VIDEO: ಸೇನಾ ಅಧಿಕಾರಿಗಳಿದ್ದ ಹೆಲಿಕಾಪ್ಟರ್‌ ಪತನಕ್ಕೆ ಕಾರಣನಾದನೇ ಈ ವ್ಯಕ್ತಿ! ತನಿಖೆಗೆ ಆದೇಶ- ಪ್ರಪಾತದಲ್ಲಿ ಶವಗಳ ರಾಶಿ

1199580
Published on

ಚೆನ್ನೈ: ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ( IAF Mi-17V5) ತಮಿಳುನಾಡಿನ ಊಟಿ ಬಳಿ ಪತನಗೊಂಡಿದೆ. ನೀಲಗಿರಿ ಜಿಲ್ಲೆಯ ಕುನ್ನೂರು ಬಳಿ ಘಟನೆ ನಡೆದಿದೆ. ಸಾಮಾನ್ಯವಾಗಿ ಸೇನಾ ಹೆಲಿಕಾಪ್ಟರ್‌ಗಳು ಪತನಗೊಳ್ಳುವುದು ಅಸಾಧ್ಯ.  ಆದ್ದರಿಂದ ಇದರ ಹಿಂದೆ ಏನಾದರೂ ಕೈವಾಡ ಇದೆಯೇ ಎಂಬ ಬಗ್ಗೆ ಸಂಶಯ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಇದನ್ನು ತನಿಖೆಗೆ ವಹಿಸಿಕೊಡಲಾಗಿದೆ.

ಈ ನಡುವೆಯೇ ಘಟನಾ ಸ್ಥಳದಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿಯೊಬ್ಬ ಓಡಾಡುತ್ತಿದ್ದು, ಅವನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ವೆಂಜಾಬ್‌ ಮೋಹನ್‌ ಎಂಬಾತ ದುರಂತ ನಡೆದ ಸ್ಥಳದ ಸಮೀಪದ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ. ಹೀಗಾಗಿ ಆತನನ್ನು ಸೇನಾ ಪಡೆ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಎರಡು ಹೆಲಿಕಾಪ್ಟರ್‌ಗಳು ಕೊಯಮತ್ತೂರಿನಿಂದ ವೆಲ್ಲಿಂಗ್‌ಟನ್ ಮಿಲಿಟರಿ ಕಾಲೇಜನ್ನು ಪರಿಶೀಲಿಸಲು ಹೊರಟಿದ್ದವು. ಈ ಪೈಕಿ ಒಂದು ಹೆಲಿಕಾಪ್ಟರ್ ಕೂನೂರು ಬಳಿ ಪತನಗೊಂಡಿದೆ. ಪತನಗೊಂಡ ಹೆಲಿಕಾಪ್ಟರ್‌ನಲ್ಲಿ ಸೇನಾ ಮುಖ್ಯಸ್ಥ ವಿಪಿನ್ ರಾವತ್ ಮತ್ತು ಸೇನಾ ಕಮಾಂಡರ್ ನರವಾಣೆ ಕೂಡ ಹಾಗೂ ರಾವತ್‌ ಅವರ ಪತ್ನಿ ಇದ್ದರು ಎಂದು ಹೇಳಲಾಗಿದೆ.

ಈವರೆಗೆ ನಾಲ್ಕು ಶವಗಳು ಸಿಕ್ಕಿವೆ ಎಂದು ಹೇಳಲಾಗುತ್ತಿದ್ದರೂ, ಎಷ್ಟು ಮಂದಿ ಮೃತಪಟ್ಟಿದ್ದಾರೆ ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಪ್ರಪಾತದಲ್ಲಿ ಹೆಣಗಳು ಬಿದ್ದಿದ್ದು, ಅವು ಸುಟ್ಟುಕರಕಲಾಗಿವೆ. ಇನ್ನೂ ಗುರುತಿಸುವುದು ಕಷ್ಟವಾಗಿದೆ. ಹೆಲಿಕಾಪ್ಟರ್ ಪತನವಾದ ಸ್ಥಳದಲ್ಲಿ ಸೇನಾಪಡೆಗಳು ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.

ಅಪಘಾತಕ್ಕೀಡಾದ ಸೇನಾ ಹೆಲಿಕಾಪ್ಟರ್‌ನಲ್ಲಿ ಸುಮಾರು 14 ಜನರು ಪ್ರಯಾಣಿಸುತ್ತಿದ್ದರು. ಇವರ ಪೈಕಿ ಎಷ್ಟು ಜನರಿಗೆ ಯಾವ ರೀತಿಯ ಅನಾಹುತ ಸಂಭವಿಸಿದೆ ಎಂಬ ಬಗ್ಗೆ ಇನ್ನಷ್ಟೇ ತಿಳಿಯಬೇಕಿದೆ. ಬಿಪಿನ್‌ ರಾವತ್‌ ಅವರಿಗೂ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ‌ ಈ ನಡುವೆ ಅಪಘಾತಕ್ಕೆ ನಿಖರ ಕಾರಣ ತಿಳಿದಿಲ್ಲ. ಈ ಹಿನ್ನೆಲೆಯಲ್ಲಿ, ಈ ಘಟನೆಯ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇಲ್ಲಿದೆ ನೋಡಿ ರಕ್ಷಣಾ ಕಾರ್ಯಾಚರಣೆಯ ವಿಡಿಯೋ:

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net