More

    ತುಂಗಭದ್ರಾ ನದಿಯ ಸೇತುವೆ ದಿಢೀರ್​ ಕುಸಿತ: ನಸುಕಿನಲ್ಲಿ ತಪ್ಪಿದ ಭಾರಿ ಅನಾಹುತ- ಲಾರು, ಕಾರು ಜಖಂ

    ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿ ಮದಗಲಟ್ಟಿ ಸಮೀಪದ ತುಂಗಭದ್ರಾ ನದಿಗೆ ಕಟ್ಟಲಾಗಿರುವ ಸೇತುವೆ ಇಂದು ನಸುಕಿನಲ್ಲಿಯೇ ಕುಸಿದು ಬಿದ್ದಿದೆ. ಅದೃಷ್ಟವಶಾತ್​ ಈ ಸಮಯದಲ್ಲಿ ಹೆಚ್ಚಿನ ಸಂಚಾರ ಇಲ್ಲದ ಹಿನ್ನೆಲೆಯಲ್ಲಿ ಪ್ರಾಣಹಾನಿ ಸಂಭವಿಸಿಲ್ಲ.

    ಆದರೆ ಇದೇ ವೇಳೆ ಸೇತುವೆ ಮೇಲೆ ಪ್ರಯಾಣಿಸುತ್ತಿದ್ದ ಲಾರಿ ಮತ್ತು ಕಾರು ಜಖಂಗೊಂಡಿವೆ.

    ಕೆಲ ದಿನಗಳಿಂದ ಬಳ್ಳಾರಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಮಳೆಯಿಂದಾಗಿ ತುಂಗಭದ್ರಾ ನದಿಯ ನೀರಿನ ಮಟ್ಟವೂ ಹೆಚ್ಚಾಗಿದೆ. ಈ ಸಂದರ್ಭದಲ್ಲಿಯೇ ಸೇತುವೆ ಕುಸಿದಿದೆ. ಘಟನೆಯಿಂದಾಗಿ ಈ ಮಾರ್ಗದ ಸಂಚಾರದಲ್ಲಿ ವ್ಯತ್ಯಯವಾಗಿದೆ.

    ಇದನ್ನೂ ಓದಿ: ಶುಕ್ರವಾರ ಕರ್ನಾಟಕ ಬಂದ್​ ಮಾಡಲ್ಲ ಎಂದ ರೈತ ಸಂಘಟನೆ: ಆದರೆ…

    ಇದು ಹಡಗಲಿ ಮತ್ತು ಗದಗ ಮಾರ್ಗ ಸಂಪರ್ಕಸುವ ರಸ್ತೆಯಾಗಿದೆ. ಇದನ್ನು ನಿರ್ಮಿಸಿ 18 ವರ್ಷಗಳಾಗಿವೆಯಷ್ಟೇ. 2002ರಲ್ಲಿ ನಿರ್ಮಾಣಗೊಂಡಿತ್ತು. ಸೇತುವೆ ಸಾಕಷ್ಟು ಶಿಥಿಲಾವಸ್ಥೆಯಲ್ಲಿದ್ದರೂ ಲೋಕೋಪಯೋಗಿ ಇಲಾಖೆ ಇತ್ತ ಗಮನಹರಿಸಿಲ್ಲ ಎನ್ನಲಾಗಿದೆ. ಸೇತುವೆಯ ನವೀಕರಣದ ಬಗ್ಗೆ ಅನೇಕ ಸಲ ದೂರು ಸಲ್ಲಿಸಿದ್ದರು ಸಹ ಅಧಿಕಾರಿಗಳು ಗಮನ ಹರಿಸದೇ ಇದ್ದುದು ಇಷ್ಟು ಅನಾಹುತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

    ಸೇತುವೆ ನಸುಕಿನಲ್ಲಿ ಕುಸಿದಿರುವ ಹಿನ್ನೆಲೆಯಲ್ಲಿ ಭಾರಿ ಅನಾಹುತ ತಪ್ಪಿದೆ. ಒಂದು ವೇಳೆ ಸಂಚಾರ ಹೆಚ್ಚಿರುವ ಸಂದರ್ಭದಲ್ಲಿ ಈ ರೀತಿಯಾಗಿದ್ದರೆ ಗತಿಯೇನು? ಇದಕ್ಕೆ ಯಾರು ಹೊಣೆಯಾಗುತ್ತಿದ್ದರು ಎಂದು ಸಾರ್ವಜನಿಕರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸ್ಥಳಕ್ಕೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.

    ನಾಲ್ಕನೆಯ ಗಂಡನದ್ದೂ ರಕ್ತಸಿಕ್ತ ದೇಹ ನೋಡಲಾರೆ: ಶಾಂತಿ ಸ್ಥಾಪಿಸಿ… ತುಂಬು ಗರ್ಭಿಣಿಯ ಗೋಳಾಟ

    ಎಸ್​ಬಿಐ ಸಾಲಗಾರರಿಗೆ ಗುಡ್​ನ್ಯೂಸ್​: ಇಎಂಐಯಿಂದ ಎರಡು ವರ್ಷ ಮುಕ್ತಿ- ಷರತ್ತುಗಳು ಇಲ್ಲಿವೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts