂದರೆ, ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿಗಳು, ನಿಗಮಗಳು, ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ/ಸೇವಾ ತೆರಿಗೆ/ವ್ಯಾಟ್/ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು. ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ (ಏಳುವರೆ ಎಕರೆ) ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು.

    ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬಗಳನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನವನ್ನು ಹೊಂದಿರುವ ಎಲ್ಲಾ ಕುಟುಂಬಗಳು. ಕುಟುಂಬದ ವಾರ್ಷಿಕ ಆದಾಯವು 1.20 ಲಕ್ಷ ರೂ. ಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು ಬಿಪಿಎಲ್​ ಕಾರ್ಡ್​ ಪಡೆಯಲು ಅನರ್ಹ ಕುಟುಂಬಗಳಾಗಿರುತ್ತವೆ.

    ಪಾಕ್​ ಜೈಲಿನಲ್ಲಿ 18 ವರ್ಷ ಅಕ್ರಮ ಬಂಧನ: ಭಾರತದ ಮಣ್ಣಿಗೆ ನಮಸ್ಕರಿಸಿ ಪ್ರಾಣಬಿಟ್ಟ ಹಸೀನಾ

    ರೈತರ ಹೆಸರಿನಲ್ಲಿ ಗಣರಾಜ್ಯೋತ್ಸವದಂದು ಹಿಂಸಾಚಾರ: ಸಿಕ್ಕಿಬಿದ್ದ ಸಿಂಗ್​

    ಇತ್ತ ಪತ್ನಿ, ಅತ್ತ ಅಮ್ಮ- ಹಾವು ಮುಂಗುಸಿಯಂತೆ ಇರುವ ಇವರ ನಡುವೆ ಸಿಲುಕಿ ಒದ್ದಾಡುತ್ತಿದ್ದೇನೆ; ಪರಿಹಾರ ಹೇಳಿ ಪ್ಲೀಸ್​…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts